By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
    ಯಾಂತ್ರಿಕ ಯುಗದಲ್ಲಿ ಕಲೆಯ ಉಳಿವಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ | ಎಸ್.ಕೆ. ಬಸವರಾಜನ್
    13 hours ago
    ಸರಸ್ವತಿ ಕಾನೂನು ಕಾಲೇಜಿನ 60ನೇ ವರ್ಷದ ವಜ್ರ ಮಹೋತ್ಸವ ಉದ್ಘಾಟನೆ
    ಕಾನೂನು ವೃತ್ತಿ ವ್ಯಾಪಾರವಲ್ಲ, ಸಮಾಜ ಸೇವೆ | ಸುಪ್ರೀಂ ಕೋರ್ಟ್ ನ್ಯಾ. ಪ್ರಸನ್ನ ಭಾಲಚಂದ್ರ ವರಾಳೆ
    13 hours ago
    ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
    ವಿಶೇಷ ಡಿ.ಎಡ್ ತರಬೇತಿಗೆ ಅ.28ರೊಳಗೆ ಅರ್ಜಿ ಆಹ್ವಾನ
    24 hours ago
    ಸಾಂದರ್ಭಿಕ ಚಿತ್ರ
    ಅ.27, 28ರಂದು ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
    24 hours ago
    ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ, ಸಾಹಸ ಹೆಣ್ಣುಮಕ್ಕಳಿಗೆ ಪ್ರೇರಣೆ | ಬಿ.ಟಿ.ಕುಮಾರಸ್ವಾಮಿ
    24 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 25 | ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ, ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ಅಗತ್ಯ
    1 hour ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 24 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಅನುಕೂಲಕರ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 23 | ದೂರದ ಪ್ರಯಾಣ ಬೇಡ, ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 22 | ಆದಾಯಕ್ಕಿಂತ ಖರ್ಚು ಹೆಚ್ಚು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 21 | ವಿಜಯದಶಮಿ ಹಬ್ಬದಂದು ನಿಮ್ಮ ರಾಶಿ ಫಲವೇನು?
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    18 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    3 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    cooking oil
    ಅಡುಗೆ ಎಣ್ಣೆ ಬಳಸುವಾಗ ನೀವು ಮಾಡುವಂತಹ ಈ ತಪ್ಪುಗಳು ನಿಮ್ಮ ಆರೋಗ್ಯಕ್ಕೆ ಹಾನಿಕಾರಕ
    35 minutes ago
    jola roti
    ಜೋಳ ರೊಟ್ಟಿ ತೂಕ ಇಳಿಸಿಕೊಳ್ಳಲು ಸಹಕಾರಿಯೇ? ತಿಳಿಯಿರಿ
    24 hours ago
    Custard apple
    ಸೀತಾಫಲದ ಎಲೆ ಈ ರೋಗಗಳಿಗೆ ಅದ್ಭುತ ಪರಿಹಾರವಂತೆ
    1 day ago
    peanuts
    ನೆಲಗಡಲೆ ತಿಂದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    2 days ago
    black grapes
    ಕಪ್ಪು ದ್ರಾಕ್ಷಿ ಸೇವಿಸಿ; ಈ ಪ್ರಯೋಜನವನ್ನು ಪಡೆಯಿರಿ
    2 days ago
Reading: ಅಲಂಕೃತಗೊಂಡ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವ | ನೆರಳಿಗಾಗಿ ಬೃಹತ್ ಚಪ್ಪರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಲಂಕೃತಗೊಂಡ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವ | ನೆರಳಿಗಾಗಿ ಬೃಹತ್ ಚಪ್ಪರ

News Desk Chitradurga News
Last updated: 25 March 2024 06:53
News Desk Chitradurga News
3 years ago
Share
SHARE

CHITRADURGA NEWS | 25 MARCH 2024
ಚಿತ್ರದುರ್ಗ: ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದ ಪ್ರಮುಖ ಘಟ್ಟವಾದ ದೊಡ್ಡ ರಥೋತ್ಸವಕ್ಕೆ ಸಿದ್ಧತೆಗಳು ಬಹುತೇಕ ಅಂತಿಮ ಹಂತ ತಲುಪಿವೆ. ಮಾರ್ಚ್‌ 26 ರ ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ರಥ ಬೀದಿಯಲ್ಲಿ ಸಾಗಲಿದೆ ತಿಪ್ಪೇಶನ ವೈಭವ.

