CHITRADURGA NEWS | 04 MAY 2025
ಚಿತ್ರದುರ್ಗ: ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ಭಾನುವಾರದಂದು ಚಿತ್ರದುರ್ಗದಲ್ಲಿ ಜರುಗಿದ ನೀಟ್ ಪರೀಕ್ಷೆ ಸುಗಮವಾಗಿ ಜರುಗಿದ್ದು, ಒಟ್ಟು 141 ವಿದ್ಯಾರ್ಥಿಗಳು ಗೈರಾಗಿದ್ದಾರೆ.
Also Read: ಬೇಸಿಗೆಯಲ್ಲಿ ಶಿಶುಗಳಿಗೆ ಯಾವ ಒಣ ಹಣ್ಣುಗಳನ್ನು ನೀಡಬೇಕು ತಿಳಿಯಿರಿ
ನೀಟ್ ಪರೀಕ್ಷೆಗಾಗಿ ಜಿಲ್ಲೆಗೆ ಒಟ್ಟು 3019 ವಿದ್ಯಾರ್ಥಿಗಳನ್ನು ಹಂಚಿಕೆ ಮಾಡಲಾಗಿತ್ತು. ಇದಕ್ಕಾಗಿ ಒಟ್ಟು 06 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು.
ಭಾನುವಾರದಂದು ಮಧ್ಯಾಹ್ನ 02 ರಿಂದ ಸಂಜೆ 05 ರವರೆಗೆ ಜರುಗಿದ ನೀಟ್ ಪರೀಕ್ಷೆ ಸುಗಮವಾಗಿ ಹಾಗೂ ಯಾವುದೇ ಗೊಂದಲಗಳಿಲ್ಲದ ರೀತಿ ಅಚ್ಚುಕಟ್ಟಾಗಿ ಜರುಗಿದ್ದು, 3019 ವಿದ್ಯಾರ್ಥಿಗಳ ಪೈಕಿ 2878 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 141 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.
ಜಿಲ್ಲೆಯಲ್ಲಿ ಭಾನುವಾರ ಜರುಗಿದ ನೀಟ್ ಪರೀಕ್ಷೆ ಕಾರ್ಯಗಳ ಕುರಿತಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಎಲ್ಲ 06 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ಪ್ರಕ್ರಿಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.
Also Read: ಈಜಿದ ನಂತರ ನಿಮ್ಮ ಕಣ್ಣುಗಳು ಉರಿಯುತ್ತಿದ್ದರೆ ಈ ಸಲಹೆ ಪಾಲಿಸಿರಿ
ನೀಟ್ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಪೊಲೀಸ್ ಬಂದೋಬಸ್ತ್ ಕಾರ್ಯ ಕೈಗೊಳ್ಳಲಾಗಿತ್ತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number