
CHITRADURGA NEWS | 15 DECEMBER 2025
ಚಿತ್ರದುರ್ಗ: ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ವೈವಾಹಿಕ ಪ್ರಕರಣಗಳು ಸುಖಾಂತ್ಯಗೊಂಡಿದ್ದು, ಒಟ್ಟು 9 ಜೋಡಿಗಳು ವೈಮನಸ್ಸು ಮರೆತು ಮತ್ತೆ ಒಂದಾದ ಘಟನೆ ಲೋಕ ಅದಾಲತ್‌ನಲ್ಲಿ ನಡೆದಿದೆ.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಚಿತ್ರದುರ್ಗ ಜಿಲ್ಲೆಯಾದ್ಯಂತ ಡಿ.13ರಂದು ಶನಿವಾರ ನಡೆದ 2025ರ ವರ್ಷದ ಕೊನೆಯ ಮೆಗಾ ಲೋಕ್ ಅದಾಲತ್‍ನಲ್ಲಿ ಈ ಪ್ರಕ್ರಿಯೆ ನಡೆದಿದೆ.
ಇದನ್ನೂ ಓದಿ: ಶಾಮನೂರು ನಿಧನಕ್ಕೆ ಮುರುಘಾ ಮಠದ ಸಂತಾಪ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ ವಾಸುದೇವ ಅವರ ನೇತೃತ್ವದಲ್ಲಿ ಮೆಗಾ ಲೋಕ ಅದಾಲತ್ ನಡೆಯಿತು.
ಜಿಲ್ಲೆಯಲ್ಲಿನ 09 ಕೌಟುಂಬಿಕ ಪ್ರಕರಣಗಳಲ್ಲಿನ ವಿವಾದಗಳನ್ನು ಬಗೆಹರಿಸಿ ದೂರ-ದೂರ ಇದ್ದ ಪತಿ-ಪತ್ನಿಯನ್ನು ಒಂದು ಮಾಡಿ ಒಟ್ಟಿಗೆ ಜೀವನ ಮಾಡುವಂತೆ ಸಂಧಾನ ಮಾಡಲಾಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 15 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಈ ಲೋಕ್ ಅದಾಲತ್‍ನಲ್ಲಿ ಚಾಲ್ತಿಯಲ್ಲಿರುವ ಒಟ್ಟು 4,913 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, ಅವುಗಳ ಪೈಕಿ 3,840 ಪ್ರಕರಣಗಳು ರಾಜಿಯಾಗಿರುತ್ತವೆ. ಅವುಗಳಲ್ಲದೇ ವ್ಯಾಜ್ಯ ಪೂರ್ವ ಪ್ರಕರಣಗಳು 75,637 ಪ್ರಕರಣಗಳು ರಾಜಿಯಾಗಿವೆ.
ವಿಶೇಷವಾಗಿ ಚೆಕ್ ಅಮಾನ್ಯದ ಪ್ರಕರಣಗಳು ಒಟ್ಟು 168, ರಾಜಿಯಾಗಲ್ಲ ಅಪರಾಧಿಕ ಪ್ರಕರಣ 48, ಬ್ಯಾಂಕ್ ವಸೂಲಾತಿ ಪ್ರಕರಣಗಳು 57, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣ 80, ಆಸ್ತಿ ಭಾಗದ ಪ್ರಕರಣ 47, ಅಮಲ್‍ಜಾರಿ ಪ್ರಕರಣಗಳು 116, ಜನನ ನೊಂದಣಿ ಪ್ರಕರಣಗಳು 595 ಸೇರಿದಂತೆ ರಾಜಿ ಸಂಧಾನದ ಮುಖಾಂತರ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡಿರುತ್ತಾರೆ.
ಇದನ್ನೂ ಓದಿ: ಶೀಲ ಶಂಕಿಸಿ ಹೆಂಡತಿಯನ್ನೇ ಕೊಂದ ಪತಿಗೆ ಜೀವಾವಧಿ ಶಿಕ್ಷೆ
ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿರುತ್ತದೆ. ಇದರಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ, ಕಂದಾಯ ಪ್ರಕರಣ, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ವಿದ್ಯುತ್ ಹಾಗೂ ನೀರಿನ ಶುಲ್ಕ ಪ್ರಕರಣಗಳು, ಕೌಟುಂಬಿಕ ಕಲಹ, ಬಾಡಿಗೆ ಅನುಭೋಗದ ಹಕ್ಕು ಹಾಗೂ ಭೂ ಪರಿಹಾರ ಕೇಸುಗಳು ಸೇರಿ ಹಲವು ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಅನೇಕ ಪ್ರಕರಣಗಳು ಇತ್ಯರ್ಥಗೊಂಡವು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
