
CHITRADURGA NEWS | 20 NOVEMBER 2024
ಚಿತ್ರದುರ್ಗ: ನಗರದ ವಿದ್ಯಾ ವಿಕಾಸ ಶಾಲೆಯ 10ನೇ ತಗರತಿ ವಿದ್ಯಾರ್ಥಿ ನೌಮನ್ ಅಹಮ್ಮದ್ ಷರೀಫ್ ಅಥ್ಲೆಟಿಕ್ಸ್(athletics) ವಿಭಾಗದ ರಾಜ್ಯಮಟ್ಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕ್ಲಿಕ್ ಮಾಡಿ ಓದಿ: ಬೈಕ್ – ಟಾಟಾ ಏಸ್ ನಡುವೆ ಅಪಘಾತ | ಇಬ್ಬರು ಯುವಕರು ಸಾವು
ಕೋಲಾರ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಮಟ್ಟದ 17 ವರ್ಷದ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದು, ನವೆಂಬರ್ 26 ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯಲಿರುವ ರಾಷ್ಟಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿ ಜಮೀಲ್ ಅಹಮ್ಮದ್ ಷರೀಪ್ ತಾಯಿ ಪೌಜಿಯ ಬಾನು ಇವರನ್ನು ಶಾಲೆಯಿಂದ ಸನ್ಮಾನಿಸಲಾಯಿತು.
ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ರಾಜ್ಯದ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ವಿಜಯ್ ಕುಮಾರ್, ಎಸ್.ಎಂ ಪೃಥ್ವೀಶ, ವ್ಯವಸ್ಥಾಪಕ ನಿರ್ದೇಶಕರು ಪಿ.ಸಿ.ಸುನಿತಾ, ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ.ಎನ್.ಜಿ, ಐಸಿಎಸ್‌ಇ ಪ್ರಿನ್ಸಿಪಾಲರಾದ ಬಸವರಾಜಯ್ಯ, ಅವಿನಾಶ್ ಅಭಿನಂದಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
