By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    8 hours ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    8 hours ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    21 hours ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    1 day ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    8 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    59 minutes ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    7 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    8 hours ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    1 day ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    1 day ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
Reading: ವಿಜೃಂಭಣೆಯಿಂದ ಜರುಗಿದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ತೇರು | ಲಕ್ಷಾಂತರ ಭಕ್ತರು ಭಾಗೀ..
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿಜೃಂಭಣೆಯಿಂದ ಜರುಗಿದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ತೇರು | ಲಕ್ಷಾಂತರ ಭಕ್ತರು ಭಾಗೀ..

News Desk Chitradurga News
Last updated: 6 March 2026 19:37
News Desk Chitradurga News
6 months ago
Share
ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೊಡ್ಡರಥೋತ್ಸವ
ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೊಡ್ಡರಥೋತ್ಸವ
SHARE

CHITRADURGA NEWS | 06 MARCH 2026

ಚಿತ್ರದುರ್ಗ: ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ 2 ಗಂಟೆಯಿಂದಲೇ ಒಳಮಠದಲ್ಲಿ ಮುಖ್ಯ ಅರ್ಚಕರ ನೇತೃತ್ವದಲ್ಲಿ ಉತ್ಸವ ಮೂರ್ತಿ ಹೊತ್ತು ತರುವ ಪಲ್ಲಕ್ಕಿಯನ್ನು ಧಾರ್ಮಿಕ ವಿಧಿ ವಿಧಾನಗಳಿಂದ ಸಿಂಗರಿಸಲಾಯಿತು. 

ಇದನ್ನೂ ಓದಿ: ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?

ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಇರಿಸಿ, ರಥೋತ್ಸವದ ಬಳಿ ತಂದು ಸಜ್ಜುಗೊಳಿಸಲಾಯಿತು. ಮಧ್ಯಾಹ್ನ 3.33 ರ ಸುಮಾರಿಗೆ ಚಿತ್ತಾ ನಕ್ಷತ್ರದಲ್ಲಿ ಅಸಂಖ್ಯ ಭಕ್ತರು ತಿಪ್ಪೇರುದ್ರಸ್ವಾಮಿ ರಥವನ್ನು ರಥ ತೇರುಬೀದಿಯಿಂದ ಹೊರಮಠದವರೆಗೆ ಎಳೆಯುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು.

ರಥವು ತೇರು ಬೀದಿಯಿಂದ ಪಾದಗಟ್ಟೆಯವರೆಗೆ ಚಲಿಸುವಾಗ ಭಕ್ತರು ರಥಕ್ಕೆ ಬಾಳೆಹಣ್ಣು, ಕಾಳುಮೆಣಸು, ಧವನ, ಹೂವು, ಚೂರು ಬೆಲ್ಲವನ್ನು ಸಮರ್ಪಿಸಿ ತಮ್ಮ ಇತ್ಯರ್ಥವನ್ನು ಈಡೇರಿಸುವಂತೆ ಭಕ್ತಿ ಪೂರ್ವಕವಾಗಿ ಪ್ರಾರ್ಥಿಸುತ್ತಾ ‘ ಶ್ರೀ ತಿಪ್ಪೇರುದ್ರಸ್ವಾಮಿಗೆ ಜಯವಾಗಲಿ’, ‘ಕಾಯಕ ಯೋಗಿಗೆ ಜಯವಾಗಲಿ’ ತಿಪ್ಪೇರುದ್ರಸ್ವಾಮಿ ಮಹಾರಾಜ್ ಕಿ ಜೈ ಎನ್ನುವ ಜಯಘೋಷ ಕೂಗುತ್ತಾ ರಥದ ದೊಡ್ಡ ಗಾತ್ರದ ಮಿಣಿ ಹಗ್ಗ ಎಳೆದು ಧನ್ಯರಾದರು.  

ನಾಡಿನ ಸುಭೀಕ್ಷೆ ಹಾಗೂ ಉತ್ತಮ ಮಳೆ ಬೆಳೆಗಾಗಿ ಪ್ರಾರ್ಥಿಸಿದರು. ಸುಡು ಬಿಸಿಲ ನಡುವೆಯೂ ಲಕ್ಷಾಂತರ ಭಕ್ತರು ವೈಭವದ ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಸಾಕ್ಷಿಯಾದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 06 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್..

ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತರು ಬೆಳಿಗ್ಗೆಯಿಂದಲೇ ಜಾತ್ರೆಗಾಗಿ ನಾಯಕನಹಟ್ಟಿಯತ್ತ ಮುಖ ಮಾಡಿದ್ದರು. ಗುರು ತಿಪ್ಪೇರುದ್ರಸ್ವಾಮಿಯ ಹೊರಮಠ ಹಾಗೂ ಒಳಮಠ ಎರಡೂ ಕಡೆಗಳಲ್ಲಿ ಬೆಳಗ್ಗೆಯಿಂದಲೇ ಬಿಡುವಿಲ್ಲದಂತೆ ಪೂಜಾ ಕಾರ್ಯಗಳು ನಡೆದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಮಹಾಮಹಿಮನ ನೆನಪಿಗಾಗಿ ಜಾತ್ರೆ ಆಚರಣೆ:

ಒಳಮಠದ ಪ್ರಧಾನ ಅರ್ಚಕರಾದ ಶಿವಲಿಂಗಣ್ಣ, ದೊಡ್ಡ ರಥೋತ್ಸವದ ಹಿನ್ನಲೆ ಕುರಿತು ಮಾತನಾಡಿ, ನಾಯಕನಹಟ್ಟಿಯಲ್ಲಿ ಒಳಮಠ, ಹೊರಮಠ ಮತ್ತು ಏಕಾಂತ ಮಠ ಎಂಬ ಮೂರು ಮಠಗಳಿದ್ದು, ಎಲ್ಲಾ ಮಠಗಳ ಸಮನ್ವಯದೊಂದಿಗೆ ಈ ಬೃಹತ್ ರಥೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿಸುತ್ತವೆ. 

ಶ್ರೀ ತಿಪ್ಪೇರುದ್ರಸ್ವಾಮಿಗಳು ಐಕ್ಯರಾದ ನೆನಪಿಗಾಗಿ ಪ್ರತಿ ವರ್ಷ ಈ ಐದು ದಿನಗಳ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗುತ್ತದೆ. ಇದು ಇಲ್ಲಿನ ಅತ್ಯಂತ ಪವಿತ್ರವಾದ ಸಂಪ್ರದಾಯವಾಗಿದೆ.

ಇದನ್ನೂ ಓದಿ: ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆ | 8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಫಾಲ್ಗುಣ ಮಾಸದ ಚಿತ್ತಾ ನಕ್ಷತ್ರದ ಸುಸಂದರ್ಭದಲ್ಲಿ ದೊಡ್ಡ ರಥೋತ್ಸವ ಜರುಗುತ್ತದೆ. ಜಾತ್ರೆಯ ವಿಶೇಷ ಆಚರಣೆ ಎಂದರೆ ಕೊಪ್ಪರಿಕೆ ಸುಡುವುದು. ಕತ್ತಲೆಯಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಸುಜ್ಞಾನದೆಡೆಗೆ ಸಾಗುವುದೇ ಇದರ ಮೂಲ ಆಶಯ. ಭಕ್ತರು ತಮ್ಮ ಇತ್ಯರ್ಥ ಸಿದ್ಧಿಗಾಗಿ ಹಾಗೂ ಹರಕೆಯ ರೂಪದಲ್ಲಿ ಕೊಪ್ಪರಿಕೆಯಲ್ಲಿ ಒಣಕೊಬ್ಬರಿಯನ್ನು ಸುಡುವ ಸೇವೆಯನ್ನು ಅರ್ಪಿಸುತ್ತಾರೆ ಎಂದು ವಿವರಿಸಿದರು.

ಮಾಡಿದಷ್ಟು ನೀಡು ಭಿಕ್ಷೆ: ನಿತ್ಯ ದಾಸೋಹ

ಶ್ರೀ ತಿಪ್ಪೇರುದ್ರಸ್ವಾಮಿಯವರು “ಮಾಡಿದಷ್ಟು ನೀಡು ಭಿಕ್ಷೆ” ಎಂಬ ತತ್ವದಡಿ ಸಮಾಜ ಸೇವೆ ಮಾಡಿದವರು. ಅವರ ಸನ್ನಿಧಿಯಲ್ಲಿ ನಿತ್ಯವೂ ದಾಸೋಹದ ವ್ಯವಸ್ಥೆ ಇರುತ್ತದೆ. ಶ್ರೀ ಕ್ಷೇತ್ರದ ಭಕ್ತೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿ ವಿಮಲಾಕ್ಷೀ ಜಾತ್ರೆಯ ಮಹತ್ವದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು.  

