ಮುಖ್ಯ ಸುದ್ದಿ
ಇಳಿಕೆಯತ್ತ ಮತಗಳ ಅಂತರ | ಕೊಂಚ ನಿಟ್ಟುಸಿರು ಬಿಟ್ಟ ಕಾಂಗ್ರೆಸ್

CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಸಾಗಿದ್ದು 12ನೇ ಸುತ್ತಿನಲ್ಲಿ ಬಿಜೆಪಿ ವೇಗಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಪ್ರಾರಂಭದಿಂದ ತೀವ್ರ ಅಂತರ ಕಾಯ್ದುಕೊಂಡಿದ್ದ ಬಿಜೆಪಿ ಮತಗಳಿಕೆ ಇದೀಗ ಕೊಂಚ ಇಳಿಕೆ ಕಂಡಿದೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 4,18,242ಮತಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 3,91,664ಮತ ಪಡೆದಿದ್ದಾರೆ. 26,578ಮತಗಳ ಮುನ್ನಡೆಯನ್ನು ಬಿಜೆಪಿ ಸಾಧಿಸಿದೆ.
ಮೊದಲ ಸುತ್ತಿನಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಬಳಿಕ ಎರಡು, ಮೂರು, ನಾಲ್ಕು, ಐದು, ಆರು, ಏಳು, ಎಂಟು, ಒಂಭತ್ತು, ಹತ್ತು, ಹನ್ನೊಂದು, ಹನ್ನೆರಡನೇ ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಸುತ್ತಿನಿಂದ ಸುತ್ತಿಗೆ ಅಂತರವನ್ನು ಹೆಚ್ಚಿಸಿಕೊಳ್ಳುತ್ತಿದ್ದರು. ಆದರೆ ಹನ್ನರಡನೇ ಸುತ್ತು ಕೊಂಚ ತಡೆ ನೀಡಿದೆ. 26,578 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.
ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದೆ.
