
CHITRADURGA NEWS | 18 JUNE 2026
ಚಿತ್ರದುರ್ಗ: ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ಜೂನ್.21 ರಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET)-2026 ಮರು ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಗೆ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಇದನ್ನೂ ಓದಿ: ಸೌಮ್ಯ ಸ್ವಭಾವದ ಚಳ್ಳಕೆರೆ ಶಾಸಕರ ಬಗ್ಗೆ ಹಗುರ ಮಾತು ಬೇಡ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ನೀಟ್ ಮರು ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷೆ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿ ಹಾಗೂ ಸಿಬ್ಬಂದಿ, ಸಮನ್ವಯತೆಯಿಂದ ಕೆಲಸ ಮಾಡುವ ಮೂಲಕ ಪರೀಕ್ಷೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಈ ಬಾರಿಯ ನೀಟ್ ಪರೀಕ್ಷೆಯು ಜೂನ್ 21 ರ ಭಾನುವಾರದಂದು ಮಧ್ಯಾಹ್ನ 2:00 ಗಂಟೆಯಿಂದ ಸಂಜೆ 5:15 ರವರೆಗೆ ನಡೆಯಲಿದೆ. ಕಳೆದ ಬಾರಿಗಿಂತ ಈ ಬಾರಿ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ 15 ನಿಮಿಷಗಳ ಕಾಲಾವಕಾಶವನ್ನು ನೀಡಲಾಗಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಒಂದು ಗಂಟೆ ಹೆಚ್ಚುವರಿ ಸಮಯಾವಕಾಶ ಇರಲಿದೆ.
ನೀಟ್ ಮರು ಪರೀಕ್ಷೆ ದೇಶದಾದ್ಯಂತ ತೀವ್ರ ಕುತೂಹಲ ಮತ್ತು ಸೂಕ್ಷ್ಮತೆಯನ್ನು ಪಡೆದುಕೊಂಡಿದೆ. ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲವಾಗದಂತೆ ನಿರಾಳವಾಗಿ ಪರೀಕ್ಷೆ ಬರೆಯಲು ಪೂರಕ ವಾತಾವರಣ ನಿರ್ಮಿಸಬೇಕು. ಯಾವುದೇ ಸಣ್ಣ ಲೋಪಕ್ಕೂ ಅವಕಾಶ ನೀಡದಂತೆ ಅಧಿಕಾರಿಗಳು ಹೆಚ್ಚು ಜಾಗರೂಕರಾಗಿ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು.
ಇದನ್ನೂ ಓದಿ: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಪರೀಕ್ಷಾ ದಿನದಂದು ಬಿ.ಎನ್.ಎಸ್ ಕಲಂ 163 ಅಡಿ ನಿಷೇಧಾಜ್ಞೆ ಜಾರಿಗೊಳಿಸಬೇಕು. ಆರೋಗ್ಯ ಇಲಾಖೆಯ ವೈದ್ಯಕೀಯ ಸಿಬ್ಬಂದಿ ನಿಯೋಜಿಸಬೇಕು. ಪರೀಖ್ಷಾ ಕೇಂದ್ರಗಳ ಮುಖ್ಯಸ್ಥರು ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ಕಲ್ಪಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.
6 ಪರೀಕ್ಷಾ ಕೇಂದ್ರ 3086 ವಿದ್ಯಾರ್ಥಿಗಳು ಹಾಜರು:
ನೀಟ್ ಪರೀಕ್ಷೆ ನೋಡಲ್ ಅಧಿಕಾರಿ ನಾಗಭೂಷಣ್ ಮಾತನಾಡಿ, ಚಿತ್ರದುರ್ಗ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು, ಚಳ್ಳಕೆರೆಯ ಹೆಚ್.ಪಿ.ಪಿಸಿ. ಡಿಗ್ರಿ ಕಾಲೇಜು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೀಟ್ ಮರು ಪರೀಕ್ಷೆ ನಡೆಯಲಿದೆ.
ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3086 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯು ಮಧ್ಯಾಹ್ನ 2:00 ರಿಂದ ಸಂಜೆ 5:15 ರವರೆಗೆ ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಕಡೆಯಿಂದ ಮೆಟಲ್ ಡಿಡೆಕ್ಟರ್ ಅಳವಡಿಸಲಾಗುತ್ತದೆ. ಬಾಲಕ ಹಾಗೂ ಬಾಲಕಿಯರಿಗೆ ಪ್ರತ್ಯೇಕವಾಗಿ ಪ್ರಿಸ್ಕಿಂಗ್ ನಡೆಸಲಾಗುವುದು.
ಇದನ್ನೂ ಓದಿ: ಜಿಲ್ಲೆಯ ಶಾಲೆ-ಕಾಲೇಜು, ದೇವಸ್ಥಾನ, ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತಗೊಳಿಸಿ | ಜಿಲ್ಲಾಧಿಕಾರಿ
ಬಯೋಮೆಟ್ರಿಕ್ ದೃಢೀಕರಣದ ನಂತರವೇ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ಶೀಟ್‌ಗಳು ನಗರದ ರಾಷ್ಟ್ರೀಕೃತ ಬ್ಯಾಂಕ್‌ಗೆ ಆಮಿಸುತ್ತವೆ. ಇಲ್ಲಿಂದ ಪರೀಕ್ಷೆಯ ದಿನದಂದು ಜಿಲ್ಲಾಡಳಿತದ ಮಾರ್ಗಾಧಿಕಾರಿಗಳು ಸರ್ಕಾರಿ ವಾಹನದಲ್ಲಿ ಪೊಲೀಸ್ ಬೆಂಗಾವಲಿನಲ್ಲಿ ಪತ್ರಿಕೆಗಳನ್ನು ಕೇಂದ್ರಗಳಿಗೆ ತಲುಪಿಸಲಿದ್ದಾರೆ.
ಪರೀಕ್ಷೆ ಮುಗಿದ ನಂತರ ಓ.ಎಂ.ಆರ್ ಶೀಟ್‌ಗಳನ್ನು ಅಂಚೆ ಮೂಲಕ ಕಳುಹಿಸಿಕೊಡಲಾಗಿದೆ. ಪರೀಕ್ಷೆಯ ಸುಗಮ ನಿರ್ವಹಣೆಗಾಗಿ ಈಗಾಗಲೇ ಜಿಲ್ಲಾಡಳಿತದ ವತಿಯಿಂದ ವೀಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇದರೊಂದಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವತಿಯಿಂದಲೂ ಪ್ರತ್ಯೇಕ ವೀಕ್ಷಕರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಬದ್ದ | ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ
ಜಿ.ಪಂ.ಉಪಕಾರ್ಯದರ್ಶಿ ಎಂ.ಬಾಬು, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಚಿತ್ರದುರ್ಗ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಾಶಿ, ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಹೆಚ್.ದಿವಾಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
