CHITRADURGA NEWS | 03 MARCH 2026
ಚಿತ್ರದುರ್ಗ: ಮಾರ್ಚ್ 6 ರಂದು ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ನಾಯಕನಹಟ್ಟಿಯ, ತಿಪ್ಪೇರುದ್ರಸ್ವಾಮಿಯ ದೊಡ್ಡರಥೋತ್ಸವ ಜರುಗಲಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 7ನೇ ತಾರೀಖಿನವರೆಗೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಹಿರಿಯೂರು, ಪಾವಗಡ ಘಟಕಗಳಿಂದ ಜಾತ್ರಾ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ | ಮೋದಿ ಸಾಧನೆ ಮನೆ ಮನೆಗೆ ಮುಟ್ಟಿಸಲು ಕರೆ
ಚಿತ್ರದುರ್ಗ ನಾಯಕನಹಟ್ಟಿ ಮಾರ್ಗದ ಬಸ್‌ಗಳು ಬೆಳಗಟ್ಟ, ಹಾಯ್ಕಲ್, ಚಳ್ಳಕೆರೆ ಮೂಲಕ, ಚಳ್ಳಕೆರೆ-ನಾಯಕನಹಟ್ಟಿ ಮಾರ್ಗದ ಬಸ್‌ಗಳು ನರ‍್ಲಗುಂಟೆ ಮೂಲಕ, ಹಿರಿಯೂರು-ನಾಯಕನಹಟ್ಟಿ ಬಸ್‌ಗಳು ಸಾಣಿಕೆರೆ, ಚಳ್ಳಕೆರೆ, ನರ‍್ಲಗುಂಟೆ ಮೂಲಕ ಹಾಗೂ ನಾಯಕನಹಟ್ಟಿ-ಪರುಶುರಾಂಪುರ ಮಾರ್ಗದ ಬಸ್‌ಗಳು ಚಳ್ಳಕೆರೆಯ ಮೂಲಕ ಸಂಚರಿಸಲಿವೆ.
ಸಾರ್ವಜನಿಕರು ವಿಶೇಷ ಬಸ್‌ಗಳ ಸದುಪಯೋಗ ಪಡೆದುಕೊಳ್ಳುವಂತೆ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
