CHITRADURGA NEWS | 23 JANUARY 2026
ಚಿತ್ರದುರ್ಗ: ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಇದೇ ಜ.25ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಸಭಾ ಭವನದಲ್ಲಿ ‘ರಾಷ್ಟ್ರೀಯ ಮತದಾರರ ದಿನಾಚರಣೆ” ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: PMFME ಯೋಜನೆಯಡಿ ಫಲಾನುಭವಿಗಳಿಗೆ ಸಾಮಥ್ರ್ಯ ಅಭಿವೃದ್ದಿ ತರಬೇತಿ
ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ರೋಣ ವಾಸುದೇವ ಉದ್ಘಾಟನೆ ನೆರವೇರಿಸುವರು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಭಾಗವಹಿಸುವರು.
“ನನ್ನ ಭಾರತ ನನ್ನ ಮತ”, ಭಾರತೀಯ ಪ್ರಜಾಪ್ರಭುತ್ವದ ಹೃದಯದಲ್ಲಿ ಭಾರತೀಯ ನಾಗರಿಕ ಎಂಬ ಘೋಷವಾಕ್ಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹೊಸ ಮತದಾರರಿಗೆ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಿಸಲಾಗುವುದು.
ಇದನ್ನೂ ಓದಿ: ರೈಲ್ವೆ ಸಮಸ್ಯೆಗಳಿಗೆ ಶೀಘ್ರ ಮುಕ್ತಿ | ಕೆ.ಸಿ.ವೀರೇಂದ್ರ (ಪಪ್ಪಿ)
ಇದೇ ಸಂದರ್ಭದಲ್ಲಿ ಮತದಾರರ ಪ್ರತಿಜ್ಞಾವಿಧಿ ಬೋಧನೆ ಹಾಗೂ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
