
CHITRADURGA NEWS | 26 JULY 2024
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯಕ್ಕೆ 2025-26ನೇ ಸಾಲಿನ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: TRAINING; ಸೂರ್ಯಕಾಂತಿ ಬೆಳೆ ಚೆನ್ನಾಗಿ ಬೆಳೆಯಲು ತರಬೇತಿ

ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಯ 5ನೇ ತರಗತಿ ಮಕ್ಕಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು 2013ರ ಜೂನ್ 1 ರಿಂದ 2015ರ ಜುಲೈ 31ರೊಳಗೆ ಜನಿಸಿರಬೇಕು. 3 ಮತ್ತು 4ನೇ ತರಗತಿ ಉತ್ತೀರ್ಣರಾಗಿರಬೇಕು. 2024-25 ರಲ್ಲಿ ವ್ಯಾಸಂಗ ಮಾಡುತ್ತಿದ್ದು, ಈ ಶೈಕ್ಷಣಿಕ ವರ್ಷವನ್ನು ಸಂಪೂರ್ಣವಾಗಿ ಪೂರೈಸಿರಬೇಕು.
ಶಾಲೆಯ ಕನಿಷ್ಠ ಶೇ.75ರಷ್ಟು ಸೀಟುಗಳನ್ನು ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಹಾಗೂ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಮೀಸಲಾಗಿರುತ್ತವೆ. ಕನಿಷ್ಟ 1/3 ರಷ್ಟು ಸೀಟುಗಳನ್ನು ಹೆಣ್ಣುಮಕ್ಕಳಿಗೆ ಮೀಸಲಿಡಲಾಗಿದೆ.
ಇದನ್ನೂ ಓದಿ: Hospitals; ನೊಂದಣಿ ಇಲ್ಲದ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ಧಾಕ್ಷ್ಯಣ್ಯ ಕ್ರಮ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ
ಮೀಸಲಾತಿ ಕೋಟಾದಲ್ಲಿ ಆಯ್ಕೆಯಾದ ಎಸ್.ಸಿ, ಎಸ್.ಟಿ, ಒಬಿಸಿ, ಇಡಬ್ಲ್ಯೂಎಸ್ ಮತ್ತು ಸಾಮಾನ್ಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ತೃತೀಯ ಲಿಂಗಿಗಳು, ನಗರ, ಗ್ರಾಮೀಣ ಪ್ರದೇಶದ ಮೀಸಲಾತಿ ಬಯಸುವವರು ಕೇಂದ್ರ ಸರ್ಕಾರ ನಿಗದಿ ಪಡಿಸಿದ ಪ್ರಮಾಣ ಪತ್ರಗಳನ್ನು ದಾಖಲಾತಿ ಪರಿಶೀಲನೆ ಸಂದರ್ಭದಲಿ ಸಲ್ಲಿಸಬೇಕು.
ಆಸಕ್ತ ಅಭ್ಯರ್ಥಿಗಳು https://cbseitms.rcll.gov.in/


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
