NEET RESULT | SLV PU ಕಾಲೇಜಿಗೆ ದಾಖಲೆಯ ಫಲಿತಾಂಶ

CHITRADURGA NEWS | 15 JUNE 2025

ಚಿತ್ರದುರ್ಗ: 2025ನೇ ಸಾಲಿನ ರಾಷ್ಟ್ರಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್‌) ಫಲಿತಾಂಶ ಪ್ರಕಟವಾಗಿದ್ದು, ನಗರದ ಎಸ್.ಎಲ್.ವಿ ಪದವಿಪೂರ್ವ ಕಾಲೇಜಿಗೆ ದಾಖಲೆಯ ಫಲಿತಾಂಶ ಲಭಿಸಿದೆ.

Also Read: ವೀರಶೈವ ಅರ್ಬನ್ ಕ್ರೆಡಿಟ್ ಕೊ-ಆಪರೇಟಿವ್ ಬ್ಯಾಂಕ್ 89 ಲಕ್ಷ ನಿವ್ವಳ ಲಾಭ

ವಿದ್ಯಾರ್ಥಿಗಳಾದ ಕೆ.ರಕ್ಷಿತಾ 561/720 AIR 2100, ಕೆ.ಕ್ರಾಂತಿ 501 AIR 6627 ರ್ಯಾಂಕ್ ಪಡೆಯುವುದರೊಂದಿಗೆ ರಾಷ್ಟ್ರಮಟ್ಟದಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.

ಕಾಲೇಜಿನಲ್ಲಿ 37 ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್ ಗೆ ಅರ್ಹತೆಯನ್ನು ಪಡೆದಿದ್ದಾರೆ. ಆರ್. ಸೃಷ್ಟಿ, ಚೇತನ್ ಜಿ.ಎಂ. ಸಿಂಚನ, ಸಂತೋಷ್ ಕುಮಾರ್, ಭುವನ ಜಿ.ಎಸ್. ಇನ್ನಿತರ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿರುತ್ತಾರೆ.

ಕಾಲೇಜಿನಲ್ಲಿ ಅನುಭವಿ ಉಪನ್ಯಾಸಕರಿಂದ ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ನಡೆಸಲಾಗುವ ವಿಶೇಷ ತರಗತಿಗಳಿಂದ ಸೂಕ್ತ ಮಾರ್ಗದರ್ಶನದಿಂದ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು ಎಂದು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Also Read: ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಒಣಮೀನನ್ನು ತಿನ್ನಬೇಡಿ

ವಿದ್ಯಾರ್ಥಿಗಳ ಸಾಧನೆಗೆ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಂ.ಚಂದ್ರಪ್ಪ, ಆಡಳಿತ ಅಧಿಕಾರಿಗಳಾದ ಹೆಚ್.ಚಂದ್ರಕಲಾ, ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಕಾಲೇಜಿನ ಪ್ರಾಚಾರ್ಯರಾದ ಯು.ಕೇಶವಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version