
CHITRADURGA NEWS | 29 JULY 2025
ಚಿತ್ರದುರ್ಗ: ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿಯಲ್ಲಿ ಕಾರ್ಯಾತ್ಮಕ ಗೃಹ ನಳ ಸಂಪರ್ಕದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಆರೋಗ್ಯ ಇಲಾಖೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
ಹೊಸದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಸೋಮವಾರ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತು 15 ದಿನಗಳ “ಕ್ಷೇತ್ರ ಭೇಟಿ ಪರಿಶೀಲನಾ ಆಂದೋಲನದ ಅಂಗವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲೆ ಮತ್ತು ಅಂಗನವಾಡಿಗಳಿಗೆ ಕಡ್ಡಾಯವಾಗಿ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸಬೇಕು. ಗ್ರಾಮಗಳಲ್ಲಿ ಚರಂಡಿಗಳನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಹೊಸದುರ್ಗ ತಾಲ್ಲೂಕಿನ ದೇವಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಿಗೆರೆ, ಗುತ್ತಿಕಟ್ಟೆ, ಬಿಸನಹಳ್ಳಿ ಲಂಬಾಣಿಹಟ್ಟಿ, ಹೆಬ್ಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು, ಮಧುರೆ ಗ್ರಾಮ ಪಂಚಾಯಿತಿಯ ಮಧುರೆ, ಚಿನ್ನಾಪುರ ಮತ್ತು ಕೆಲ್ಲೋಡು ಗ್ರಾಮ ಪಂಚಾಯಿತಿಯ ಮೆಟ್ಟಿನಹೊಳೆ ಗ್ರಾಮಕ್ಕೆ ಭೇಟಿ ನೀಡಿ, ಜೆಜೆಎಂ ಯೋಜನೆಯಡಿ ಅಳವಡಿಸಿರುವ ಗೃಹ ನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ ಹಾಗೂ ಎಫ್‍ಟಿಕೆ-ನೀರಿನ ಗುಣಮಟ್ಟ ಸೇರಿದಂತೆ ಇತರೆ ವರದಿಗಳನ್ನು ಪರಿಶೀಲಿಸಿದರು.
ಇದನ್ನೂ ಓದಿ: ಸ್ನಾತಕೋತ್ತರ ದೃಶ್ಯಕಲಾ ಪದವಿಗೆ ಅರ್ಜಿ ಆಹ್ವಾನ
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಜಲಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ ಎಸ್ ನಾಡರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್, ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನ ಕುಮಾರ್ ಸೇರಿದಂತೆ ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ನೀರುಗಂಟಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
