By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
    47 minutes ago
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    4 hours ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    12 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    12 hours ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    23 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    12 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    4 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    11 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    12 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ನಾಯಕನಹಟ್ಟಿ ಜಾತ್ರೆ | ರಾಜಕೀಯ ಮತ್ತು ವೈಯಕ್ತಿಕ ಪ್ರಚಾರದ ಬ್ಯಾನರ್‍ಗಳಿಗೆ ಅವಕಾಶವಿಲ್ಲ | ADC ಕುಮಾರಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಾಯಕನಹಟ್ಟಿ ಜಾತ್ರೆ | ರಾಜಕೀಯ ಮತ್ತು ವೈಯಕ್ತಿಕ ಪ್ರಚಾರದ ಬ್ಯಾನರ್‍ಗಳಿಗೆ ಅವಕಾಶವಿಲ್ಲ | ADC ಕುಮಾರಸ್ವಾಮಿ

News Desk Chitradurga News
Last updated: 20 February 2026 07:08
News Desk Chitradurga News
7 months ago
Share
ನಾಯಕನಹಟ್ಟಿ ಜಾತ್ರೆ | ಪ್ರಗತಿ ಪರಿಶೀಲನಾ ಸಭೆ
ನಾಯಕನಹಟ್ಟಿ ಜಾತ್ರೆ | ಪ್ರಗತಿ ಪರಿಶೀಲನಾ ಸಭೆ
SHARE

CHITRADURGA NEWS | 20 FEBRUARY 2026

ಚಿತ್ರದುರ್ಗ: ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಬೇಕು. ಜಾತ್ರೆಯ ಯಶಸ್ವಿಗಾಗಿ ರಚಿಸಿರುವ ಉಪ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ರಾಜ್ಯ ಬಜೆಟ್ | ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಮೀಸಲಿಡುವಂತೆ DCM ಗೆ ಮನವಿ 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಕ್ಷೇತ್ರದಲ್ಲಿ ಇದೇ ಫೆ.27 ರಿಂದ ಮಾರ್ಚ್ 09 ರವರೆಗೆ ಜಾತ್ರೆ ನಡೆಯಲಿದ್ದು, ಮಾರ್ಚ್ 06ರಂದು ರಥೋತ್ಸವ ನಡೆಯಲಿರುವ ಪ್ರಯುಕ್ತ ಜಾತ್ರೆಯ ಕೆಲಸ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಯಕನಹಟ್ಟಿ ಜಾತ್ರೆಗೆ ಚಿತ್ರದುರ್ಗ ಜಿಲ್ಲೆ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು. ನೀರಿನ ಟ್ಯಾಂಕ್‍ಗಳನ್ನು ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು. 

ನೀರು ಕಲುಷಿತವಾಗಂತೆ ಕ್ರಮವಹಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪಂಚಾಯತ್‍ನ ನೀರು ಪರೀಕ್ಷಾ ಘಟಕದಿಂದ ವರದಿ ಪಡೆದುಕೊಳ್ಳಬೇಕು. ನೀರು ಪೂರೈಕೆಯ ಮೂಲ ಮತ್ತು ವಿತರಣಾ ಕೇಂದ್ರ ಎರಡು ಕಡೆಗಳಲ್ಲಿ ನೀರಿನ ಮಾದರಿಯನ್ನು ಪಡೆದು, ಗುಣಮಟ್ಟ ಪರಿಶೀಲಿಸಬೇಕು. ಕುಡಿಯುವ ನೀರು ಸ್ವಚ್ಛತೆ ಕುರಿತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸವಂತೆ ತಾಕೀತು ಮಾಡಿದರು.

ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಲ್ಲಿ ಫಲ-ಪುಷ್ಪ ಪ್ರದರ್ಶನ | ಈ ಬಾರಿ ಏನೇನು ಇರಲಿದೆ.. ಸಿಇಒ ಕೊಟ್ರು ಮಾಹಿತಿ

ಜಾತ್ರೆಗೆ ಬರುವ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಈಗಾಗಲೇ ಇರುವ ನೀರಿನ ತೊಟ್ಟಿಗಳನ್ನು ತಕ್ಷಣವೇ ದುರಸ್ತಿಗೊಳಿಸಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

