CHITRADURGA NEWS | 19 JULY 2026
ಚಿತ್ರದುರ್ಗ: ಚಿತ್ರದುರ್ಗದ ಎಸ್.ಆರ್.ಎಸ್ ಪಿಯು ಕಾಲೇಜು ನೀಟ್ ಫಲಿತಾಂಶದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ರ್ಯಾಂಕ್ ಪಡೆದು ದಾಖಲೆ ನಿರ್ಮಿಸಿದೆ.
ಇದನ್ನೂ ಓದಿ: ಲಿಂಗೈಕ್ಯ ಮಲ್ಲಿಕಾರ್ಜುನ ಶ್ರೀಗಳ 30ನೇ ಸ್ಮರಣೋತ್ಸವ | ಜುಲೈ 20 ರಂದು ಪೂರ್ವಭಾವಿ ಸಭೆ
2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು, ದೇಶದ ಒಟ್ಟು 22 ಲಕ್ಷದ 79 ಸಾವಿರ ವಿದ್ಯಾರ್ಥಿಗಳಲ್ಲಿ ಚಿತ್ರದುರ್ಗ ನಗರದ ಎಸ್.ಆರ್.ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ 75ನೇ ರ್ಯಾಂಕ್ ಪಡೆದುಕೊಳ್ಳುವುದರ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿ, ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಕಾಲೇಜಿನ ವಿದ್ಯಾರ್ಥಿ ಕೆ.ಎಂ.ಸುದರ್ಶನ್ 720 ಕ್ಕೆ 680 ಅಂಕಗಳನ್ನು ಪಡೆದು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಇತಿಹಾಸ ನಿರ್ಮಿಸಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ತುಮಕೂರು, ಮುಂತಾದ ಜಿಲ್ಲೆಗಳ ಫಲಿತಾಂಶಕ್ಕಿಂತ ಪ್ರಥಮ ಸ್ಥಾನ ಪಡೆದು. ರಾಷ್ಟ್ರಮಟ್ಟದ ಅತ್ಯುತ್ತಮ ರ್ಯಾಂಕ್ ದಾಖಲಿಸಿದ್ದಾರೆ.

ನಂತರ ಸ್ಥಾನದಲ್ಲಿ ಕಾಲೇಜಿನ ವಿದ್ಯಾರ್ಥಿನಿ ವೈ.ಎಂ.ಮೇಘನ 609, ಕೆ.ಗಂಗೋತ್ರಿ 562, ಪಿ.ಎನ್.ಅಂಕಿತಾ 557, ಹೆಚ್.ಆರ್.ಆಕಾಶ್ 545, ನಮಿತಾ ರಾಜ್ 535, ಡಿ.ನೇತ್ರ 531, ಆರ್.ಸಂದೇಶ್ 523 ಅತ್ಯುತ್ತಮ ಅಂಕಗಳನ್ನು ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಜನ್ಮ ದಿನಾಚರಣೆ | ಹಲವು ಮಠಾಧೀಶರು ಭಾಗೀ
ಕಾಲೇಜಿನ 63 ವಿದ್ಯಾರ್ಥಿಗಳು 515 ಕ್ಕಿಂತ ಅಧಿಕ ಅಂಕಗಳೊಂದಿಗೆ ಶೇ.93 ರಷ್ಟು ವಿದ್ಯಾರ್ಥಿಗಳು ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟುಗಳನ್ನು ಪಡೆದುಕೊಳ್ಳಲು ಅರ್ಹತೆಗಳಿಸಿದ್ದಾರೆ.
ಇವರೆಲ್ಲರೂ ರೆಗ್ಯೂಲರ್ ಬ್ಯಾಚಿನ ವಿದ್ಯಾರ್ಥಿಗಳಾಗಿದ್ದು, ಎಮ್ಸ್ ಹಾಗೂ ಇತರೆ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ: ಜುಲೈ 25 ರಂದು ಚಿತ್ರದುರ್ಗದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಸಭೆ | ಅಗತ್ಯ ಸಿದ್ದತೆ ಕೈಗೊಳ್ಳಲು ಡಿಸಿ ಸೂಚನೆ
ರಾಷ್ಟ್ರ ಮಟ್ಟದ ರ್ಯಾಂಕ್ ಪಡೆದು ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ, ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

