
CHITRADURGA NEWS | 23 JANUARY 2024
ಚಿತ್ರದುರ್ಗ: ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಮಂಗಳವಾರ ಅಧಿಕಾರ ವಹಿಸಿಕೊಂಡರು.

ಜಿಲ್ಲಾಧಿಕಾರಿಯಾಗಿದ್ದ ದಿವ್ಯಪ್ರಭು ಜಿ.ಆರ್.ಜೆ. ಅವರನ್ನು ಸರ್ಕಾರ ಸೋಮವಾರ ರಾತ್ರಿ ವರ್ಗಾವಣೆಗೊಳಿಸಿ, ಅವರ ಜಾಗಕ್ಕೆ ಟಿ.ವೆಂಕಟೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು.
ಇದನ್ನೂ ಓದಿ: ಜಿಲ್ಲಾಧಿಕಾರಿ ದಿವ್ಯಪ್ರಭು ವರ್ಗಾವಣೆ
ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು.
2015 ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ಅವರು ಟಿ.ವೆಂಕಟೇಶ್, ಈ ಮೊದಲು 2006 ರಿಂದ 2010ರವರೆಗೆ ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ, ಆನಂತರ ಹರಪನಹಳ್ಳಿ ಉಪವಿಭಾಗಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ, ಮೈಸೂರು ಜಿಲ್ಲೆ ಅಪರ ಜಿಲ್ಲಾಧಿಕಾರಿ, ರಾಜ್ಯ ಪುರಾತತ್ವ ಇಲಾಖೆ ಆಯುಕ್ತರು, ಕೆಎಸ್‍ಆರ್‍ಟಿಸಿ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಹಾಗೂ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನವಾಗಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಬರ ಪರಿಹಾರ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು, ಅಲ್ಲದೆ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಅರ್ಹ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಆದ್ಯತೆ ನೀಡಲಾಗುವುದು ಎಂದು ನೂತನ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದರು.
ಇದನ್ನೂ ಓದಿ: ಶ್ರೀರಾಮಲಲ್ಲಾ ದರ್ಶನವಾಗುತ್ತಲೇ ನುರಾರು ಸಂತರ ಆನಂದಭಾಷ್ಪ
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಪ್ರಭಾರ ಉಪವಿಭಾಗಾಧಿಕಾರಿ ವಿವೇಕ್, ಜಿ.ಪಂ. ಉಪಕಾರ್ಯದರ್ಶಿ ಬಿ. ಆನಂದ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅಧಿಕಾರ ಸ್ವೀಕಾರಕ್ಕೂ ಮೊದಲು ನೂತನ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಚಳ್ಳಕೆರೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ನಾಯಕನಹಟ್ಟಿಯ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ತಿಪ್ಪೇರುದ್ರಸ್ವಾಮಿ ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿ, ಅಧಿಕಾರ ವಹಿಸಿಕೊಂಡರು.
ಚಿತ್ರದುರ್ಗ ಜಿಲ್ಲೆಯಲ್ಲಿ 2006 ರಿಂದ 2010ರವರೆಗೆ ಚಿತ್ರದುರ್ಗ ಎಸಿ ಆಗಿ ಕಾರ್ಯನಿರ್ವಹಿಸಿದ್ದೆ. ಮಧ್ಯ ಕರ್ನಾಟಕದ ಕೇಂದ್ರವಾಗಿರುವ ಚಿತ್ರದುರ್ಗ ಜಿಲ್ಲೆ ಪ್ರಮುಖ ಜಿಲ್ಲಾ ಕೇಂದ್ರ, ಈಗಾಗಲೇ ಕೆಲಸ ಮಾಡಿರುವುದರಿಂದ ಜಿಲ್ಲೆಯ ಪರಿಚಯ ಇದೆ. ಇಲ್ಲಿನ ಸಮಸ್ಯೆಗಳ ಪರಿಚಯ ಇದೆ. ಹಾಗಾಗಿ ಇಲ್ಲಿ ಕೆಲಸ ಮಾಡಲು ಅನುಕೂಲ ಆಗಲಿದೆ.
| ಟಿ.ವೆಂಕಟೇಶ್, ಚಿತ್ರದುರ್ಗ ಜಿಲ್ಲಾಧಿಕಾರಿ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
