
CHITRADURGA NEWS | 28 SEPTEMBER 2025
ಚಿತ್ರದುರ್ಗ: ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆ. 22 ರಿಂದ ಪ್ರಾರಂಭವಾಗಿದ್ದು, ಗಣತಿ ಕಾರ್ಯಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಆದರೆ ಚಿತ್ರದುರ್ಗ ತಾಲ್ಲೂಕಿನಲ್ಲಿ ಈವರೆಗೆ ಗಣತಿ ಕಾರ್ಯಕ್ಕೆ ವರದಿ ಮಾಡಿಕೊಳ್ಳದಿರುವ 68 ಗಣತಿದಾರರಿಗೆ ನೋಟಿಸ್ ಜಾರಿ ಮಾಡಿದ್ದು, ಶಿಸ್ತು ಕ್ರಮಕ್ಕೂ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು, ಗೈರು ಮತ್ತು ನಿರ್ಲಕ್ಷ್ಯ ತೋರುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಮುರುಘಾ ಮಠದಲ್ಲಿ 5 ಸಾವಿರಕ್ಕೂ ಅಧಿಕ ಬಸವ ಭಕ್ತರಿಂದ ವಚನ ಝೇಂಕಾರ
ಈ ಕುರಿತಂತೆ ಸಮೀಕ್ಷಾ ಕರ್ತವ್ಯಕ್ಕೆ ಗೈರಾದ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದಾಗ್ಯೂ ಚಿತ್ರದುರ್ಗ ತಾಲ್ಲೂಕಿನಲ್ಲಿಯೇ ಸುಮಾರು 68 ಗಣತಿದಾರರು, ಸಮೀಕ್ಷಾ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ಹೀಗಾಗಿ ಈ ಎಲ್ಲ 68 ಗಣತಿದಾರರಿಗೂ ನೋಟಿಸ್ ಜಾರಿಗೊಳಿಸಲಾಗಿದ್ದು, ಶಿಸ್ತು ಕ್ರಮಕ್ಕೂ ಪ್ರಕ್ರಿಯೆ ಆರಂಭಿಸಲಾಗಿದೆ. ಮೇಲ್ವಿಚಾರಣೆ ಹಾಗೂ ತಮ್ಮ ಜವಾಬ್ದಾರಿ ನಿಭಾಯಿಸಲು ವಿಫಲರಾದ ಡಿಡಿಪಿಐ, ಬಿಇಒ, ತಹಸಿಲ್ದಾರ್ ಹಾಗೂ ತಾಲ್ಲೂಕು ನೋಡಲ್ ಅಧಿಕಾರಿಯಾಗಿರುವ ಉಪವಿಭಾಗಾಧಿಕಾರಿಗೂ ನೋಟಿಸ್ ನೀಡಲಾಗಿದೆ.
ಇದನ್ನೂ ಓದಿ: KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ | ಸಂಸದರಿಂದ ಗಾಯಾಳುಗಳ ಭೇಟಿ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಇಲ್ಲಸಲ್ಲದ ನೆಪವೊಡ್ಡಿ, ಗೈರು ಹಾಜರಾದಲ್ಲಿ ಅಥವಾ ನಿರ್ಲಕ್ಷ್ಯ ತೋರಿದಲ್ಲಿ ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಅಂಥವರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಎಚ್ಚರಿಕೆ ನೀಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
