By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    11 hours ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    11 hours ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    1 day ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    1 day ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    11 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    10 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    11 hours ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    1 day ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    1 day ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
Reading: ನಾಯಕನಹಟ್ಟಿ ಜಾತ್ರೆಗೆ ಸಿದ್ಧತೆ | ಎಲ್ಲ ಕಡೆ ಸಿಸಿ ಕ್ಯಾಮರಾ | ಡಿಸಿ ವೆಂಕಟೇಶ್ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಾಯಕನಹಟ್ಟಿ ಜಾತ್ರೆಗೆ ಸಿದ್ಧತೆ | ಎಲ್ಲ ಕಡೆ ಸಿಸಿ ಕ್ಯಾಮರಾ | ಡಿಸಿ ವೆಂಕಟೇಶ್ 

News Desk Chitradurga News
Last updated: 3 March 2025 17:48
News Desk Chitradurga News
1 year ago
Share
ನಾಯಕನಹಟ್ಟಿ ಜಾತ್ರೆ ಸಿದ್ಧತೆ ಸಭೆ
SHARE

CHITRADURGA NEWS | 03 MARCH 2025

ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣದಲ್ಲಿ ಅಗತ್ಯ ಇರುವ ಕಡೆ ಶಾಶ್ವತವಾಗಿ ಸಿ.ಸಿ.ಕ್ಯಾಮೆರಾ ಅಳವಡಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

Also Read: Kannada Novel: 22. ಜಂಗಮಯ್ಯರಲ್ಲಿ ಬಿಕ್ಕಟ್ಟು

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ ದೇವಸ್ಥಾನದ 2025ನೇ ಸಾಲಿನ ಜಾತ್ರೆಯ ಕೆಲಸ ಕಾರ್ಯಗಳನ್ನು ಪರಿಶೀಲಿಸಲು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾತ್ರೆಯಲ್ಲಿ ಸರಗಳ್ಳತನ ಸಾಮಾನ್ಯವಾಗಿದ್ದು, ಈ ನಿಟ್ಟಿನಲ್ಲಿ ಶಾಶ್ವತವಾಗಿ ಸಿ.ಸಿ.ಕ್ಯಾಮೆರಾ ಅಳವಡಿಸಿಕೊಳ್ಳಬೇಕು ಎಂದು ದೇವಸ್ಥಾನ ಸಮಿತಿ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.

ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಗೆ ವಿವಿಧೆಡೆಗಳಿಂದ 3 ರಿಂದ 4 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದ್ದು, ಬಿಸಿಲು ಹೆಚ್ಚಿರುವ ಕಾರಣ ಎಚ್ಚರಿಕೆ ವಹಿಸಿ ಭಕ್ತಾಧಿಕಾಗಳಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?

ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಕ್ಷೇತ್ರದಲ್ಲಿ ಇದೇ ಮಾರ್ಚ್ 09 ರಿಂದ 24 ರವರೆಗೆ ಜಾತ್ರೆ ನಡೆಯಲಿದ್ದು, ಮಾರ್ಚ್ 16ರಂದು ದೊಡ್ಡ ರಥೋತ್ಸವ ನಡೆಯಲಿದೆ. ಜಾತ್ರೆಯಲ್ಲಿ ಕುಡಿಯುವ ನೀರು ವ್ಯವಸ್ಥೆಗೆ ವಿ.ವಿ.ಸಾಗರದ ನೀರು ಹಾಗೂ ಹೆಚ್ಚುವರಿಯಾಗಿ ಟ್ಯಾಂಕರ್‍ಗಳ ಮೂಲಕ ನೀರು ಹಾಗೂ ದಾನಿಗಳ ಬೋರ್‍ವೆಲ್‍ಗಳಿಂದ ನೀರನ್ನು ಪಡೆಯಲು ಅಧಿಕಾರಿಗಳ ತಂಡ ರಚಿಸಿಕೊಂಡು, ನೀರು ವಿತರಿಸುವ ಕಾರ್ಯ ಆಗಬೇಕು. ಸಹಾಯವಾಣಿ ಕೌಂಟರ್ ತೆರೆದು ಭಕ್ತರಿಗೆ ಸಮರ್ಪಕವಾಗಿ ನೀರಿನ ವ್ಯವಸ್ಥೆ ಮಾಡಲು ಚಳ್ಳಕೆರೆ ತಹಶೀಲ್ದಾರ್ ಹಾಗೂ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ನಾಯಕನಹಟ್ಟಿ ಪಟ್ಟಣಕ್ಕೆ ಕೇವಲ ಜಾತ್ರೆಯ ಸಮಯದಲ್ಲಿ ಮಾತ್ರವಲ್ಲದೇ ಪ್ರತಿನಿತ್ಯವೂ ಸಮರ್ಪಕವಾಗಿ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಬೇಕು. ಬೇಸಿಗೆ ಪ್ರಾರಂಭವಾಗುವ ಮೊದಲೇ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಅಗತ್ಯ ಕ್ರಿಯಾಯೋಜನೆ ತಯಾರಿಸಿಕೊಳ್ಳಬೇಕು ಎಂದು ತಿಳಿಸಿದ ಅವರು, ನಾಯಕನಹಟ್ಟಿ ಪಟ್ಟಣಕ್ಕೆ ನಿತ್ಯವೂ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಅವರಿಗೆ ಸೂಚಿಸಿದರು.

