Connect with us

    ಜಿಲ್ಲೆಯ ಸಂಸ್ಥಾನಗಳ ಬಗ್ಗೆ ರಾಷ್ಟ್ರೀಯ ವಿಚಾರ ಸಂಕಿರಣ

    ಮುಖ್ಯ ಸುದ್ದಿ

    ಜಿಲ್ಲೆಯ ಸಂಸ್ಥಾನಗಳ ಬಗ್ಗೆ ರಾಷ್ಟ್ರೀಯ ವಿಚಾರ ಸಂಕಿರಣ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 05 MARCH 2025

    ಚಿತ್ರದುರ್ಗ: ಜಿಲ್ಲೆಯ ಸಂಸ್ಥಾನಗಳ ಬಗ್ಗೆ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಾ.6 ಮತ್ತು 7 ರಂದು ನಗರದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ)ನಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜು ಪ್ರಾಂಶುಪಾಲರಾದ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ ತಿಳಿಸಿದರು.

    Also Read: ಅಡಿಕೆ ತೋಟದಲ್ಲಿದ್ದ ಕುರಿಗಳ ಮೇಲೆ ಚಿರತೆ ದಾಳಿ | ಹತ್ತು ಕುರಿ ಸಾವು

    ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.6 ರಂದು ಬೆಳಿಗ್ಗೆ 10.30 ಕ್ಕೆ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

    ಡಾ.ಬಿ.ಸುರೇಶ ಮಾತನಾಡಿ, ಪಾಳೆಯಗಾರರು ಆಳಿದ ಚಿತ್ರದುರ್ಗ ಜಿಲ್ಲೆಯಲ್ಲಿ ದೇವಾಲಯ, ಶಾಸನಗಳು ಇವೆ. ಜಿಲ್ಲೆಯ ಸಾಂಸ್ಕøತಿಕ ಮತ್ತು ಐತಿಹಾಸಿಕ ವಿಚಾರಗಳ ಮೇಲೆ ಬೆಳಕು ಚೆಲ್ಲುವುದು ವಿಚಾರ ಸಂಕಿರಣದ ಉದ್ದೇಶ ಎಂದು ತಿಳಿಸಿದರು.

    ಐಕ್ಯೂಎಸಿ ಸಂಚಾಲಕಿ ತಾರಿಣಿ ಶುಭದಾಯಿನಿ ಮಾತನಾಡಿ, ಪಾಳೆಯಗಾರರು ಆಳಿದ ಚಿತ್ರದುರ್ಗಕ್ಕೆ ತನ್ನದೆ ಆತ ಗತ ವೈಭವವಿದೆ. ವಿಚಾರ ಸಂಕಿರಣದಲ್ಲಿ ಪ್ರಬಂಧ ಮಂಡಿಸಲು ಸಾರ್ವಜನಿಕರಿಗೂ ಮುಕ್ತ ಅವಕಾಶ ಕೊಟ್ಟಿದ್ದೇವೆಂದರು.

    Also Read: ಮೂವರ ಸಾವು | ಕಲ್ಲಂಗಡಿ ತುಂಬಿದ್ದ ಲಾರಿಗೆ ಮತ್ತೆರಡು ಲಾರಿ ಡಿಕ್ಕಿ | ಸರಣಿ ಅಪಘಾತ 

    ಸ್ನಾತಕೋತ್ತರ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ಆರ್.ಶಿವಪ್ಪ ಮಾತನಾಡಿ ನೆರೆಯ ಆಂಧ್ರ, ತಮಿಳುನಾಡಿನಿಂದಲೂ ವಿಚಾರ ಸಂಕಿರಣಕ್ಕೆ ಆಗಮಿಸುವರು. ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ವಿಚಾರ ಸಂಕಿರಣದಲ್ಲಿ ಚಿತ್ರದುರ್ಗದ ಇತಿಹಾಸ ಕುರಿತು ಮಾತನಾಡುವರು. 300 ರಿಂದ 500 ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.

    ಸುದ್ದಿಗೊಷ್ಟಿಯಲ್ಲಿ ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ.ಆರ್.ಗಂಗಾಧರ, ಶಿವಪ್ರಸಾದ್, ಶ್ರೀನಿವಾಸ್ ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top