ಪ್ರಸ್ತುತ ಬಿಸಿಲಿನ ತಾಪ ಹೆಚ್ಚಾಗುತ್ತಿರುವುದರಿಂದ ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಜಾತ್ರೆಗೆ ಬರುವ ಭಕ್ತಾದಿಗಳಿಗೆ ಬಿಸಿಲಿನ ತಾಪ ತಟ್ಟದಂತೆ ಮುನ್ನೆಚ್ಚರಿಕೆ ವಹಿಸಿ, ಸ್ಥಳೀಯವಾಗಿ ಓಆರ್‍ಎಸ್ ಪ್ಯಾಕೆಟ್‍ಗಳು ಮತ್ತು ಅಗತ್ಯ ಔಷಧಗಳನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕು. ಬಿಸಿಲಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಫಲಕಗಳನ್ನು ಅಲ್ಲಲ್ಲಿ ಹಾಕಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು ಜಾತ್ರಾ ಸಮಯದಲ್ಲಿ ನಾಲ್ಕು ಪ್ರಥಮ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಇದರೊಂದಿಗೆ ನಾಲ್ಕು ಆಂಬ್ಯುಲೆನ್ಸ್‍ಗಳನ್ನು ದಿನದ 24 ಗಂಟೆಯೂ ಕಾರ್ಯಾಚರಣೆಯಲ್ಲಿರುವಂತೆ ನಿಯೋಜಿಸಲಾಗಿದೆ. ಸಮೀಪದ ಸಿ.ಹೆಚ್.ಸಿ ಆಸ್ಪತ್ರೆಯಲ್ಲಿ ಒಟ್ಟು 60 ಹಾಸಿಗೆಗಳನ್ನು ಕಾಯ್ದಿರಿಸಲಾಗಿದ್ದು, ಮಕ್ಕಳ ವೈದ್ಯರು ಸೇರಿದಂತೆ ತಜ್ಞ ವೈದ್ಯರ ತಂಡವು ಸ್ಥಳದಲ್ಲಿ ಲಭ್ಯವಿರಲಿದೆ. ಸುಮಾರು 200 ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಚಳ್ಳಕೆರೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಾಶೀ ಮಾಹಿತಿ ನೀಡಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 19 ಫೆಬ್ರವರಿ | ರಾಶಿ, ಕೆಂಪುಗೋಟು, ಕೋಕೊ, ಚಾಲಿ ಇನ್ನಿತರೆ ಅಡಿಕೆ ರೇಟ್‌

ಜಾತ್ರಾ ಮಹೋತ್ಸದಲ್ಲಿ ಎಲ್ಲ ಪಾರ್ಕಿಂಗ್ ಸ್ಥಳಗಳಲ್ಲಿಯೂ ಲೈಟಿಂಗ್ ವ್ಯವಸ್ಥೆ ಕಣ್ಗಾವಲು ಹೆಚ್ಚಿಸಲು ಈಗಾಗಲೇ ಇರುವ 24 ಸಿಸಿ ಟಿವಿಗಳ ಜೊತೆಗೆ ಹೆಚ್ಚುವರಿಯಾಗಿ 50 ಹೊಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕಿದೆ. 

ಯಾವುದೇ ಅನಾಹುತಗಳನ್ನು ತಡೆಯಲು ಮತ್ತು ತುರ್ತು ರಕ್ಷಣಾ ಕಾರ್ಯಗಳಿಗಾಗಿ ಎನ್.ಡಿ.ಆರ್.ಎಫ್ ತಂಡ ನಿಯೋಜನೆ, ಜನಸಂದಣಿ ನಿಯಂತ್ರಿಸಲು ಮತ್ತು ಅಗತ್ಯ ಮಾಹಿತಿ ನೀಡಲು ಜಾತ್ರೆಯ ವಿವಿಧೆಡೆ ಧ್ವನಿವರ್ಧಕಗಳ ಅಳವಡಿಸಬೇಕು. ವಿದ್ಯುತ್ ವ್ಯತ್ಯಯವಾದರೂ ಅನೌನ್ಸ್‍ಮೆಂಟ್ ಮುಂದುವರಿಯಲು ಜನರೇಟರ್ ಬ್ಯಾಕಪ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದರು.

ರಥಬೀದಿಯಲ್ಲಿರುವ ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಗುರುತಿಸಿ, ಅವುಗಳ ಮೇಲೆ ಜನರು ಹತ್ತದಂತೆ ಎಚ್ಚರಿಕೆ ವಹಿಸಲು ಮತ್ತು ಮಾಲೀಕರಿಗೆ ನೋಟಿಸ್ ನೀಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಮಾತನಾಡಿ, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಾತ್ರೆಯು ಯಶಸ್ವಿವಾಗಿ ಆಗಬೇಕು. ಕಳೆದ ವರ್ಷ 5 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಈ ಬಾರಿ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯನ್ನು 10 ಕಿ.ಮೀ ಗೆ ವಿಸ್ತರಿಸಲು, ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 

ಇದನ್ನೂ ಓದಿ: ಆಕಾಶವಾಣಿಯಲ್ಲಿ ಅರೆಕಾಲಿಕ ವರದಿಗಾರರ ಹುದ್ದೆ | ಅರ್ಜಿ ಅಹ್ವಾನ

ತಾತ್ಕಾಲಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ ಮತ್ತು ಜಾತ್ರೆಯಲ್ಲಿ ವಿತರಿಸುವ ಪ್ರಸಾದದ ಗುಣಮಟ್ಟ ಪರೀಕ್ಷಿಸಲು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಸ್ತೆ ದುರಸ್ತಿ, ಕುಡಿಯುವ ನೀರು, ನಿರಂತರ ವಿದ್ಯುತ್ ಸರಬರಾಜು ಮತ್ತು ಹೆಚ್ಚುವರಿ ಕೆಎಸ್‍ಆರ್‍ಟಿಸಿ ಬಸ್‍ಗಳ ವ್ಯವಸ್ಥೆಗಾಗಿ ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. 

