
CHITRADURGA NEWS | 31 JANUARY 2026
ಚಿತ್ರದುರ್ಗ: ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ, ಹಳ್ಳಿ ಜನರ ಬದುಕಿನ ವೈವಿಧ್ಯತೆ ಹಾಗೂ ಅವರ ಜೀವನ ನಿರ್ವಹಣಾ ಕ್ರಮಗಳನ್ನು ಪ್ರಾಯೋಗಿಕವಾಗಿ ಅರಿತುಕೊಳ್ಳಬೇಕು. ಆಗ ಮಾತ್ರ ಶಿಕ್ಷಣಕ್ಕೆ ಒಂದು ಅರ್ಥ ಸಿಗುತ್ತದೆ ಎಂದು ಎಸ್‍ಆರ್‍ಎಸ್ ಸಂಸ್ಥೆಯ ಆಡಳಿತಾಧಿಕಾರಿ ಡಾ. ಟಿ.ಎಸ್. ರವಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಶೀಘ್ರದಲ್ಲೇ ಬೆಂಗಳೂರಿನಲ್ಲಿ SC – ST ಸಮಾವೇಶ | ಮಾಜಿ ಸಚಿವ ಎಚ್.ಆಂಜನೇಯ
ಚಿತ್ರದುರ್ಗ ತಾಲ್ಲೂಕಿನ ಅನ್ನೇಹಾಳ್ ಜಂಪಣ್ಣನಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಎಸ್‍ಆರ್‍ಎಸ್ ಪ್ರಥಮ ದರ್ಜೆ ಕಾಲೇಜಿನ 2025-26ನೇ ಸಾಲಿನ ಎನ್.ಎಸ್.ಎಸ್ ವಿಶೇಷ ವಾರ್ಷಿಕ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜಿ.ಪಿ.ನಂದನ್ ಮಾತನಾಡಿ, ಈ ವಿಶೇಷ ಶಿಬಿರವು ಕೇವಲ ಜಾಗೃತಿ ಮೂಡಿಸುವ ವೇದಿಕೆಯಲ್ಲ, ಬದಲಾಗಿ ವಿದ್ಯಾರ್ಥಿಗಳ ಆತ್ಮಾವಲೋಕನ ಹಾಗೂ ಹೊಸ ವಿಷಯಗಳ ಕಲಿಕೆಗೆ ಪೂರಕವಾದ ತಾಣವಾಗಿದೆ ಎಂದರು.
ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳಾದ ದೇವೇಂದ್ರಪ್ಪ ಕೆ. ಕುಂಚಿಗನಾಳ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿ ಜೀವನದ ಅಮೂಲ್ಯ ಕ್ಷಣಗಳಲ್ಲಿ ಈ ಶಿಬಿರವೂ ಒಂದು. ಇಲ್ಲಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ಅದ್ಭುತ ಸಾಧನೆಯ ಹಾದಿಯಲ್ಲಿ ಸಾಗಬೇಕು ಎಂದು ಶಿಬಿರಾರ್ಥಿಗಳನ್ನು ಹುರಿದುಂಬಿಸಿದರು.
ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನ | ಸಾರ್ವಜನಿಕರಿಗೆ ಆಹ್ವಾನ ಪತ್ರಿಕೆ ವಿತರಣೆ
ಎನ್ ಎಸ್ ಎಸ್ ವಿಶೇಷ ವಾರ್ಷಿಕ ಶಿಬಿರವು ಜ.28 ರಿಂದ ಪ್ರಾರಂಭವಾಗಿದ್ದು, ಫೆ.03 ರವರೆಗೆ ನಡೆಯಲಿದೆ. ಈ ಶಿಬಿರದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಗ್ರಾಮದ ಸ್ವಚ್ಛತೆ, ಜನಜಾಗೃತಿ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.
ಕಾರ್ಯಕ್ರಮದಲ್ಲಿ ಕೆಪಿಎಸ್ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಕೆ.ಜಂಪಣ್ಣ, ಶಿಕ್ಷಕ ರಂಗಸ್ವಾಮಿ ಹಾಗೂ ಕಾಲೇಜಿನ ಉಪನ್ಯಾಸಕರಾದ ಪ್ರೊ.ಮಾಧುರಿ, ಪ್ರೊ.ನಾಗರಾಜ್, ಪ್ರೊ. ಕಲ್ಲಪ್ಪ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
