
CHITRADURGA NEWS | 25 FEBRUARY 2025
ಚಿತ್ರದುರ್ಗ: ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ತಾಂತ್ರಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನರೇಗಾ ತಾಂತ್ರಿಕ ಸಹಾಯಕರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.
Also Read: ಮೂವರು PDO ಗಳ ವೇತನ ಬಡ್ತಿಗೆ ಬ್ರೇಕ್ | ಕಾರಣ ಏನು ಗೊತ್ತಾ ?

ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿ.ರಂಜಿತಾ, ಚಳ್ಳಕೆರೆ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಮೋನಿಷ ಅವರು ಕಳೆದ 2024 ರ ಜುಲೈ ತಿಂಗಳಿನಿಂದ ಈವರೆಗೂ ಯಾವುದೇ ಅನುಮತಿ ಇಲ್ಲದೆ ಗೈರು ಹಾಜರಾಗಿದ್ದು, ಹೀಗಾಗಿ ಇವರ ಸೇವೆ ಇಲಾಖೆಗೆ ಅಗತ್ಯವಿಲ್ಲವೆಂದು ಪರಿಗಣಿಸಿ, ಇಬ್ಬರನ್ನೂ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
