Connect with us

ಶಿಕ್ಷಕರ ಧ್ವನಿಯಾದ ನಾರಾಯಣಸ್ವಾಮಿ | ಮಾಜಿ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ

mlc election

ಮುಖ್ಯ ಸುದ್ದಿ

ಶಿಕ್ಷಕರ ಧ್ವನಿಯಾದ ನಾರಾಯಣಸ್ವಾಮಿ | ಮಾಜಿ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ

CHITRADURGA NEWS | 30 MAY 2024
ಚಿತ್ರದುರ್ಗ: ಆಗ್ನೇಯ ಪದವೀಧರ ಶಿಕ್ಷಕರ ಕ್ಷೇತ್ರದ ಮತದಾನಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಅಭ್ಯರ್ಥಿಗಳು ಪ್ರಚಾರ ಕಾರ್ಯಕ್ಕೆ ಮತ್ತಷ್ಟು ಬಿರುಸು ನೀಡಿದ್ದಾರೆ. ಇವರಿಗೆ ಪಕ್ಷದ ನಾಯಕರು ಸಾಥ್‌ ನೀಡಿದ್ದಾರೆ.

ನಗರದಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರ ಮಾಜಿ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ,ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಮಾಜಿ ಸದಸ್ಯ ಅರುಣ್ ಷಹಾಪುರ್‌ ಶಾಲೆಗಳಿಗೆ ತೆರಳಿ ಮತಯಾಚನೆ ಮಾಡಿದರು.

ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾತನಾಡಿದ ಮಾಜಿ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ, ‘ನಾರಾಯಣಸ್ವಾಮಿ ಅವರು ವಿಧಾನ ಪರಿಷತ್‌ನಲ್ಲಿ ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಮುಂದೆಯೂ ಸಹಾ ಮಾಡಲಿದ್ದಾರೆ. ಕೇಂದ್ರ ಸರ್ಕಾರ ದೇಶದಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿ ಮಾಡಲು ಮುಂದಾಗಿದೆ. ಆದರೆ ರಾಜ್ಯ ಸರ್ಕಾರ ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ’ ಎಂದು ದೂರಿದರು.

ಕ್ಲಿಕ್ ಮಾಡಿ ಓದಿ: ಮುರುಘಾಮಠದಿಂದ ಸಸಿ ನೆಡುವ ಸಪ್ತಾಹಕ್ಕೆ ಚಾಲನೆ | ಸಂಸ್ಥೆ ಮುಖ್ಯಸ್ಥರಿಗೆ ಸಸಿಗಳ ಪೋಷಣೆ ಹೊಣೆ

‘ನಾರಾಯಣಸ್ವಾಮಿಯವರನ್ನು ಆಯ್ಕೆ ಮಾಡುವುದರ ಮೂಲಕ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ನೀವುಗಳು ಅವರನ್ನು ಆಯ್ಕೆ ಮಾಡಿದೆ ನಿಮಗೆ ಶಕ್ತಿ ಬರಲಿದೆ’ ಎಂದು ತಿಳಿಸಿದರು.

‘ಕಳೆದ ಮೂರು ಬಾರಿ ವಿಧಾನಪರಿಷತ್‌ ಸದಸ್ಯರಾಗಿ ಶಿಕ್ಷಕರಿಗಾಗಿ ಮಾಡಿದ ಹೋರಾಟಗಳು, ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ದಿ ಕಾರ್ಯಗಳು, ಕಾರ್ಯಾದೇಶಗಳು, ಪರಿಹಾರಗಳು ಚುನಾವಣೆಯಲ್ಲಿ ಶ್ರೀರಕ್ಷೆಯಾಗಲಿವೆ. ಕಾಂಗ್ರೆಸ್‌ನವರು ಎಷ್ಟೇ ಕುತಂತ್ರ ಮಾಡಿ ಆಸೆ ಅಮಿಷ ಒಡ್ಡಿದರೂ ಸಹ ಮತದಾರರು ನನ್ನ ಕೈ ಬಿಡುವುದಿಲ್ಲ ’ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನಗರಸಭಾ ಸದಸ್ಯರಾದ ಹರೀಶ್‌, ಕೃಷ್ಣಮೂರ್ತಿ, ಪರಶುರಾಮ್, ಶೀಲ, ಬಿಜೆಪಿ ವಕ್ತಾರರಾದ ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್‌, ಜಯ್ಯಣ್ಣ, ನವೀನ್ ಚಾಲುಕ್ಯ, ತಿಪ್ಪೇಸ್ವಾಮಿ, ರಂಗಣ್ಣ, ಬಾಷಾ ಭಾಗವಹಿಸಿದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version