Also Read: ಬಸವೇಶ್ವರ ಟಾಕೀಸ್ ಮಾಲಿಕ ನಟರಾಜ್ ಇನ್ನಿಲ್ಲ

ದೊಡ್ಡ ರಥೋತ್ಸವದ ಸಂದರ್ಭದಲ್ಲಿ ರಥ ಸಾಗಲು ಯಾವುದೇ ಅಡಚಣೆಯಾಗದಂತೆ ಕ್ರಮವಹಿಸಬೇಕು. ಈ ಹಿನ್ನಲೆಯಲ್ಲಿ ತೇರು ಬೀದಿಯಲ್ಲಿ ರಸ್ತೆಗೆ ಅಡ್ಡಿಯಾಗುವಂತೆ ಯಾವುದೇ ಅಂಗಡಿಗಳನ್ನು ಹಾಕಿಕೊಳ್ಳಲು ಅವಕಾಶ ನೀಡಬಾರದು. ರಥಬೀದಿಯ ಡಾಂಬರೀಕರಣ ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.

ನಾಯಕನಹಟ್ಟಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ದುರಸ್ಥಿಗೊಳಿಸಿ, ರಸ್ತೆ ಬದಿಗಳ ಜಂಗಲ್ ಕಟಿಂಗ್ ಕಾರ್ಯ ನಿರ್ವಹಿಸಿ ವಾಹನ ಮತ್ತು ಜನರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೆರೆ ಏರಿಗೆ ಬ್ಯಾರಿಕೇಡ್ :

ಈ ಬಾರಿ ಸಣ್ಣಕೆರೆ ಹಾಗೂ ದೊಡ್ಡ ಕೆರೆ ತುಂಬಿರುವುದರಿಂದ ಯಾವುದೇ ಕಾರಣಕ್ಕೂ ಭಕ್ತಾಧಿಗಳು ಕೆರೆ ಒಳಗೆ ಇಳಿಯದಂತೆ ಸೂಕ್ತ ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

Also Read: ಅತಿಥಿ ಶಿಕ್ಷಕರ ನೇಮಕಾತಿ | ನೇರ ಸಂದರ್ಶನಕ್ಕೆ ಆಹ್ವಾನ

ಸಣ್ಣಕೆರೆ ಮತ್ತು ದೊಡ್ಡಕೆರೆ ಹತ್ತಿರು ಭಕ್ತರು ಈಜಾಡುವ ಸಂಭವವಿರುವುದರಿಂದ ಅವಘಡ ತಡೆಯಲು ಮುಂಜಾಗ್ರತಾ ಕ್ರಮವಾಗಿ ಎಸ್‍ಡಿಆರ್‍ಎಫ್ ತಂಡ ನಿಯೋಜನೆಗೆ ಪತ್ರ ಬರೆದು, ಕೆರೆ ರೆಸ್ಕ್ಯೂ ಬೋಟ್, ಲೈಫ್ ಜಾಕೆಟ್ ವ್ಯವಸ್ಥೆ ಮಾಡಿಕೊಳ್ಳಬೇಕು ಹಾಗೂ ಅಗ್ನಿಶಾಮಕ ವಾಹನಗಳ ಸೌಲಭ್ಯ ಒದಗಿಸಬೇಕು ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿಗೆ ತಾಕೀತು ಮಾಡಿದರು.

