CHITRADURGA NEWS | 26 JUNE 2024
ಚಿತ್ರದುರ್ಗ: ಚಿತ್ರದುರ್ಗ ನಿರ್ಮಿತಿ ಕೇಂದ್ರದಲ್ಲಿ ಈ ಹಿಂದಿನ ಯೋಜನಾ ನಿರ್ದೇಶಕರ ಅವಧಿಯಲ್ಲಿ ಆಗಿರುವ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಒಡಿ ಗೆ ವಹಿಸಲು ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ ಮುಖ್ಯ ರಸ್ತೆ ಅಗಲೀಕರಣಕ್ಕೆ ತೀರ್ಮಾನ | ಸಚಿವ ಡಿ.ಸುಧಾಕರ್ ಸೂಚನೆ | ಎಲ್ಲ ಶಾಸಕರ ಸಹಮತ

ನಿರ್ಮಿತಿ ಕೇಂದ್ರದ ಈಗಿನ ಯೋಜನಾ ನಿರ್ದೇಶಕ ಹರೀಶ್ ಮಾತನಾಡಿ, ನಿರ್ಮಿತಿ ಕೇಂದ್ರದ ಮೂಲಕ ಒಂದು ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಹಿಂದಿನ ಅಧಿಕಾರಿಗಳ ಅವಧಿಯಲ್ಲಿ ಭೌತಿಕವಾಗಿ ನಡೆದಿರುವ ಕಾಮಗಾರಿ ಗಿಂತಲೂ ಹೆಚ್ಚಿನ ಹಣವನ್ನು ಪಾವತಿಸಿರುವುದು ಹಾಗೂ ಖರ್ಚು ಮಾಡಿರುವುದು ಕಂಡುಬಂದಿದೆ. ಈಗಾಗಲೆ ಈ ಕುರಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲಿಸಲಾಗಿದೆ ಎಂದರು.
ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
