
CHITRADURGA NEWS | 27 AUGUST 2026
ಚಿತ್ರದುರ್ಗ: ನೇಪಾಳದಲ್ಲಿ ಸಂಭವಿಸಿದ ದಿಢೀರ್ ಪ್ರವಾಹ ಹಾಗೂ ಪ್ರಕೃತಿ ವಿಕೋಪದಲ್ಲಿ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದು, ನೂರಾರು ಮಂದಿ ನಾಪತ್ತೆಯಾಗಿರುವುದಾಗಿ ತಿಳಿದುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಮೂಲದ ನಾಗರಿಕರು ಅಥವಾ ಪ್ರವಾಸಿಗರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ, ಅವರ ವಿವರಗಳನ್ನು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಒದಗಿಸುವಂತೆ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
ಸಾರ್ವಜನಿಕರ ನೆರವಿಗಾಗಿ ತೆರೆಯಲಾಗಿರುವ ಚಿತ್ರದುರ್ಗ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ 08194-222538, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ದೂರವಾಣಿ ಸಂಖ್ಯೆ 080-22253707 ಹಾಗೂ ಉಚಿತ ಸಹಾಯವಾಣಿ (Toll-Free) ಸಂಖ್ಯೆ 1070 ಗೆ ಕರೆ ಮಾಡಿ ನೇಪಾಳಕ್ಕೆ ತೆರಳಿರುವ ಜಿಲ್ಲೆಯ ಪ್ರವಾಸಿಗರ ಮಾಹಿತಿ ಅಥವಾ ಸುರಕ್ಷತೆಯ ಕುರಿತು ತಕ್ಷಣ ವಿವರ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