ಜಾತ್ರೆಗೆ ಬರುವ ಸುಮಾರು 2,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳಿಗೆ ವಸತಿ ಸೌಕರ್ಯದ ವ್ಯವಸ್ಥೆ ಕಲ್ಪಿಸಬೇಕಿದೆ. ಯಾವುದೇ ಅಹಿತಕರ ಘಟನೆ ಹಾಗೂ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ ಸ್ಪಂದಿಸಲು ಆಂಬ್ಯುಲೆನ್ಸ್ ಮತ್ತು ವೈದ್ಯಕೀಯ ತಂಡದೊಂದಿಗೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಸಂದರ್ಭದಲ್ಲಿ ಅಳವಡಿಸಿಕೊಂಡ ಮಾದರಿಯಂತೆ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಸಿದ್ಧವಿರಲು ಕ್ರಮ ವಹಿಸಲಾಗುವುದು.  

ಜಾನುವಾರುಗಳಿಗೆ ತುರ್ತು ವೈದ್ಯಕೀಯ ಸೇವೆ, ಅಗ್ನಿಶಾಮಕ ದಳಗಳ ನಿಯೋಜನೆ, ರಥದ ಸುರಕ್ಷತೆ ಕುರಿತಂತೆಯೂ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಅನಿಷ್ಟ ಪದ್ಧತಿಗಳ ಆಚರಣೆ ಜರುಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಜಿಲ್ಲಾ ಬಂಜಾರ(ಲಂಬಾಣಿ) ಸಂಘದ ಪದಾಧಿಕಾರಿಗಳ ಆಯ್ಕೆ | ನಾಗೇಂದ್ರ ನಾಯ್ಕ್‌ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮರು ಆಯ್ಕೆ

ಜಾತ್ರೆಯ ಮಾರ್ಗಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ರಸ್ತೆಗಳನ್ನು ತಗ್ಗು, ಗುಂಡಿ ಮುಕ್ತಗೊಳಿಸಲು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಲು ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮವಹಿಸಬೇಕು. ರಸ್ತೆ ಬದಿಯ ಒತ್ತುವರಿ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. 

ಜಾತ್ರೆಯಲ್ಲಿ ಪ್ರಾಣಿ ಬಲಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಚೆಕ್‍ಪೋಸ್ಟ್ ತೆರೆದು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ಅಷ್ಟೇ ಅಲ್ಲದೆ, ಜಾತ್ರೆಯ ಸುತ್ತಮುತ್ತಲ ನಿಗದಿತ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸೇವನೆಯ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಪೊಲೀಸ್ ಇಲಾಖೆ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

ಬ್ಯಾನರ್ ಮುಕ್ತ ಜಾತ್ರೆ:

ಈ ಬಾರಿಯ ಜಾತ್ರೆಯಲ್ಲಿ ರಾಜಕೀಯ ಮತ್ತು ವೈಯಕ್ತಿಕ ಪ್ರಚಾರದ ಬ್ಯಾನರ್‍ಗಳಿಗೆ ಅವಕಾಶವಿರುವುದಿಲ್ಲ. ಕೇವಲ ಸಾರ್ವಜನಿಕ ಮಾಹಿತಿ ನೀಡುವ ಸೂಚನಾ ಫಲಕಗಳು ಮತ್ತು ದೇವಸ್ಥಾನದ ಅಧಿಕೃತ ಸ್ವಾಗತ ಫಲಕಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಉಳಿದ ಯಾವುದೇ ಅನಧಿಕೃತ ಬ್ಯಾನರ್‍ಗಳನ್ನು ತೆರವುಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 19 | ಹತ್ತಿ ರೇಟ್ ಎಷ್ಟಿದೆ?

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕಾಂತರಾಜ್, ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಕಾರ್ಯನಿರ್ವಾಹಣಾಧಿಕಾರಿ ಗಂಗಾಧರ್, ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಗೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BannerChitradurgaChitradurga newsNayakanahatti fairಚಿತ್ರದುರ್ಗಚಿತ್ರದುರ್ಗ ನ್ಯೂಸ್ನಾಯಕನಹಟ್ಟಿ ಜಾತ್ರೆಬ್ಯಾನರ್
Share This Article
Facebook Email Print
Previous Article ದಿನ ಭವಿಷ್ಯ ದಿನ ಭವಿಷ್ಯ | ಫೆಬ್ರವರಿ 20 | ಉದ್ಯೋಗಗಳಲ್ಲಿ ಬಡ್ತಿ, ಕೈಗೊಂಡ ಕೆಲಸದಲ್ಲಿ ಅಡೆತಡೆಗಳು
Next Article yoga ಮೂಳೆಗಳನ್ನು ಗಟ್ಟಿಯಾಗಿಸಲು ಈ ಯೋಗ ಅಭ್ಯಾಸ ಮಾಡಿ
Leave a Comment

Leave a Reply Cancel reply

Your email address will not be published. Required fields are marked *

ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
ಮುಖ್ಯ ಸುದ್ದಿ
ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up