
ಚಿತ್ರದುರ್ಗನ್ಯೂಸ್.ಕಾಂ
ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ದಿನಾಂಕ ಘೋಷಣೆಯಾಗಿದ್ದು, ಪರೀಕ್ಷೆಗೆ ಇನ್ನೂ ಕೆಲ ದಿನಗಳು ಮಾತ್ರ ಬಾಕಿ ಉಳಿದಿವೆ.
ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯ 2024-25ನೇ ಸಾಲಿಗೆ ಜನವರಿ 20 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಚಿತ್ರದುರ್ಗ, ಹಿರಿಯೂರು, ಮೊಳಕಾಲ್ಮುರು, ಹೊಸದುರ್ಗ, ಹೊಳಲ್ಕೆರೆ ಹಾಗೂ ಚಳ್ಳಕೆರೆಯ ಪರೀಕ್ಷಾ ಕೇಂದ್ರದಲ್ಲಿ ಅಂದಯ ಬೆಳಿಗ್ಗೆ 11 ಗಂಟೆಯಿಂದ ಪರೀಕ್ಷೆ ಪ್ರಾರಂಭವಾಗಲಿದೆ.

ಇದನ್ನೂ ಓದಿ: ಐವರ ಅಸ್ಥಿಪಂಜರ ಪತ್ತೆ ಪ್ರಕರಣ | ವಿಳಂಬವಾಯ್ತಾ ಮರಣೋತ್ತರ ಪರೀಕ್ಷೆ ವರದಿ
ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರು https://Cbseitms.rcil.gov.in/nvs/AdminCard?Aspxautodetectcookiesupport=1 ವೆಬ್‌ಸೈಟ್‌ನಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಬಳಿಕ ಪ್ರವೇಶ ಪತ್ರದಲ್ಲಿ ನಮೂದಿಸಿದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕು ಎಂದು ಹಿರಿಯೂರು ತಾಲ್ಲೂಕು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ ಪ್ರಾಂಶುಪಾಲರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