ನೀರಿನ ಮೂಲಗಳ ಸ್ಯಾಂಪಲ್‍ಗಳನ್ನು ಪರೀಕ್ಷೆಗೊಳಪಡಿಸಿ, ವರದಿ ಪಡೆದುಕೊಳ್ಳಬೇಕು. ಸಮರ್ಪಕವಾಗಿ ಅಗತ್ಯವಿರುವ ಔಷಧಿಗಳನ್ನು ಪೂರೈಕೆ ಮಾಡಬೇಕು. ಬೇಸಿಗೆ ಇರುವುದರಿಂದ ಹೆಚ್ಚು ಒಆರ್‍ಎಸ್ ಪೂರೈಕೆ ಮಾಡಬೇಕು. ಜಾತ್ರೆಯಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ನಾಯಕನಹಟ್ಟಿ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಿಸಲಾಗಿದ್ದು, ಅಗತ್ಯವಿರುವ ಕಡೆ ಚೆಕ್‍ಪೋಸ್ಟ್ ನಿರ್ಮಿಸಿ, ಪ್ರಾಣಿ ಬಲಿ ನಿಷೇಧ ಕುರಿತು ಜಾಗೃತಿ ಮೂಡಿಸಬೇಕು ಎಂದು ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಕುಮಾರ್ ಅವರಿಗೆ ತಿಳಿಸಿದರು.

Also Read: ಬೃಹತ್ ಉದ್ಯೋಗ ಮೇಳ | ಎಷ್ಟು ಜನರಿಗೆ ಕೆಲಸ ಸಿಕ್ತು? 

ರಕ್ಷಣೆ ಹಾಗೂ ಬಂದೋಬಸ್ತ್‍ಗೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮವಹಿಸಬೇಕು. ಜಾತ್ರಾ ಸಂದರ್ಭದಲ್ಲಿ ಬ್ಯಾರಿಕೇಡ್ ಮತ್ತು ಸಲಹಾ ಕೌಂಟರ್‍ಗಳನ್ನು ಅಗತ್ಯ ಇರುವ ಕಡೆ ವಾಚ್ ಟವರ್‍ಗಳ ವ್ಯವಸ್ಥೆ ಕಲ್ಪಿಸಿಕೊಳ್ಳಬೇಕು. ಪಟ್ಟಣಕ್ಕೆ ಪ್ರವೇಶ ಕಲ್ಪಿಸುವ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಬಾರದು, ಹಾಗೂ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಿ, ಮೊದಲೇ ಸಿದ್ಧಪಡಿಸಿಕೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಕೆಎಸ್‍ಆರ್‍ಟಿಸಿ ವಿಭಾಗೀಯ ಅಧಿಕಾರಿ ಶ್ರೀನಿವಾಸ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಗಂಗಾಧರಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AssemblyBarricadeCC cameraChitradurgaChitradurga newsChitradurga UpdatesCollector VenkateshJatreKannada Latest NewsKannada NewsNayakanahattiSri Gurutipperudraswamyಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾತ್ರೆಜಿಲ್ಲಾಧಿಕಾರಿ ವೆಂಕಟೇಶ್ನಾಯಕನಹಟ್ಟಿಬ್ಯಾರಿಕೇಡ್ಶ್ರೀ ಗುರುತಿಪ್ಪೇರುದ್ರಸ್ವಾಮಿಸಭೆಸಿಸಿ ಕ್ಯಾಮರಾ
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
Next Article ಬೆಲ್ಟ್, ಪರ್ಸ್, ವ್ಯಾನಿಟಿ ಬ್ಯಾಗ್ ಸೇರಿ ಚರ್ಮದ ಉತ್ಪನ್ನಗಳಿಗೆ ರಿಯಾಯಿತಿ 
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up