
CHITRADURGA NEWS | 27 AUGUST 2026
ಚಿತ್ರದುರ್ಗ: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರಪಾದಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.
ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.
ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ (docs.google.com/forms/d/
ಇಮೇಲ್ ಮೂಲಕ ಮಾಹಿತಿ ನೀಡಲು seockarnataka@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ. ಅಲ್ಲದೆ, ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಗೋಪೂಜೆ, ಧ್ವಜಪೂಜೆ ಮೂಲಕ ಚಾಲನೆ
ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ಕೋರಲು ಪ್ರಕಟಣೆಯಲ್ಲಿ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

