By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    7 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    9 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    9 hours ago
    ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
    ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
    9 hours ago
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    13 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 day ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    21 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 day ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    19 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    20 hours ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    2 days ago
    Consume omkalu and asafoetida powder
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
    3 days ago
Reading: ಜಿಲ್ಲಾ‌‌ ಆಸ್ಪತ್ರೆಯಿಂದ ಬೇರೆ ಆಸ್ಪತ್ರೆಗೆ ರೋಗಿಗಳ ಶಿಫಾರಸ್ಸು ಬೇಡ | ಜಿಲ್ಲಾಧಿಕಾರಿ ‌ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲಾ‌‌ ಆಸ್ಪತ್ರೆಯಿಂದ ಬೇರೆ ಆಸ್ಪತ್ರೆಗೆ ರೋಗಿಗಳ ಶಿಫಾರಸ್ಸು ಬೇಡ | ಜಿಲ್ಲಾಧಿಕಾರಿ ‌ಸೂಚನೆ

News Desk Chitradurga News
Last updated: 8 January 2026 19:14
News Desk Chitradurga News
3 months ago
Share
ಜಿಲ್ಲಾಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ
ಜಿಲ್ಲಾಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ
SHARE

CHITRADURGA NEWS | 08 JANUARY 2026

ಚಿತ್ರದುರ್ಗ: ತುರ್ತು ಚಿಕಿತ್ಸೆಗಾಗಿ ರೋಗಿಗಳು ಜಿಲ್ಲಾಸ್ಪತ್ರೆಗೆ ಆಗಮಿಸಿದಾಗ ಅವರನ್ನು ಬೇರೆಡೆಗೆ ಶಿಫಾರಸ್ಸು ಮಾಡುವುದು ನಿಲ್ಲಬೇಕು. ತುರ್ತು ಸಂದರ್ಭದಲ್ಲಿ ಅಗತ್ಯ ತಜ್ಞ ವೈದರು ಜಿಲ್ಲಾಸ್ಪತ್ರೆಯಲ್ಲಿ ತಕ್ಷಣಕ್ಕೆ ಲಭ್ಯವಿಲ್ಲದಿದ್ದರೆ, ಕೂಡಲೇ ಜಿಲ್ಲಾ ಕೇಂದ್ರದಲ್ಲಿರುವ ಖಾಸಗಿ ಆಸ್ಪತ್ರೆಗಳ ತಜ್ಞ ವೈದ್ಯರ ಎರವಲು ಸೇವೆ ಪಡೆದು, ಚಿಕಿತ್ಸೆ ನೀಡಿ ಜೀವ ಉಳಿಸುವ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಇದನ್ನೂ ಓದಿ: ಕೃಷಿ ಹೊಂಡ ತೋಡಿಸಲು ರೈತರಿಂದ ಅರ್ಜಿ ಆಹ್ವಾನ 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳನ್ನು ಅನಗತ್ಯವಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಶಿಫಾರಸ್ಸು ಮಾಡುತ್ತಿರುವುದಾಗಿ ಅಲ್ಲಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ವ್ಯವಸ್ಥೆ ಬದಲಾಗಬೇಕು, ಸದ್ಯ ಜಿಲ್ಲಾಸ್ಪತ್ರೆ ವೈದ್ಯಕೀಯ ಕಾಲೇಜಿನೊಂದಿಗೆ ಸಂಯೋಜನೆಗೊಂಡಿದೆ. ಎರಡೂ ಕಡೆ ಅಗತ್ಯ ಇರುವ ತಜ್ಞ ವೈದ್ಯರು ಹಾಗೂ ಬೋಧಕರನ್ನು ನೇಮಿಸಿಕೊಳ್ಳಲಾಗಿದೆ. ಆದಾಗ್ಯೂ ಖಾಸಗಿ ಆಸ್ಪತ್ರೆ, ಬೆಂಗಳೂರು ಹಾಗೂ ದಾವಣಗೆರೆಗೆ ರೋಗಿಗಳನ್ನು ಶಿಫಾರಸ್ಸು ಮಾಡುವುದು ನಿಂತಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬೇಸರ ವ್ಯಕ್ತಪಡಿಸಿದರು.

