
CHITRADURGA NEWS | 28 JULY 2025
ಚಿತ್ರದುರ್ಗ: ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ( ದಿಶಾ) ಸಮಿತಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಸೇರಿದಂತೆ ಎಂಟು ಜನರ ನಾಮನಿರ್ದೇಶನ ಮಾಡಿ ಜಿಪಂ ಸಿಇಓ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ನಗರಸಭೆ ಉಪಾಧ್ಯರ ಚುನಾವಣೆ | ಶಕೀಲಾಬಾನು ಅವಿರೋಧ ಆಯ್ಕೆ

ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಗೆ (ದಿಶಾ ) ಸಮಿತಿ ಚಿತ್ರದುರ್ಗ ಜಿಲ್ಲೆಯ ಎಂಟು ಜನರನ್ನು ಸಂಸದ ಗೋವಿಂದ ಎಂ.ಕಾರಜೋಳ ಅವರ ಶಿಫಾರಸ್ಸಿನ ಮೇರೆಗೆ ಕೇಂದ್ರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವಾಲಯ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿರುತ್ತಾರೆ.
ಈ ಸಮಿತಿಯು ಕನಿಷ್ಟ ಸರ್ಕಾರ, ಗರಿಷ್ಟ ಆಡಳಿತ ಎನ್ನುವ ಧ್ಯೇಯವನ್ನು ಇಟ್ಟುಕೊಂಡು ಕೆಲಸ ನಿರ್ವಹಿಸಲಿದೆ, ದಿಶಾ ಸಮಿತಿತ ಮುಖ್ಯ ಉದ್ದೇಶವೇನೆಂದರೆ ಕೇಂದ್ರ ಪುರಸ್ಕೃತ ಯೋಜನೆಗಳ ಯಶಸ್ವಿ ಅನುಷ್ಟಾನ ಮತ್ತು ಉತ್ತಮ ಗುಣಮಟ್ಟವನ್ನು ಖಚಿತಪಡಿಸುವುದು ಹಾಗೂ ಸಾರ್ವಜನಿಕ ನಿಧಿಗಳ ಮೇಲೆ ನಿಗಾ ವಹಿಸುವುದು, ಯೋಜನೆಗಳ ಮೇಲ್ವಿಚಾರಣೆ ಮಾಡುವುದಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಚಳ್ಳಕೆರೆ ತಾಲ್ಲೂಕಿನಿಂದ ಪರಿಶಿಷ್ಟ ಪಂಗಡ ಕೋಟಾದಡಿ ಕೆ.ಟಿ.ಕುಮಾರಸ್ವಾಮಿ, ಪರಿಶಿಷ್ಟ ಜಾತಿ ಕೋಟಾದಡಿ ಚಿತ್ರದುರ್ಗ ನಗರದ ಎಲ್.ಭರತ್ ಹಾಗೂ ಹೊಸದುರ್ಗ ತಾಲ್ಲೂಕಿನ ಲಕ್ಷ್ಮಣ, ಸರ್ಕಾರೇತರ ಸಂಘಗಳ ಕೋಟಾದಡಿ ಮೊಳಕಲ್ಮೂರು ತಾಲ್ಲೂಕಿನ ಟಿ.ಗೋವಿಂದಪ್ಪ ಮಹಿಳಾ ಕೋಟಾದಡಿ ಹಿರಿಯೂರಿನ ಟಿ.ಮಂಜುಳಾ ಹಾಗೂ ಚಳ್ಳಕೆರೆ ತಾಲ್ಲೂಕಿನ ಕೆ.ಆರ್.ವೆಂಕಟಲಕ್ಷ್ಮೀ, ಸಾಮಾನ್ಯ ವರ್ಗದ ಕೋಟಾದಡಿ ಚಿತ್ರದುರ್ಗ ನಗರದ ಸಂತೋಷ್ ಗುಡಿಮಠ್ ಹಾಗೂ ಹೊಳಲ್ಕೆರೆ ತಾಲ್ಲೂಕಿನ ರಾಜಶೇಖರ್ ನಾಮನಿದೇರ್ಶನವಾಗಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
