
CHITRADURGA NEWS | 16 MARCH 2025
ಮಾಡಿದಷ್ಟು ನೀಡು ಭಿಕ್ಷೆ ಎಂಬ ಸಂದೇಶ ಸಾರಿದ ಮಹಾತ್ಮಾ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು.

ಸುಡು ಬಿಸಿಲ ನಡುವೆ ಲಕ್ಷಾಂತರ ಭಕ್ತರು ವೈಭವದ ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಸಾಕ್ಷೀಯಾಗಿ ಭಕ್ತಿ ಭಾವ ಸಮರ್ಪಿಸಿದರು.
ಇದನ್ನೂ ಓದಿ: ಜನಸಾಗರದಲ್ಲಿ ರಾಜಗಾಂಭೀರ್ಯದಲ್ಲಿ ಸಾಗಿದ ನಾಯಕನಹಟ್ಟಿ ತೇರು | ಅದ್ದೂರಿ ರಥೋತ್ಸವಕ್ಕೆ ಅಸಂಖ್ಯ ಭಕ್ತರು

ಶ್ರೀಗುರು ತಿಪ್ಪೇರುದ್ರಸ್ವಾಮಿಯ ಹೊರಮಠ ಹಾಗೂ ಒಳಮಠ ಎರಡೂ ಕಡೆಗಳಲ್ಲಿ ಬೆಳಗ್ಗೆಯಿಂದಲೇ ಬಿಡುವಿಲ್ಲದಂತೆ ಪೂಜಾ ಕಾರ್ಯಗಳು ನಡೆದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಮಧ್ಯಾಹ್ನ 2 ಗಂಟೆಯಿಂದಲೇ ಒಳಮಠದಲ್ಲಿ ಮುಖ್ಯ ಅರ್ಚಕರ ನೇತೃತ್ವದಲ್ಲಿ ಉತ್ಸವ ಮೂರ್ತಿ ಹೊತ್ತು ತರುವ ಪಲ್ಲಕ್ಕಿಯನ್ನು ಧಾರ್ಮಿಕ ವಿಧಿ ವಿಧಾನಗಳಿಂದ ಸಿಂಗರಿಸಲಾಯಿತು. ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಇರಿಸಿ, ರಥೋತ್ಸವದ ಬಳಿ ತಂದು ಸಜ್ಜುಗೊಳಿಸಲಾಯಿತು.

ಇದನ್ನೂ ಓದಿ: ನಾಯಕನಹಟ್ಟಿ ಮುಕ್ತಿ ದೊಡ್ಡ ಮೊತ್ತಕ್ಕೆ ಹರಾಜು | ಈ ಬಾರಿ ಯಾರಿಗೆ ಒಲಿಯಿತು ಮುಕ್ತಿ ಭಾವುಟ ?
ಸಂಜೆ 4.05 ರ ಸುಮಾರಿಗೆ ಚಿತ್ತಾ ನಕ್ಷತ್ರದಲ್ಲಿ ಅಸಂಖ್ಯ ಭಕ್ತರು ತಿಪ್ಪೇರುದ್ರಸ್ವಾಮಿ ರಥವನ್ನು ರಥ ತೇರುಬೀದಿಯಿಂದ ಹೊರ ಮಠದವರೆಗೆ ಎಳೆಯುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು.

ರಥವು ತೇರು ಬೀದಿಯಿಂದ ಪಾದಗಟ್ಟೆಯವರೆಗೆ ಚಲಿಸುವಾಗ ಭಕ್ತರು ರಥಕ್ಕೆ ಬಾಳೆಹಣ್ಣು, ಕಾಳುಮೆಣಸು, ಧವನ, ಹೂವು, ಚೂರು ಬೆಲ್ಲವನ್ನು ಸಮರ್ಪಿಸಿ ತಮ್ಮ ಇಷ್ಠಾರ್ಥವನ್ನು ಈಡೇರಿಸುವಂತೆ ಪ್ರಾರ್ಥಿಸಿದರು.

ಇದನ್ನೂ ಓದಿ: ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ..!!?
ಜಾತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಕಾರಜೋಳ, ಶಾಸಕರಾದ ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ ಬಾಬು,

ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಕವಿತಾ ಮನ್ನಿಕೇರಿ, SP ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹಬೂಬ್ ಜಿಲಾನ್ ಸೇರಿದಂತೆ ಮತ್ತಿತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
