CHITRADURGA NEWS | 11 DECEMBER 2025
ಚಿತ್ರದುರ್ಗ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನುಜಿಲ್ಲೆಯಲ್ಲಿ ಇದೇ ಡಿ. 21 ರಿಂದ 24 ವರೆಗೆ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ನುಲೇನೂರು ಶಂಕರಪ್ಪ ಪ್ರತಿಷ್ಠಾನದಿಂದ ಹಸಿರು ಪ್ರಶಸ್ತಿ ಪ್ರದಾನ
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಒಟ್ಟು 1169 ತಂಡಗಳನ್ನು ರಚಿಸಿಕೊಂಡು ಕಳೆದ ಬಾರಿ ನಡೆಸಿದ ಲಸಿಕಾ ಕೇಂದ್ರಗಳಲ್ಲಿ ಈ ಬಾರಿಯೂ ಸಹ ಎರಡು ಹನಿಗಳ ಪೋಲಿಯೋ ಲಸಿಕೆಯನ್ನು ಹಾಕಲಾಗುವುದು.
ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ 239 ಮೇಲ್ವಿಚಾರಕರನ್ನು ನೇಮಿಸಲಾಗಿದೆ.
ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೆ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ ಪುನಃ ಇದೇ ಡಿ.21 ರಿಂದ 24 ರವರೆಗೆ ಪೋಲಿಯೋ ಹಾಕಿಸಲು 1,26,361 ಮಕ್ಕಳನ್ನು ಗುರುತಿಸಲಾಗಿದೆ.
ಇದನ್ನೂ ಓದಿ: ಮುರುಘಾ ಮಠಕ್ಕೆ ಶಕ್ತಿಯಾಗಿದ್ದವರು ಎಸ್.ನಿಜಲಿಂಗಪ್ಪ | ಡಾ.ಬಸವಕುಮಾರ ಸ್ವಾಮೀಜಿ
ಸಾರ್ವಜನಿಕರು, ಸರ್ಕಾರೇತರ ಸಂಘ-ಸಂಸ್ಥೆಗಳು, ಧಾರ್ಮಿಕ ಮುಖಂಡರು, ಚುನಾಯಿತ ಪ್ರತಿನಿಧಿಗಳು ಹಾಗೂ ಇತರೆ ಅಧಿಕಾರಿ ವರ್ಗದವರು ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮನವಿ ಮಾಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
