
CHITRADURGA NEWS | 31 DECEMBER 2025
- ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ ಹೊಸವರ್ಷ ವನ್ನು ಶಾಂತಿಯುತವಾಗಿ ಆಚರಿಸೋಣ ಹಾಗೂ ಯಾವುದೇ ರೀತಿಯ ತೊಂದರೆಯಾಗದಂತೆ, ಅಹಿತಕರ ಘಟನೆ ನಡೆಯದಂತೆ ಸಂಭ್ರಮದಿಂದ ಆಚರಿಸೋಣ.
- ಹೊಸವರ್ಷ ಆಚರಣೆ ಸಮಯದಲ್ಲಿ ಅಕ್ಕಪಕ್ಕದ ಜನರಿಗೆ ತೊಂದರೆಯಾಗದಂತೆ ವಿಶೇಷವಾಗಿ ಆಸ್ಪತ್ರೆಗಳು, ಹಿರಿಯ ನಾಗರೀಕರಿಗೆ, ಮಹಿಳೆಯರಿಗೆ/ಹೆಣ್ಣುಮಕ್ಕಳಿಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸೂಕ್ತ ಎಚ್ಚರವಹಿಸಬೇಕು ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
- ಸಾರ್ವಜನಿಕ/ಜನಸಂದಣಿ ಪ್ರದೇಶದಲ್ಲಿ ಅರಚುವುದು, ಕೂಗುವುದು, ಅಸಭ್ಯವರ್ತನೆ, ಪಟಾಕಿಗಳನ್ನು ಸಿಡಿಸಬಾರದು ಯಾವುದೇ ಅಗ್ನಿ ಅವಘಡಗಳು ಆಗದಂತೆ ಮುನ್ನೆಚರಿಕೆ ಕ್ರಮ ತೆಗೆದುಕೊಳ್ಳುವುದು.
- ಕುಡಿದು ವಾಹನ ಚಲಾವಣೆ ಮಾಡುವಂತಿಲ್ಲ, ಚಲಾಯಿಸುವವರ ವಿರುದ 10,000 ರೂ ದಂಡ ವಿರುತ್ತದೆ.
- ನಗರದ ಎಲ್ಲಾ ಕಡೆಗಳಲ್ಲಿ ತೀವ್ರ ನಿಗಾ ಇಡಲು ಹೆಚ್ಚಿನ ಸಿಸಿಟಿವಿ ಕ್ಯಾಮರಗಳೂ ಹಾಗೂ ಸಿಬ್ಬಂದಿಯವರು ಮತ್ತು ಡೋನ್ ಕ್ಯಾಮೆರಗಳನ್ನು ಬಳಸಲಾಗಿರುತ್ತದೆ.
- ರಸ್ತೆಯಲ್ಲಿ ವೀಲಿಂಗ್ ಮಾಡುವುದು, ಕೇಕ್ ಕಟ್ ಮಾಡುವುದು, ಸಾರ್ವಜನಿಕರಿಗೆ ತೊಂದರೆಯಾಗುವಂತೆ ವರ್ತಿಸುವಂತಿಲ್ಲ.
- ನೈತಿಕ ಪೊಲೀಸ್‌ಗಿರಿ ಮತ್ತು ಅನುಚಿತ ವರ್ತನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
- ಈ ಹೊಸವರ್ಷ ಆಚರಣೆಯಲ್ಲಿ ಪ್ರತಿಯೊಬ್ಬ ನಾಗರಿಕನ ಸುರಕ್ಷತೆ ಮೊದಲೆ ಆದ್ಯತೆ ಆಗಿದ್ದು, ತುಂಬಾ ಕರ್ನಾಟಕ ಸರ್ಕಾರದ ನಿರ್ದೇಶನದಂತೆ ಹೊಸವರ್ಷವನ್ನು ಜವಾಬ್ದಾರಿತವಾಗಿ ಜಾಗರುಕತೆಯಿಂದ ಆಚರಿಸೋಣ.
- ಮುಖ್ಯವಾಗಿ ಯುವ ಜನತೆ ವಾಹನವನ್ನು ಮದ್ಯಪಾನ ಮಾಡಿ ಚಾಲನೆ ಮಾಡುವುದು ಮತ್ತು ಅತಿ ವೇಗ ಮತ್ತು ಆಜಾಗರೂಕತೆಯಿಂದ ಚಾಲನೆ ಮಾಡುವಂತಿಲ್ಲ.
- ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂಧಿಗಳು ಹೊಸವರ್ಷ ದಲ್ಲಿ ಸೂಕ್ತ ಬಂದೋಬಸ್ತ್ ಹಾಗೂ ಹಾಗೂ ಆಚರಣೆಯ ಮೇಲೆ ಕಣ್ಣಾವಲು ಇಟ್ಟಿರುತ್ತಾರೆ.
- ಹೊಸವರ್ಷ ಆಚರಣೆಯ ಕಾರ್ಯಕ್ರಮದ ಆಯೋಜಕರು ಹಾಗೂ ಸಾರ್ವಜನಿಕರು ನಿಗದಿತ ಸಮಯಕ್ಕೆ ಮುಕ್ತಾಯ ಮಾಡುವುದು.
- ಯಾವುದೇ ಸಣ್ಣಪುಟ್ಟ ಘಟನೆಗಳು ಸಂಭವಿಸಿದ್ದಲ್ಲಿ ಅಥವಾ ಯಾವುದೇ ರೀತಿಯ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಡಯಲ್-112 ಗೆ ಹಾಗೂ ಜಿಲ್ಲಾ ನಿಯಂತ್ರಣ ಕೊಠಡಿ ಸಂಖ್ಯೆ 9480803100 ಗೆ ಕರೆ ಮಾಡಿ ಸಹಾಯ ಪಡೆಯಬಹುದು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