ಹೆರಿಗೆ ವಿವರಗಳ ಸಂಪೂರ್ಣ ಮಾಹಿತಿ ನೀಡಲು ಸೂಚನೆ:

ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್ ಹೆರಿಗೆಗಳು ಹೆಚ್ಚಾಗುತ್ತಿರುವುದರ ಕುರಿತು ಕಳೆದ ಆರೋಗ್ಯ ರಕ್ಷಾ ಸಮಿತಿ, ಕೆಡಿಪಿ ಸಭೆಗಳಲ್ಲಿ ಕಳವಳ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಸಹಜ ಹೆರಿಗೆಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿತ್ತು. ಆದರೂ ಸಹಜ ಹೆರಿಗೆಗಳಿಗೆ ಹೋಲಿಸಿದರೆ, ಸಿಜೇರಿಯನ್ ಹೆರಿಗೆಗಳ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಜಿಲ್ಲಾಶಸ್ತ್ರಚಿಕಿತ್ಸಕರು ಸೂಕ್ತ ವಿವರಣೆಗಳನ್ನು ಮಾಹಿತಿ ಪುಸ್ತಕದಲ್ಲಿ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆಕ್ಷೇಪ ವ್ಯಕ್ತಪಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಕೆಳದ ವರ್ಷ ಹಾಗೂ ಪ್ರಸಕ್ತ ವರ್ಷದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾದವರ ಸಂಪೂರ್ಣ ಮಾಹಿತಿಯನ್ನು ಸಿದ್ದಪಡಿಸಬೇಕು. ಇದರೊಂದಿಗೆ ಪ್ರಥಮ ಬಾರಿಗೆ ಸಿಜೆರಿಯನ್ ಹೆರಿಗೆಯಾದವರು ಹಾಗೂ ಎರಡನೇ ಬಾರಿಗೆ ಸಿಜೇರಿಯನ್ ಹೆರಿಗೆಯಾದವರ ವಿವರನ್ನು ಪ್ರತ್ಯೇಕವಾಗಿ ನೀಡಬೇಕು. 

ಇವುಗಳನ್ನು ತುಲನಾತ್ಮವಾಗಿ ವಿಶ್ಲೇಷಿಸಿದಾಗ ಮಾತ್ರವೇ ಹೆರಿಗೆ ವಿಚಾರದಲ್ಲಿ ಜಿಲ್ಲಾಸ್ಪತ್ರೆ ಸುಧಾರಿಸದಯೇ ಅಥವಾ ಇಲ್ಲವೇ ಎಂಬುದು ತಿಳಿದು ಬರುತ್ತದೆ. ಮುಂದಿನ ಕೆ.ಡಿ.ಪಿ ಸಭೆಯ ಹೊತ್ತಿಗೆ ಸಂಪೂರ್ಣ ಮಾಹಿತಿಯನ್ನು ಸಿದ್ದಪಡಿಸಿ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಮೂಲಭೂತ ಸೌಕರ್ಯ ಒದಗಿಸಲು ನಿರ್ದೇಶನ:  

ಜಿಲ್ಲಾಸ್ಪತ್ರೆಗೆ ಬಣ್ಣ ಹಚ್ಚುವುದರಿಂದ ಮೂಲಭೂತ ಸೌಕರ್ಯಗಳು ಸುಧಾರಿಸುವುದಿಲ್ಲ. ಕುಡಿಯುವ ನೀರು, ಶೌಚಾಲಯ ಹಾಗೂ ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಗಮನಹರಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.

ಇದನ್ನೂ ಓದಿ: ಮದುವೆ ಮಾಡಲಿಲ್ಲವೆಂದು ತಂದೆಯನ್ನೇ ಕೊಂದ ಮಗ

ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿರುವ ಸಿಬ್ಬಂದಿ ಕೆಲಸದ ಸಮಯದಲ್ಲಿ ಅನಧಿಕೃತವಾಗಿ ಗೈರು ಹಾಜರಾಗುತ್ತಿರುವ ಕುರಿತು ದೂರು ಕೇಳಿಬಂದಿದೆ. ಸುಮಾರು 100 ಜನ ಗ್ರೂಪ್ ಡಿ ಸಿಬ್ಬಂದಿ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರೂ, ಎಲ್ಲಿಯೂ ಸ್ವಚ್ಛತೆ ಕಂಡು ಬರುವುದಿಲ್ಲ. 

ಎಲ್ಲಾ ವೈದ್ಯಕೀಯ, ಅರೆ ವೈದ್ಯಕೀಯ, ಕ್ಲರಿಕಲ್, ನರ್ಸ್, ಸೆಕ್ಯುರಿಟಿ, ಗ್ರೂಪ್ ಡಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಬೇಕು. ದಿನಕ್ಕೆ ನಾಲ್ಕು ಬಾರಿ ಬಯೋಮೆಟ್ರಿಕ್ ಹಾಜರಾತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ತಾಕೀತು:

ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ಔಷಧೋಪಕರಣಗಳ ಟೆಂಡರ್ ಪ್ರಕ್ರಿಯೆಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ಜಿಲ್ಲಾ ಶಸ್ತ್ರಚಿಕಿತ್ಸಕರಯ ಆರ್ಥಿಕ ವೆಚ್ಚದ ಅಧಿಕಾರದಡಿ ಖರ್ಚು ಮಾಡಿದ ವೆಚ್ಚದ ಮಾಹಿತಿಯನ್ನು ಜಿಲ್ಲಾಸ್ಪತ್ರೆ ಅಧೀಕ್ಷಕರು ಆದೇಶಗಳ ಸಹಿತ ವರದಿ ನೀಡಬೇಕು. ರಾಜ್ಯ ಔಷದೋಗ್ರಾಣದಿಂದ ಸರಬರಾಜು ಆಗುವ ಔಷಧ ಹಾಗೂ ವೈದ್ಯಕೀಯ ಉಪಕರಣಗಳ ಹೊರತು ಪಡಿಸಿ, ಬೇರೆ ಔಷಧಗಳ ಖರೀದಿಗೆ ಮಾತ್ರ ಟೆಂಡರ್ ಕರೆಯಬೇಕು. 

ಇದನ್ನೂ ಓದಿ: 25 ಜನ ರೈತರಿಗೆ ಕುರಿ ಮತ್ತು ಮೇಕೆ ಸಾಕಣಿಕೆ ತರಬೇತಿ

ಔಷಧೋಗ್ರಾಣದಿಂದ ಸರಬರಾಜು ಮಾಡಿದ ಔಷಧ ಹಾಗೂ ಉಪಕರಣಗಳು ರೋಗಿಗಳ ಬಳಕೆ ಯೋಗ್ಯವಾಗಿಲ್ಲ ಎಂದು ಎನಿಸಿದರೇ, ಕೂಡಲೇ ವರದಿ ನೀಡಿ. ಈ ಕುರಿತು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಗಮನಸೆಳೆಯಲಾಗುವುದು. 

ಒಂದು ವೇಳೆ ಸರಬರಾಜು ಆದ ಔಷಧಗಳಿಗೆ ಮತ್ತೊಮ್ಮೆ ಟೆಂಡರ್ ಕರೆದು ಔಷಧಗಳನ್ನು ಪಡೆದಿರುವುದು ಗಮನಕ್ಕೆ ಬಂದರೆ, ಸಂಬಂದಪಟ್ಟವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು. 

ಇದೇ ವೇಳೆ ಎ.ಬಿ.ಆರ್.ಕೆ ಅನುದಾನದಲ್ಲಿ ವೈದ್ಯರಿಗೆ ನೀಡಿಬೇಕಾದ ಭತ್ಯೆಯನ್ನು ಕೂಡಲೇ ಪಾವತಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಸ್ತ್ರಚಿಕಿತ್ಸಕರಿಗೆ ಸೂಚಿಸಿದರು.

ತಿಂಗಳಿಗೊಮ್ಮೆ ಆರೋಗ್ಯ ರಕ್ಷಾ ಸಮಿತಿ ಸಭೆ:

ಆರೋಗ್ಯ ರಕ್ಷಾ ಸಮಿತಿ ಸದಸ್ಯರೊಂದಿಗೆ ಜಿಲ್ಲಾಶಸ್ತ್ರಚಿಕಿತ್ಸಕ ನೇತೃತ್ವದಲ್ಲಿ ಪ್ರತಿ ತಿಂಗಳು ಸಭೆ ನಡೆಸಬೇಕು. ಜಿಲ್ಲಾಸ್ಪತ್ರೆಯ ಕಾರ್ಯವೈಖರಿಯಲ್ಲಿ ಬದಲಾವಣೆ ತರಬೇಕು. ನಿಗದಿತ ಮಾರ್ಗಸೂಚಿಗಳನ್ನು ಆಧರಿಸಿ ಚಿಕಿತ್ಸೆ ನೀಡಬೇಕು. ವಾರ್ಡ್‍ಗಳಲ್ಲಿ ಅನಗತ್ಯವಾಗಿ ರೋಗಿಗಳ ಸಂಬಂಧಿಕರು ಆಗಮಿಸದಂತೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಹಾಕರ್ ಜೋನ್ ನಿರ್ಮಾಣ:

