CHITRADURGA NEWS | 06 MARCH 2026
ಚಿತ್ರದುರ್ಗ: ಮಧ್ಯ ಕರ್ನಾಟಕದ ಅತೀ ದೊಡ್ಡ ಜಾತ್ರೆ ಅಥವಾ ಪರಿಷೆ ಎಂದೇ ಹೆಸರಾಗಿರುವ ಪವಾಡ ಪುರುಷ, ಕಾಯಕಯೋಗಿ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿದೆ. ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ಪುನೀತರಾದರು.

ಹಟ್ಟಿ ತಿಪ್ಪೇಶನ ಮುಕ್ತಿ ಭಾವುಟ ಹರಾಜು ಕೂಡಾ ಪ್ರಮುಖವಾಗಿದ್ದು, ಈ ವರ್ಷದ ಮುಕ್ತಿ ಭಾವುಟ 32 ಲಕ್ಷ ರೂ.ಗಳಿಗೆ ಹರಾಜಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 06 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್..
ಈ ವರ್ಷ ಮುಕ್ತಿ ಭಾವುಟವನ್ನು ಶಿರಾ ಮೂಲದ ಉದ್ಯಮಿ ಶ್ರೀನಾಥ್ ಹರಾಜಿನ ಮೂಲಕ ಪಡೆದುಕೊಂಡರು.
ಕಳೆದ ವರ್ಷ ಬೆಂಗಳೂರು ಮೂಲದ, ನಾಯಕನಹಟ್ಟಿ ಅಳಿಯರಾದ ತೇಜಸ್ವಿ ಆರಾಧ್ಯ 63 ಲಕ್ಷ ರೂ.ಗಳಿಗೆ ಹರಾಜು ಮೂಲಕ ಪಡೆದುಕೊಂಡಿದ್ದರು.
ಇದನ್ನೂ ಓದಿ:ತೋಟಗಾರಿಕೆ ಇಲಾಖೆ ಬಳಿ ಡಿಸಿ ಕಚೇರಿ ನಿರ್ಮಾಣಕ್ಕೆ ವಿರೋಧ
2024ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬರೋಬ್ಬರಿ 61 ಲಕ್ಷ ರೂ.ಗಳಿಗೆ ಹರಾಜು ಮೂಲಕ ಮುಕ್ತಿ ಭಾವುಟ ಪಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
