
CHITRADURGA NEWS | 24 February 2025
ಚಿತ್ರದುರ್ಗ: ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಯಂ ಚಾಲಿತ ಮ್ಯುಟೇಷನ್ ವ್ಯವಸ್ಥೆ ಗುರುವಾರದಿಂದ ಚಾಲನೆ ಪಡೆದುಕೊಂಡಿದ್ದು, ಸಾರ್ವಜನಿಕರು ತಮ್ಮ ಜಮೀನುಗಳ ಪಹಣಿಗಳಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 24 | ಹತ್ತಿ ರೇಟ್ ಎಷ್ಟಿದೆ?

ಸಾರ್ವಜನಿಕರು ಗ್ರಾಮ ಆಡಳಿತ ಅಧಿಕಾರಿ /ರಾಜಸ್ಥ ನಿರೀಕ್ಷಕರು / ನಾಡಕಛೇರಿ/ ತಾಲ್ಲೂಕು ಕಛೇರಿಯಲ್ಲಿನ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಪಹಣಿಗಳಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ರಾಜ್ಯಾದ್ಯಂತ ಸ್ವಯಂ ಚಾಲಿತ ಮ್ಯುಟೇಷನ್ ವ್ಯವಸ್ಥೆಯನ್ನು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಗುರುವಾರ ಚಾಲನೆ ನೀಡಿದ್ದು, ಈ ಯೋಜನೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದಿದ್ದಾರೆ.
ಈ ಹಿಂದೆ ಮ್ಯೂಟೆಶನ್ ವ್ಯವಸ್ಥೆ ಹೇಗಿತ್ತು ?
ಈ ಹಿಂದೆ ಎಲ್ಲಾ 7 ದಿನಗಳ ಹಾಗೂ 15 ದಿನಗಳ ನೋಟೀಸು ಅವಧಿ ಹೊಂದಿರುವ ಮುಟೇಶನ ಗಳನ್ನು ನೋಟೀಸು ಅವಧಿಯು ಮುಕ್ತಾಯವಾದ ನಂತರ ಸಂಬಂಧಪಟ್ಟ ರಾಜಸ ನಿರೀಕ್ಷಕರು ಖುದ್ದಾಗಿ ಡಿಜಿಟಲ್ ಸಹಿ ಮೂಲಕ ಅನುಮೋದನೆ ನೀಡುವ ವ್ಯವಸ್ಥೆ ಇತ್ತು. ಇದರಿಂದಾಗಿ ಮ್ಯುಟೇಶನ್ ಅನುಮೋದನೆಗೆ ಹೆಚ್ಚಿನ ಸಮಯ ತಗಲುತ್ತಿತ್ತು.
ಈಗ ಆಗಿರುವ ಬದಲಾವಣೆ ಏನು ?
ಅನಗತ್ಯ ವಿಳಂಬವನ್ನು ತಪ್ಪಿಸಲು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯದಲ್ಲಿ ಸ್ವಯಂ ಚಾಲಿನ ಮ್ಯುಟೇಷನ್‍ಗೆ ಹೊಸ ಪದ್ಧತಿಯನ್ನು ಫೆ.24ರಿಂದ ಜಾರಿಗೆ ತರಲಾಗಿದೆ.
ಇದನ್ನೂ ಓದಿ: ಫೆ.25 ರಿಂದ 26 ರವರೆಗೆ ರೈತರಿಗೆ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಎಲ್ಲಾ 7 ದಿನಗಳ ಹಾಗೂ 15 ದಿನಗಳ ನೋಟೀಸು ಅವಧಿ ಹೊಂದಿರುವ ಮ್ಯುಟೇಷನ್‍ಗಳನ್ನು ನೋಟೀಸು ಅವಧಿಯು ಮುಕ್ತಾಯವಾದ ನಂತರ ತಂತ್ರಾಂಶದ ಮೂಲಕ ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ ಸರ್ವರ್ ಸಹಿ ಮೂಲಕ ಸ್ವಯಂಚಾಲಿತವಾಗಿ ಅನುಮೋದನೆಯಾಗುವಂತೆ ಭೂಮಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ.
ತಕರಾರು ಸಲ್ಲಿಸಲೂ ಅವಕಾಶವಿದೆ:07 ಕೆಲಸದ ದಿನಗಳು ಅಥವಾ 15 ಕೆಲಸದ ದಿನಗಳ ನೋಟೀಸ್ ಅವಧಿಯೊಳಗೆ ಕಂದಾಯ ನಿರೀಕ್ಷಕರು (ಸರ್ಕಾರಿ ಆಕ್ಷೇಪ) ಅಥವಾ ಸಾರ್ವಜನಿಕರ ಯಾವುದೇ ತಕರಾರು ನೀಡಿದ್ದಲ್ಲಿ, ಈ ಮ್ಯುಟೇಷನ್ ಅನ್ನು ಪೂರ್ಣಗೊಳಿಸದ ಆರ್.ಸಿ.ಸಿ.ಎಂ.ಎಸ್ ತಂತ್ರಾಂಶದ ತಹಶೀಲ್ದಾರರ ನ್ಯಾಯಾಲಯಕ್ಕೆ ಅಂತಹ ಪ್ರಕರಣವನ್ನು ವರ್ಗಾಯಿಸಲಾಗುತ್ತದೆ. ತಹಶೀಲ್ದಾರರ ನಿರ್ಧಾರದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಈ ಹಿಂದೆ ಮ್ಯುಟೇಷನ್ ಗಳಿಗೆ ಆಕ್ಷೇಪಣೆ ಇದ್ದಲ್ಲಿ ಅಥವಾ ಅನುಮೋದನೆ ನೀಡಬೇಕಾದಲ್ಲಿ ರಾಜಸ್ವ ನಿರೀಕ್ಷಕರು ತಾಲ್ಲೂಕು ಕಛೇರಿಗಳಿಗೆ ಬಂದು ಸಲ್ಲಿಸಬೇಕಾಗಿತ್ತು.
