CHITRADURGA NEWS | 26 JULY 2026
ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90 ಹಾಗೂ ಬಿ.ಎ, ಬಿ.ಕಾಂ, ಬಿಸಿಎ, ಬಿಎಸ್‍ಡಬ್ಲ್ಯೂ, ಇಂಜಿನಿಯರಿಂಗ್, ಎಂ.ಬಿ.ಬಿ.ಎಸ್ ಇತರೆ ಪದವಿ ಪರೀಕ್ಷೆಯಲ್ಲಿ ಶೇ.75% ಕ್ಕಿಂತ ಹೆಚ್ಚು ಅಂಕಗಳಿಸಿದ ಮತ್ತು ಪಿಹೆಚ್.ಡಿ ಪದವಿ, ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಯಲ್ಲಿ ಆಯ್ಕೆಯಾದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತರನ್ನು ಅಭಿನಂದಿಸಲು ಚಿತ್ರದುರ್ಗ ನಾಯಕ ಸಮಾಜ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಹಿರಿಯೂರಿನಲ್ಲಿ ಡಿ.ಸುಧಾಕರ್ ನುಡಿ ನಮನ | ಸಿಎಂ ಡಿಕೆಶಿ, ಸಿದ್ದರಾಮಯ್ಯ ಸೇರಿ ಗಣ್ಯರು ಭಾಗೀ
ಆಸಕ್ತ ಅರ್ಹ ಅಭ್ಯರ್ಥಿಗಳು ಆಗಸ್ಟ್ 15 ರೊಳಗೆ ತಮ್ಮ ಸ್ವ-ವಿವರದ ಅರ್ಜಿಯ ಜೊತೆ ಪೂರಕ ದಾಖಲಾತಿಗಳೊಂದಿಗೆ ಅಂಚೆ ಮೂಲಕ ಅಥವಾ ನೇರವಾಗಿ ನಾಯಕ ಸಮಾಜ ಅಧ್ಯಕ್ಷ ಬಿ.ಕಾಂತರಾಜ್, ತುರುವನೂರು ರಸ್ತೆ ಶ್ರೀ ಅಹೋಬಲ ಟಿವಿಎಸ್ ಪಕ್ಕದ ಆಫೀಸ್ ಚಿತ್ರದುರ್ಗ, ದೂರವಾಣಿ ಸಂಖ್ಯೆ: 8549992611 ಇಲ್ಲಿಗೆ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಡಾ.ಗುಡ್ಡದೇಶ್ವರಪ್ಪ 9448232934, ದರ್ಶನ್ ಇಂಗಳದಾಳ್ 9880137418 ಇವರನ್ನು ಸಂಪರ್ಕಿಸಿ ಎಂದು ಚಿತ್ರದುರ್ಗ ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

