
CHITRADURGA NEWS | 20 JANUARY 2026
ಚಿತ್ರದುರ್ಗ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ನಿತಿನ್ ನಬಿನ್ ಅವರಿಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು ಒನಕೆ ಓಬವ್ವ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಆಚರಿಸಿದರು.
ಇದನ್ನೂ ಓದಿ: ದಕ್ಷಿಣ ಕರ್ನಾಟದಲ್ಲೇ ಚಿತ್ರದುರ್ಗದ ತಲಾದಾಯ ಕಡಿಮೆ | ರಾಜ್ಯದ ಸರಸಾರಿ ತಲಾದಾಯ ಎಷ್ಟು ? | ಚಿತ್ರದುರ್ಗದ ತಲಾದಾಯವೆಷ್ಟು..?

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಕಿರಿಯ ವಯಸ್ಸಿನಲ್ಲೇ ಶಾಸಕರಾಗಿ, ಸತತವಾಗಿ ಜನಮನ್ನಣೆ ಪಡೆದು ಸಚಿವರಾಗಿ ಕರ್ತವ್ಯ ನಿರ್ವಹಿಸಿ, ಅನೇಕ ರಾಜ್ಯಗಳಲ್ಲಿ ಪಕ್ಷ ಸಂಘಟನೆ ನಡೆಸಿ, ಇದೀಗ ಬಿಜೆಪಿ ಇತಿಹಾಸದಲ್ಲೇ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷರು ಎಂಬ ಖ್ಯಾತಿಗೆ ನಿತಿನ್ ನಬಿನ್ ಅವರು ಪಾತ್ರರಾಗಿದ್ದಾರೆ. ಅವರ ಕಾರ್ಯಾವಧಿಯಲ್ಲಿ ಬಿಜೆಪಿ ಪಕ್ಷವು ಸಂಘಟನಾತ್ಮಕವಾಗಿ ಇನ್ನಷ್ಟು ಬಲಿಷ್ಠವಾಗಲಿದೆ ಎಂದರು.
ನಿತಿನ್ ನಬಿನ್ ಅವರು ಬಿಹಾರ ಬಿಜೆಪಿಯ ಹಿರಿಯ ನಾಯಕ ಹಾಗೂ ಪಾಟ್ನಾದಿಂದ ನಾಲ್ಕು ಬಾರಿ ಶಾಸಕರಾಗಿದ್ದ ದಿವಂಗತ ನಬಿನ್ ಕಿಶೋರ್ ಪ್ರಸಾದ್ ಸಿಂಹ ಅವರ ಪುತ್ರ. ತಂದೆಯ ನಿಧನದ ಬಳಿಕ ಬಿಹಾರ ಬಿಜೆಪಿಯಲ್ಲಿ ಅವರು ಶಕ್ತಿಶಾಲಿ ಮತ್ತು ಪ್ರಭಾವಿ ನಾಯಕರಾಗಿ ಬೆಳದಿದ್ದಾರೆ.
ಆರ್‍ಎಸ್‍ಎಸ್ ಜೊತೆ ನಿಕಟ ಸಂಬಂಧ ಹೊಂದಿರುವ ನಬಿನ್, ಸಂಘಟನಾ ಚತುರ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ನೂತನ ಹುದ್ದೆಗೆ ಸ್ಪರ್ಧಿಸುವ ಮೊದಲು ನಿತಿನ್ ನವೀನ್ ಅವರು, ಬಿಹಾರ ಸರ್ಕಾರದ ಕಾನೂನು ಮತ್ತು ನ್ಯಾಯ ಹಾಗೂ ವಸತಿ ಖಾತೆ ಸಚಿವ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದರು.
ಇದನ್ನೂ ಓದಿ: ಅಡಿಕೆ ಧಾರಣೆ | 20 ಜನವರಿ | ಇಂದಿನ ಅಡಿಕೆ ಮಾರುಕಟ್ಟೆ ವಿವರ
ಪಕ್ಷದ ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ಉನ್ನತ ನಾಯಕತ್ವದವರೆಗೆ ಸಂಪರ್ಕ ಹೊಂದಿರುವ ಅವರ ನಾಯಕತ್ವದಿಂದ ಮುಂದಿನ ದಿನಗಳಲ್ಲಿ ಬಿಜೆಪಿಯ ಸಂಘಟನಾ ಬಲ ಮತ್ತಷ್ಟು ಗಟ್ಟಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿರುವ ನಿತಿನ್ ನಬಿನ್, ಕೇವಲ 45ನೇ ವಯಸ್ಸಿಗೆ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಕೇಂದ್ರ ಸಚಿವರಾಗಿದ್ದ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಪೂರ್ಣಗೊಂಡ ಬಳಿಕ ನಡೆದ ಪಕ್ಷದ ಸಾಂಸ್ಥಿಕ ಚುನಾವಣೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಹಾರದಲ್ಲಿ ಸಂಖ್ಯಾತ್ಮಕವಾಗಿ ಸಣ್ಣ ಗುಂಪಾದ ಕಾಯಸ್ಥ ಸಮುದಾಯಕ್ಕೆ ಸೇರಿದವರಾಗಿದ್ದು, ಅವರ ಉನ್ನತಿಯು ಜಾತಿ ಲೆಕ್ಕಾಚಾರಕ್ಕಿಂತ ಸಂಘಟನಾ ಸಾಮಥ್ರ್ಯಕ್ಕೆ ಬಿಜೆಪಿ ನಾಯಕತ್ವದ ಆದ್ಯತೆಯನ್ನು ಒತ್ತಿ ಹೇಳುತ್ತದೆ ಎಂದರು.
ಇದನ್ನೂ ಓದಿ: ನಾಲ್ವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ | ಚಿತ್ರದುರ್ಗಕ್ಕೆ ಹೊಸ AC
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಯುವ ಮುಖಂಡ ಡಾ.ಸಿದ್ದಾರ್ಥ ಗುಂಡಾರ್ಪಿ, ನಗರಾಧ್ಯಕ್ಷ ಲೋಕೇಶ್, ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಮಲ್ಲಿಕಾರ್ಜನ್, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಸಿದ್ದೇಶ್, ರೇಖಾ, ಬಸಮ್ಮ, ಸುಮಾ, ಕವಿತ, ಸಿಂಧು, ತನಯ, ನಿವೀನ್, ಕಿರಣ್, ಮಹಂತೇಶ್, ಅರುಣ್, ಚಂದ್ರಶೇಖರ್, ಛಲವಾದಿ ತಿಪ್ಪೇಸ್ವಾಮಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