80 ಟನ್ ತೂಕ ಹಾಗೂ 75 ಅಡಿ ಎತ್ತರವಿರುವ ರಥ 5 ಚಕ್ರಗಳನ್ನು ಹೊಂದಿದೆ. ರಥಕ್ಕೆ ಎರಡು ದಿನಗಳಿಂದ ಬಣ್ಣಬಣ್ಣದ ಬಾವುಟಗಳನ್ನು ಅಳವಡಿಸುವ ಕಾರ್ಯ ನಡೆದಿದೆ. ಗೊಂಬೆಗಳು ಐತಿಹಾಸಿಕ ಘಟನೆಗಳ ಬಿಂಬಿಸುವ ಚಿತ್ರಪಟಗಳನ್ನು ಅಳವಡಿಸಿಲಾಗಿದೆ. ರಥವನ್ನು ಎಳೆಯುವ 2 ಅಡಿ ಸುತ್ತಳತೆ ಇರುವ ಮಿಣಿಯನ್ನು (ಹಗ್ಗ) ಪರೀಕ್ಷಿಸಲಾಗಿದೆ.

ರಥಕ್ಕೆ ಮತ್ತು ಜಾತ್ರೆಗೆ ಡಿವೈಎಸ್‌ಪಿ ಮಟ್ಟದ ಭದ್ರತೆಯನ್ನು ಒದಗಿಸಲಾಗಿದೆ. ಪಟ್ಟಣದ 7 ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಇಡೀ ಜಾತ್ರೆಯನ್ನು 18 ಸೆಕ್ಟರ್‌ಗಳಾಗಿ ವಿಂಗಡಿಸಿ ಪ್ರತಿ ಸೆಕ್ಟರ್‌ಗೂ ಡಿವೈಎಸ್‌ಪಿ, ಇನ್‌ಸ್ಪೆಕ್ಟರ್‌ ಸೇರಿದಂತೆ ಸಿಬ್ಬಂದಿ ನಿಯೋಜಿಸಲಾಗಿದೆ. 10 ಸಂಚಾರಿ ಪೊಲೀಸ್‌ ದಳ, 22 ಸಹಾಯವಾಣಿ, 6 ಗಸ್ತು ಗೋಪುರಗಳು, 10 ಸ್ಕೈ ಸೆಂಟರ್‌ಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.

ಕ್ಲಿಕ್ ಮಾಡಿ ಓದಿ: ಲೋಕಸಭೆ ಚುನಾವಣಾ ಮತದಾನ ಬಹಿಷ್ಕಾರ | ಭರಮಗಿರಿ ಗ್ರಾಮಸ್ಥರಿಂದ ಸ್ಪಷ್ಟ ಸಂದೇಶ | ಕೆರೆಗೆ ವಾಣಿವಿಲಾಸ ಜಲಾಶಯದಿಂದ ನೀರು ತುಂಬಿಸಿ

ಪಟ್ಟಣದಲ್ಲಿ ಹದ್ದಿನ ಕಣ್ಣಿಡಲು ಪಟ್ಟಣದ ಬಹುಕೇತ ಸ್ಥಳಗಳಲ್ಲಿ ನೂರಾರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜಾತ್ರೆಯಲ್ಲಿ ಸರಗಳ್ಳತನ, ಮೊಬೈಲ್, ಜೇಬುಗಳ್ಳರನ್ನು ಹಿಡಿಯಲು ವಿಶೇಷ ತಂಡಗಳ ರಚನೆ ಮಾಡಲಾಗಿದೆ. ಈ ಎಲ್ಲ ಯೋಜನೆಗಳು ಕಾರ್ಯರೂಪಕ್ಕೆ ತಂದು ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲಾಗುತ್ತಿದೆ.

ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎರಡೂ ದೇವಾಲಯಗಳ ಆವರಣದಲ್ಲಿ ನೆರಳಿಗಾಗಿ ಬೃಹತ್ ಚಪ್ಪರದ ವ್ಯವಸ್ಥೆ ಮಾಡಲಾಗಿದೆ. ಪಟ್ಟಣದ ಎಲ್ಲಾ ವಾರ್ಡ್ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಜತೆಗೆ ಕುಡಿಯುವ ನೀರಿಗೆ ವಿಶೇಷ ವ್ಯವಸ್ಥೆ ರೂಪಿಸಲಾಗಿದೆ.

ಜಾತ್ರೆಗೆ ಬರುವ ಭಕ್ತರಿಗೆ ಪಟ್ಟಣದ ಹಲವು ಕಡೆಗಳಲ್ಲಿ 12 ಮೊಬೈಲ್ ಶೌಚಾಲಯ ವ್ಯವಸ್ಥೆ, 4 ಸಾಮೂಹಿಕ ಶೌಚಾಲಯಗಳು, 12 ನೀರಿನ ತೊಟ್ಟಿಗಳು, 7 ಕೊಳವೆ ಬಾವಿಗಳಿಂದ ನಿರಂತರವಾಗಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ವ್ಯವಸ್ಥೆ, ಪೌರಕಾರ್ಮಿಕರೊಂದಿಗೆ ಪಟ್ಟಣದ ಸ್ವಚ್ಛತೆ ಕೈಗೊಳ್ಳಲಾಗಿದೆ.

ಭಕ್ತರಿಗೆ ಯಾವುದೇ ಕುಂದುಕೊರತೆ ಉಂಟಾಗದಂತೆ ಅಗತ್ಯ ಸಿದ್ಧತೆಯನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಈಗಾಗಲೇ ಸಹಾಯವಾಣಿಗಳ ಕಾರ್ಯ ನಿರ್ವಹಿಸುತ್ತಿವೆ. ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳನ್ನು ಕೈಗೊಳ್ಳಲು ತಾಲ್ಲೂಕು ಮಟ್ಟದ ಮತ್ತು ಸ್ಥಳೀಯ ಅಧಿಕಾರಿಗಳು ಪಟ್ಟಣದಲ್ಲಿ ಬೀಡು ಬಿಟ್ಟಿದ್ದಾರೆ.

ಜಾತ್ರೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಪಟ್ಟಣದ 3 ಕಡೆಗಳಲ್ಲಿ ಬಸ್‌ ನಿಲ್ದಾಣಗಳನ್ನು ಸ್ಥಾಪಿಸಲಾಗಿದೆ. ದಾವಣಗೆರೆ-ಜಗಳೂರು- ಹೊಸಪೇಟೆ ಕಡೆಯಿಂದ ಬರುವ ವಾಹನಗಳಿಗೆ ಪಟ್ಟಣದ ಗಂಗಯ್ಯನಹಟ್ಟಿ ಬಳಿ, ಬಳ್ಳಾರಿ-ಅನಂತಪುರ- ರಾಯದುರ್ಗ- ಕಲ್ಯಾಣದುರ್ಗ ಕಡೆಯಿಂದ ಬರುವ ವಾಹನಗಳಿಗೆ ತಳಕು ರಸ್ತೆಯ ಮದರಾಸದ ಬಳಿ, ಬೆಂಗಳೂರು- ತುಮಕೂರು- ಚಳ್ಳಕೆರೆ- ಚಿತ್ರದುರ್ಗ ಮಾರ್ಗದಿಂದ ಬರುವವರಿಗೆ ಮನುಮೈನಹಟ್ಟಿ ಏಕಾಂತೇಶ್ವರ ದೇವಾಲಯದ ಬಳಿ ಬಸ್‌ ನಿಲ್ದಾಣಗಳನ್ನು ತೆರೆಯಲಾಗಿದೆ.

