CHITRADURG NEWS | 14 AUGUST 2025
ಚಿತ್ರದುರ್ಗ: ಮೀಸಲಾತಿಯಿಂದ ವಂಚಿತರಾದವರಿಗೆ ಸಾಮಾಜಿಕ ನ್ಯಾಯ ಸಿಗಬೇಕಾಗಿರುವುದರಿಂದ ಒಳ ಮೀಸಲಾತಿಯನ್ನು ಜಾರಿಗೊಳಿಸುವಂತೆ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಇದನ್ನೂ ಓದಿ: ಆ.22 ರಂದು ರಾಜ್ಯಮಟ್ಟದ ಯೋಗಾಸನ ಚಾಂಪಿಯನ್ ಶಿಪ್ | ಪತ್ರಿಕಾಗೋಷ್ಠಿಯಲ್ಲಿ ಕೆ.ಸಿ.ವೀರೇಂದ್ರ(ಪಪ್ಪಿ) ವಿವರಣೆ
ಮಾದಾರ ಚನ್ನಯ್ಯ ಗುರುಪೀಠದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗಮೋಹನ್‍ದಾಸ್ ಆಯೋಗ ದತ್ತಾಂಶ ಸಂಗ್ರಹಿಸಿ ಈಗಾಗಲೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳಿಗೆ ನ್ಯಾಯ ಸಿಗಬೇಕಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳನ್ನು ಭೇಟಿ ಮಾಡಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಮನವಿ ಮಾಡಿದ್ದೇವೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸಹೋದರ ಸಮುದಾಯದ ಕೆಲವು ನಾಯಕರುಗಳಿಂದ ಗೊಂದಲಗಳು ಕೇಳಿ ಬರುತ್ತಿವೆ. ಎಡಗೈ ಸಮುದಾಯಕ್ಕೆ ಸೇರಿದ ಕೆಲವರನ್ನು ಬಲಗೈ ಸಮುದಾಯಕ್ಕೆ, ಬಲಗೈ ಸಮುದಾಯಕ್ಕೆ ಸೇರಿದ ಕೆಲವರನ್ನು ಎಡಗೈ ಸಮುದಾಯಕ್ಕೆ ಸೇರಿಸಲಾಗಿದೆ. ಅದೇನೆ ಇದ್ದರೂ ಮೊದಲು ಮೀಸಲಾತಿಯನ್ನು ಜಾರಿಗೊಳಿಸಿ ನಂತರ ಗೊಂದಲಗಳನ್ನು ಸರಿಪಡಿಸಿಕೊಳ್ಳಲಿ ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಮುಖ್ಯಮಂತ್ರಿ ಭೇಟಿಯಾದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನಿಯೋಗ
ರಾಜ್ಯ ಸರ್ಕಾರ ಕರೆದಿರುವ ವಿಶೇಷ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು. ಯಾವುದೇ ಕಾರಣಕ್ಕೂ ಮುಂದೂಡಬಾರದು.
ಸರ್ಕಾರ ಮತ್ತೊಂದು ಉಪ ಸಮಿತಿ ರಚಿಸುವುದಾಗಿ ಸಾರ್ವಜನಿಕರಿಂದ ಊಹಾಪೋಹಗಳು ಕೇಳಿ ಬರುತ್ತಿವೆ. ನಮ್ಮ ಮಠ 101 ಜಾತಿಗಳ ಹಿತವನ್ನು ಬಯಸುತ್ತದೆ. ಯಾರಿಗೂ ಅನ್ಯಾಯವಾಗುವುದು ಬೇಡ. ಆಯಾ ಜಾತಿಗನುಗುಣವಾಗಿ ಮೀಸಲಾತಿ ದೊರಕಲಿ ಎಂದು ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿಗಳು ಹೇಳಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