ಜೋಗಿಮಟ್ಟಿ ಸರ್ಕಲ್ ಸಂಪರ್ಕಿಸುವ ಜಿಲ್ಲಾಸ್ಪತ್ರೆಯ ಮುಂದಿನ ರಸ್ತೆಯನ್ನು ಹಾಕರ್ ಜೋನ್ ಆಗಿ ಪರಿವರ್ತನೆ ಮಾಡಿ, ನಗರಸಭೆಯಿಂದ ಬೀದಿಬದಿ ವ್ಯಾಪಾರಿಗಳಿಗೆ ನೀಡಬೇಕು. ಇದರೊಂದಿಗೆ ಖಾಸಗಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಇದಕ್ಕಾಗಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯಿಂದ ಅನುಮೋದನೆ ಪಡೆದು ತಕ್ಷಣ ಕಾರ್ಯಪ್ರವೃತ್ತವಾಗುವಂತೆ ನಗರಸಭೆ ಆಯುಕ್ತರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಇದನ್ನೂ ಓದಿ: ಗ್ರಾಮ ಪಂಚಾಯಿತಿಗಳಿಗೆ ಜಿ.ಪಂ ಸಿಇಒ ಡಾ.ಆಕಾಶ್ ಭೇಟಿ | ಅಂಗನವಾಡಿ, ಗ್ರಂಥಾಲಯ ಪರಿಶೀಲನೆ

ಜಿಲ್ಲಾಸ್ಪತ್ರೆಯಲ್ಲಿ ಏಪ್ರಿಲ್-2025 ರಿಂದ ಡಿಸೆಂಬರ್-2025 ವರೆಗೆ ಒಟ್ಟು 4,948 ಹೆರಿಗೆಗಳು ಸಂಭವಿಸಿವೆ. ಈ ಪೈಕಿ 1,449 ಸಹಜ, 3,499 ಸಿಜೇರಿಯನ್ ಹೆರಿಗೆಗಳಾಗಿವೆ. ಒಟ್ಟು 3,27,453 ಹೊರ ರೋಗಿಗಳು ಹಾಗೂ 40,477 ಒಳರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. 952 ಮೇಜರ್,242 ಮೈನರ್, 16 ಎಲ್.ಟಿ.ಓ, 29 ತುರ್ತು ಶಸ್ತ್ರಚಿಕಿತ್ಸೆ ಸೇರಿಸಿ 1,274 ಶಸ್ತ್ರಚಿಕಿತ್ಸೆ ನಡೆಸಲಾಗಿದೆ. 796 ಟ್ರಾಮಾ, 642 ಕಣ್ಣಿನ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ. 5,710 ಸಿ.ಟಿ.ಸ್ಕ್ಯಾನ್, 9,750 ಎಂ.ಆರ್.ಐ ಸ್ಕಾನ್ ಮಾಡಲಾಗಿದೆ. 888 ರೋಗಿಗಳು 8,693 ಸೈಕಲ್‍ಗಳಷ್ಟು ಡಯಾಲಿಸಿಸ್ ನಡೆಸಲಾಗಿದೆ ಎಂದು ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ನಗರಸಭೆ ಆಯುಕ್ತೆ ಲಕ್ಷ್ಮಿ, ನಿವಾಸಿ ವೈದ್ಯಾಧಿಕಾರಿ ಆನಂದ್ ಪ್ರಕಾಶ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಡಾ.ಶೀತಲ್ ಪ್ರಶಾಂತ, ಕೋಟೆಶ್, ಟಿ.ಆರ್.ಕಿರಣ್‍ಶಂಕರ್, ಗೋವಿಂದರಾಯ, ಆರ್.ಹಬೀಬುಲ್ಲಾ, ಸಕ್ಕರೆ ನಾಗರಾಜ, ಎಂ.ಆರ್.ಸಿ. ಮೂರ್ತಿ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDeputy Commissioner VenkateshDistrict Hospitalಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ‌‌ ಆಸ್ಪತ್ರೆಜಿಲ್ಲಾಧಿಕಾರಿ ವೆಂಕಟೇಶ್
Share This Article
Facebook Email Print
Previous Article ಕೃಷಿ ಹೊಂಡ ಕೃಷಿ ಹೊಂಡ ತೋಡಿಸಲು ರೈತರಿಂದ ಅರ್ಜಿ ಆಹ್ವಾನ 
Next Article ಸಿದ್ದರಾಮೇಶ್ವರ ಜಯಂತಿ ಆಚರಣೆ | ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಚಂದ್ರಪ್ಪ ಜನವರಿ 14,15 ರಂದು ಹೊಳಲ್ಕೆರೆ ಪಟ್ಟಣದಲ್ಲಿ ಸಿದ್ದರಾಮೇಶ್ವರ ಜಯಂತಿ ಆಚರಣೆ | ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಚಂದ್ರಪ್ಪ
Leave a Comment

Leave a Reply Cancel reply

Your email address will not be published. Required fields are marked *

JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
ಮುಖ್ಯ ಸುದ್ದಿ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಮುಖ್ಯ ಸುದ್ದಿ
ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
ಮುಖ್ಯ ಸುದ್ದಿ
ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up