ಕ್ಲಿಕ್ ಮಾಡಿ ಓದಿ: ನಾಯಕನಹಟ್ಟಿ ಜಾತ್ರಾ ಮಹೋತ್ಸವ | ದೊಡ್ಡರಥಕ್ಕೆ ಕಳಶ ಪ್ರತಿಷ್ಠಾಪನೆ | ಅವಘಡಕ್ಕೆ ಅವಕಾಶವಿಲ್ಲದಂತೆ ಜಾಗ್ರತೆ ವಹಿಸಿ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಜಾತ್ರೆ ವಿಶೇಷವಾಗಿ 200ಕ್ಕೂ ಹೆಚ್ಚು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. 10 ಸೆಕ್ಟರ್‌ಗಳನ್ನಾಗಿ ಮಾಡಲಾಗಿದ್ದು, ಪ್ರತಿ ಹಂತದ ಬಸ್ ಕಾರ್ಯಾಚರಣೆಗೆ ಪ್ರತ್ಯೇಕ ಸಾರಿಗೆ ಸಿಬ್ಬಂದಿ ನಿಯೋಜಿಸಲಾಗಿದೆ. ಒಟ್ಟು 3 ದಿನಗಳವರೆಗೂ ಸಾರಿಗೆ ಇಲಾಖೆಯ ಚಿತ್ರದುರ್ಗ ವಿಭಾಗೀಯ ಕಚೇರಿಯ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಪಾವಗಡದಿಂದ 100 ಬಸ್‌ಗಳು., ದಾವಣಗೆರೆ ವಿಭಾಗದಿಂದ 200ಕ್ಕೂ ಹೆಚ್ಚು ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಒಟ್ಟಾರೆಯಾಗಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ಸುಗಮ ಸಂಚಾರಿ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Brihat ChapparaNayakanahattiRathotsavaTipperudraswamyತಿಪ್ಪೇರುದ್ರಸ್ವಾಮಿನಾಯಕನಹಟ್ಟಿಬೃಹತ್ ಚಪ್ಪರರಥೋತ್ಸವ
Share This Article
Facebook Email Print
Previous Article Lok Sabha Election ಮತದಾನ ಬಹಿಷ್ಕಾರ | ಭರಮಗಿರಿ ಗ್ರಾಮಸ್ಥರಿಂದ ಸ್ಪಷ್ಟ ಸಂದೇಶ | ಕೆರೆಗೆ ವಾಣಿವಿಲಾಸ ಜಲಾಶಯದಿಂದ ನೀರು ತುಂಬಿಸಿ
Next Article ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನೀತಿ ಸಂಹಿತೆ ಉಲ್ಲಂಘನೆ | 178 ಪ್ರಕರಣ ದಾಖಲು | ಜಿಲ್ಲಾಧಿಕಾರಿ ಟಿ.ವೆಂಕಟೇಶ್
Leave a Comment

Leave a Reply Cancel reply

Your email address will not be published. Required fields are marked *

cooking oil
ಅಡುಗೆ ಎಣ್ಣೆ ಬಳಸುವಾಗ ನೀವು ಮಾಡುವಂತಹ ಈ ತಪ್ಪುಗಳು ನಿಮ್ಮ ಆರೋಗ್ಯಕ್ಕೆ ಹಾನಿಕಾರಕ
Life Style
today bhavishya
ದಿನ ಭವಿಷ್ಯ | ಅಕ್ಟೋಬರ್ 25 | ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ, ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ಅಗತ್ಯ
Dina Bhavishya
ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
ಯಾಂತ್ರಿಕ ಯುಗದಲ್ಲಿ ಕಲೆಯ ಉಳಿವಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ | ಎಸ್.ಕೆ. ಬಸವರಾಜನ್
ಮುಖ್ಯ ಸುದ್ದಿ
ಸರಸ್ವತಿ ಕಾನೂನು ಕಾಲೇಜಿನ 60ನೇ ವರ್ಷದ ವಜ್ರ ಮಹೋತ್ಸವ ಉದ್ಘಾಟನೆ
ಕಾನೂನು ವೃತ್ತಿ ವ್ಯಾಪಾರವಲ್ಲ, ಸಮಾಜ ಸೇವೆ | ಸುಪ್ರೀಂ ಕೋರ್ಟ್ ನ್ಯಾ. ಪ್ರಸನ್ನ ಭಾಲಚಂದ್ರ ವರಾಳೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up