ನಾಯಕನಹಟ್ಟಿಯಲ್ಲಿ ನಡೆಯುವ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆಯು ಮಧ್ಯ ಕರ್ನಾಟಕದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾಗಿದೆ. ಈ ಜಾತ್ರೆಗೆ ಕೇವಲ ಕರ್ನಾಟಕದವರು ಮಾತ್ರವಲ್ಲದೇ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡುಗಳಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಈ ರಥೋತ್ಸವಕ್ಕೆ ಬಹಳಷ್ಟು ಜನರು ಪಾದಯಾತ್ರೆಯ ಮೂಲಕ ಬಂದು ತಮ್ಮ ಭಕ್ತಿ ಸಲ್ಲಿಸುತ್ತಾರೆ, ಅಲ್ಲದೇ ರಥೋತ್ಸವದ ಸಂದರ್ಭದಲ್ಲಿ ದವನ, ಕಾಳು ಮೆಣಸು ಮತ್ತು ಬಾಳೆಹಣ್ಣುಗಳನ್ನು ರಥಕ್ಕೆ ಎಸೆಯುವ ಮೂಲಕ ಜನರು ತಮ್ಮ ಇತ್ಯರ್ಥ ಸಿದ್ಧಿಗಾಗಿ ಪ್ರಾರ್ಥಿಸುತ್ತಾರೆ. 

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರಿಗೆ ಪ್ರಶಿಕ್ಷಣ ವರ್ಗ | ಶಾಸಕ ಡಾ.ಎಂ.ಚಂದ್ರಪ್ಪ ಭಾಗೀ

ಮದುವೆಯಾದ ಹೊಸ ದಂಪತಿಗಳು ರಥದ ಕಳಸವನ್ನು ನೋಡಿದರೆ ಸಂತಾನ ಭಾಗ್ಯ ಲಭಿಸುತ್ತದೆ ಎಂಬ ದೃಢವಾದ ನಂಬಿಕೆಯಿದೆ. ಇದರಿಂದಾಗಿ ಹೊಸ ದಂಪತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೆಗೆ ಆಗಮಿಸುತ್ತಾರೆ ಎಂದು ತಿಳಿಸಿದರು.

ರೂ.32 ಲಕ್ಷಕ್ಕೆ ಮುಕ್ತಿಭಾವುಟ ಹರಾಜು:

ರಥೋತ್ಸವಕ್ಕೂ ಮುನ್ನ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯ ವಿಶೇಷಗಳಲ್ಲಿ ಒಂದಾಗಿರುವ ಮುಕ್ತಿ ಬಾವುಟದ ಹರಾಜು ನಡೆಸಲಾಯಿತು. ಈ ವರ್ಷದ ಮುಕ್ತಿ ಬಾವುಟವನ್ನು ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಹೆಂಜಲಗೆರೆಯ ಶ್ರೀನಾಥ್ ಅವರು ರೂ.32 ಲಕ್ಷ ಗಳಿಗೆ ಹರಾಜು ಮೂಲಕ ಪಡೆದುಕೊಂಡರು.

ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಕಾರಜೋಳ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ ಬಾಬು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜ್, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsNayakanahatti JatreSri Guru Tipperudraswamyಚಿತ್ರದುರ್ಗಚಿತ್ರದುರ್ಗ ನ್ಯೂಸ್ನಾಯಕನಹಟ್ಟಿ ಜಾತ್ರೆಶ್ರೀ ಗುರು ತಿಪ್ಪೇರುದ್ರಸ್ವಾಮಿ
Share This Article
Facebook Email Print
Previous Article ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
Next Article SIDDARAMAIAH BUDJET ಸಿದ್ದು ಬಜೆಟ್‌ನಲ್ಲಿ ಭದ್ರೆಗೆ ಸಿಕ್ಕ ಅನುದಾನವೆಷ್ಟು ? ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ಕೊಡುಗೆ
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up