
CHITRADURGA NEWS | 01 AUGUST 2025
ಚಿತ್ರದುರ್ಗ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾಡಳಿತ ಭವನವನ್ನು ಸರ್ಕಾರಿ ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಿ, ಜಿಲ್ಲಾಧಿಕಾರಿಗಳ ನಿವಾಸ, ತೋಟಗಾರಿಕೆ ಇಲಾಖೆ ಹಾಗೂ ಹಿಂದಿರುವ ಜಾಗದಲ್ಲಿ ಹೊಸ ಡಿಸಿ ಕಚೇರಿ ನಿರ್ಮಾಣ ಮಾಡುವ ಸಂಬಂಧ ಚರ್ಚೆ ನಡೆದಿದೆ.
ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಇದಕ್ಕೆ ಪೂರಕವಾಗಿ ಮಾತನಾಡಿರುವ ಮುಖ್ಯಮಂತ್ರಿಗಳು, ಕಂದಾಯ ಇಲಾಖೆ ಹಾಗೂ ಆರ್‌ಡಿಪಿಆರ್ ಇಲಾಖೆ ಸಚಿವರ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಿ ತೀರ್ಮಾನಕ್ಕೆ ಬಂದು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ವಿಕಾಸ ಸೌಧದಲ್ಲಿ ಗುರುವಾರ(ಇಂದು) ಮುಖ್ಯಮಂತ್ರಿಗಳ ಜೊತೆಗೆ ನಡೆದ ಜಿಲ್ಲೆಯ ಶಾಸಕರು, ಸಚಿವರ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ.
ನಗರದ ಹೊರವಲಯದ ಕುಂಚಿಗನಾಳು ಬಳಿ ನಿರ್ಮಾಣವಾಗುತ್ತಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಸರ್ಕಾರಿ ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಿ, ನಗರದೊಳಗೆ ಹೊಸ ಡಿಸಿ ಕಚೇರಿ ನಿರ್ಮಿಸಲು ಜಿಲ್ಲೆಯ ಜನಪ್ರತಿನಿಧಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದ ಹೊರವಲಯದ ಕುಂಚಿಗನಾಳು ಬಳಿ ನಿರ್ಮಾಣವಾಗುತ್ತಿರುವ ಹೊಸ ಜಿಲ್ಲಾಧಿಕಾರಿ ಕಟ್ಟಡವನ್ನು ಸರ್ಕಾರಿ ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಿ, ಅಲ್ಲಿಯೇ ಹಾಸ್ಟೆಲ್ ನಿರ್ಮಾಣ ಮಾಡಿಕೊಡುವುದು. ಈಗ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಾಣ ಆಗುತ್ತಿರುವ ಕಟ್ಟಡವನ್ನು ಆಸ್ಪತ್ರೆಗೆ ಬಳಕೆ ಮಾಡಿಕೊಳ್ಳಬಹುದು ಎಂಬ ಸಲಹೆ ನೀಡಿದ್ದಾರೆ.
ಮುಖ್ಯಮಂತ್ರಿಗಳು ಈ ಬಗ್ಗೆ ಆರ್‌ಡಿಪಿಆರ್ ಹಾಗೂ ಕಂದಾಯ ಇಲಾಖೆ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ತೀರ್ಮಾನಿಸಿ ಪ್ರಸ್ತಾವನೆ ಸಲ್ಲಿಸಲಿ ಸಲಹೆ ನೀಡಿದ್ದಾರೆ.
ನಗರದಲ್ಲಿರುವ ಜಿಲ್ಲಾಧಿಕಾರಿ ನಿವಾಸದ ಬಳಿ ಐದು ಎಕರೆ, ಅದರ ಹಿಂದಿರುವ ತೋಟಗಾರಿಕೆ ಇಲಾಖೆ ಆವರಣ ಹಾಗೂ ಅದರ ಹಿಂದಿನ ಜಾಗ ಸೇರಿ ಸುಮಾರು 20 ಎಕರೆ ಜಾಗ ಸಿಗಲಿದ್ದು, ಇಲ್ಲಿಯೇ ಜಿಲ್ಲಾಡಳಿತ ಭವನ ನಿರ್ಮಾಣ ಮಾಡಿದರೆ ಜನರಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
