CHITRADURGA NEWS | 22 MAY 2026
ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಬಲ್ಲಾಳಸಮುದ್ರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಮಿನಿ ಸೌಧದ ಆವರಣದಲ್ಲಿ ಈಚೆಗೆ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ: ತರಾಸು ರಂಗಮಂದಿರಕ್ಕೆ ಹೊಸ ಲುಕ್ | ಡಿಸಿ ವೆಂಕಟೇಶ್ ವೀಕ್ಷಣೆ | ಶೀಘ್ರ ಉದ್ಘಾಟನೆ
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂಜಾ ಅವರು ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಅದನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ವಿವರವಾದ ಮಾಹಿತಿ ನೀಡಿದರು.
ಡೆಂಗ್ಯೂ ನಿಯಂತ್ರಣಕ್ಕಾಗಿ ಸಮುದಾಯದ ಸಹಭಾಗಿತ್ವ ಪರಿಶೀಲಿಸಿ, ಸ್ವಚ್ಛಗೊಳಿಸಿ ಹಾಗೂ ಮುಚ್ಚಿಡಿ ಎಂಬ ಘೋಷವಾಕ್ಯದೊಂದಿಗೆ ಪ್ರತಿಯೊಬ್ಬರೂ ತಮ್ಮ ಮನೆ ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.
ನೀರು ಸಂಗ್ರಹಿಸುವ ತೊಟ್ಟಿ ಮತ್ತು ಡ್ರಮ್‍ಗಳನ್ನು ಕಡ್ಡಾಯವಾಗಿ ಮುಚ್ಚಿಡುವ ಮೂಲಕ ಸೊಳ್ಳೆಗಳ ಉತ್ಪತ್ತಿಯನ್ನು ತಡೆಯಬೇಕು. ಪ್ರಸ್ತುತ ವಿವಿಧ ಇಲಾಖೆಗಳ ಸಮನ್ವಯತೆ ಮತ್ತು ಸಾರ್ವಜನಿಕರ ಸಹಯೋಗದ ಪರಿಣಾಮವಾಗಿ ಡೆಂಗ್ಯೂ ಪ್ರಕರಣಗಳ ಪ್ರಮಾಣ ಇಳಿಕೆಯ ಹಾದಿಯಲ್ಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಬಾಲ್ಯವಿವಾಹ ಕಂಡು ಬಂದರೆ ನಿರ್ದಾಕ್ಷಿಣ್ಯ ಕಾನೂನು ಕ್ರಮ | ಜಿಲ್ಲಾಧಿಕಾರಿ ವೆಂಕಟೇಶ್
ಈ ಜಾಗೃತಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸ್ವಾಮಿ, ಲಿಂಗರಾಜು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಲಲಿತಮ್ಮ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ನಿರ್ಮಲ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
