ಮುಖ್ಯ ಸುದ್ದಿ
ಬಿಜೆಪಿಗೆ ನೂತನ ಮಂಡಲ ಅಧ್ಯಕ್ಷರ ಆಯ್ಕೆ
CHITRADURGA NEWS | 22 JANUARY 2025
ಚಿತ್ರದುರ್ಗ: ಜಿಲ್ಲಾ ಬಿಜೆಪಿಯಲ್ಲಿ ಬದಲಾವಣೆ ಪರ್ವ ಪ್ರಾರಂಭವಾಗಿದ್ದು, ಪಕ್ಷದ ಸಂಘಟನಾ ಕಾರ್ಯಕ್ರಮದಡಿ ನಾಲ್ಕು ಮಂಡಲಗಳಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ಮಲ್ಲಾಪುರ ಕೆರೆ ನಿರ್ಲಕ್ಷ್ಯ | ಸುಮೋಟೊ ಕೇಸ್ | ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ
ಚಿತ್ರದುರ್ಗ ನಗರ, ಗ್ರಾಮಾಂತರ, ಹಿರಿಯೂರು ಹಾಗೂ ಹೊಳಲ್ಕೆರೆ ತಾಲೂಕುಗಳಿಗೆ ಹೊಸ ಅಧ್ಯಕ್ಷರ ಆಯ್ಕೆಯಾಗಿದ್ದು, ಹೊಸದುರ್ಗ, ಮೊಳಕಾಲ್ಮೂರು, ನಾಯಕನಹಟ್ಟಿ, ಭರಮಸಾಗರ ಮಂಡಲಗಳ ಅಧ್ಯಕ್ಷರ ಆಯ್ಕೆ ಬಾಕಿ ಉಳಿಸಲಾಗಿದೆ.
ಆಯ್ಕೆಯಾದ ನೂತನ ಅಧ್ಯಕ್ಷರು:
ಜಿಲ್ಲೆಯ ವಿವಿಧ ಮಂಡಲಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಎ.ಮುರುಳಿ ಪ್ರಕಟಣೆ ಹೊರಡಿಸಿದ್ದಾರೆ.
ಇದನ್ನೂ ಓದಿ: ಮೈಸೂರು ಮಹಾರಾಜರಿಂದ ವಾಣಿವಿಲಾಸ ಸಾಗರಕ್ಕೆ ಬಾಗೀನ ಅರ್ಪಣೆ
ಚಿತ್ರದುರ್ಗ ನಗರ ಘಟಕದ ಅಧ್ಯಕ್ಷರಾಗಿ ಎಚ್.ಎನ್.ಲೋಕೇಶ್‍ಕುಮಾರ್, ಚಿತ್ರದುರ್ಗ ಗ್ರಾಮಾಂತರ ಅಧ್ಯಕ್ಷರಾಗಿ ಕೆ.ನಾಗರಾಜಪ್ಪ, ಹಿರಿಯೂರು ಮಂಡಲ ಅಧ್ಯಕ್ಷರಾಗಿ ಕೆ.ಅಭಿನಂದನ್ ಹಾಗೂ ಹೊಳಲ್ಕೆರೆ ಮಂಡಲ ಅಧ್ಯಕ್ಷರಾಗಿ ಎ.ಇ.ವಸಂತಕುಮಾರ್ ನೇಮಕವಾಗಿದ್ದಾರೆ.