ಈ ಹಿಂದೆ ಮ್ಯುಟೇಷನ್ ಗಳಿಗೆ ಆಕ್ಷೇಪಣೆ ಇದ್ದಲ್ಲಿ ಅಥವಾ ಅನುಮೋದನೆ ನೀಡಬೇಕಾದಲ್ಲಿ ರಾಜಸ್ವ ನಿರೀಕ್ಷಕರು ತಾಲ್ಲೂಕು ಕಛೇರಿಗಳಿಗೆ ಬಂದು ಸಲ್ಲಿಸಬೇಕಾಗಿತ್ತು.
ಆದರೆ ಪ್ರಸ್ತುತ, ರಾಜಸ್ವ ನಿರೀಕ್ಷಕರಿಗೆ ಲಾಗಿನ್ ನೀಡಲಾಗಿದ್ದು, ಯಾವುದೇ ಸ್ಥಳದಿಂದ ಆಕ್ಷೇಪಣೆ ಸಲ್ಲಿಸಲು ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ ಹಾಗೂ ಅನುಮೋದನೆಯಾಗುತ್ತದೆ.
ಇದನ್ನೂ ಓದಿ: ಮೊಬೈಲ್ ಕ್ಯಾಂಟಿನ್ | ಸಹಾಯಧನಕ್ಕೆ ಅರ್ಜಿ ಆಹ್ವಾನ
ಪಿಟಿಸಿಎಲ್, ಸರ್ಕಾರಿ ಭೂಮಿ ಇದರ ವ್ಯಾಪ್ತಿಗೆ ಬರಲ್ಲ:ಭೂಮಿ ತಂತ್ರಾಂಶದಲ್ಲಿ ಸರ್ಕಾರಿ ಜಮೀನುಗಳು, ಸರ್ಕಾರಿ ನಿಬಂಧನೆ ಇರುವ ಜಮೀನುಗಳು ಹಾಗೂ ಪಿಟಿಸಿಎಲ್ ವ್ಯಾಪ್ತಿಗೆ ಬರುವ ಜಮೀನುಗಳನ್ನು ಫ್ಲಾಗ್ ಮಾಡಲಾಗಿದ್ದು, ಅಂತಹ ಜಮೀನುಗಳನ್ನು ನೋಂದಣಿ ಮಾಡಲು ಸಾಧ್ಯವಾಗುವುದಿಲ್ಲ ಮತ್ತು ಇಂತಹ ಜಮೀನುಗಳು ಸ್ವಯಂಚಾಲಿತ ಮ್ಯುಟೇಷನ್ ವ್ಯಾಪ್ತಿಗೆ ಬರುವುದಿಲ್ಲ.
ಇ-ಚಾವಡಿ ಮೂಲಕ ವೀಕ್ಷಣೆಗೂ ಅವಕಾಶ:
ಮ್ಯುಟೇಷನ್ ಪೂರ್ಣಗೊಂಡ ನಂತರ ಸಂಬಂಧಪಟ್ಟವರಿಗೆ ಎಸ್. ಎಂ. ಎಸ್. ಸಂದೇಶ ಮೂಲಕ ಮಾಹಿತಿಯನ್ನು ನೀಡಲಾಗುತ್ತಿದೆ ಮತ್ತು ಸಂಬಂಧಿಸಿದ ನೋಟೀಸುಗಳನ್ನು ಇ-ಚಾವಡಿ ಮೂಲಕ ತಂತ್ರಾಂಶದಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.
ಇದರಿಂದ ಮಧ್ಯವರ್ತಿಗಳು ಜನರನ್ನು ದುರುಪಯೋಗಪಡಿಸಿಕೊಳ್ಳದಂತೆ, ನೆಮ್ಮದಿಯಿಂದ ಬದುಕಲು ಆಗುತ್ತದೆ. ಜನರಿಗೆ ಅನಗತ್ಯ ಹೊರೆ ಕಡಿಮೆ ಮಾಡಿ, ಸರ್ಕಾರಿ ಸೇವೆಗಳ ಸರಳೀಕರಣ ಮತ್ತು ಸುಲಲಿತವಾಗಿ ಜನರ ಮನೆಬಾಗಿಲಿಗೆ ಸೇವೆಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ: ಕೇಂದ್ರ ಸಚಿವ ವಿ.ಸೋಮಣ್ಣ ಚಿತ್ರದುರ್ಗ ಜಿಲ್ಲಾ ಪ್ರವಾಸ
ಕಂದಾಯ ಇಲಾಖೆಯಿಂದ ರಾಜಸ್ವ ನಿರೀಕ್ಷಕರುಗಳಿಗೆ ಕ್ರೋಮ್‍ಬುಕ್‍ನ್ನು ಏಪ್ರಿಲ್‍ನಿಂದ ನೀಡಲು ವ್ಯವಸ್ಥೆ ಮಾಡಲಾಗುತ್ತಿದ್ದು ಇನ್ನು ಮುಂದೆ ಕಂದಾಯ ಇಲಾಖೆಯ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಪ್ರಯತ್ನ ಮಾಡಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
