By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆಯ ಸಮಾರೋಪ ಸಮಾರಂಭ
    ಶರಣರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಮಲ್ಲಿಕಾರ್ಜುನ ಜವಳಿ
    1 day ago
    66th Annual General Meeting of the Kavimam Employees' Cooperative Society
    ಕವಿಮಂ ನೌಕರರ ಪತ್ತಿನ ಸಹಕಾರ ಸಂಘದ 66ನೇ ವಾರ್ಷಿಕ ಮಹಾಸಭೆ
    1 day ago
    Public Service Movement Meeting
    ಅರ್ಜಿಗಳನ್ನು ರಿಜಿಸ್ಟ್ರೇಷನ್‌ಗೆ ಸೀಮಿತಗೊಳಿಸದೆ, ಸಮಸ್ಯೆಗಳಿಗೆ ಪರಿಹಾರ ನೀಡಿ | ಸಚಿವ ಟಿ.ರಘುಮೂರ್ತಿ
    2 days ago
    Hindu Maha Ganapati to be installed in Chitradurga
    ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ
    2 days ago
    chitradurga District Police
    ಶಾಂತಿಯುತ ಗೌರಿ ಗಣೇಶ ಹಬ್ಬ ಆಚರಿಸಲು ಪೊಲೀಸ್ ಇಲಾಖೆ ಮನವಿ 
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 days ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 15 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    5 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 14 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭಸುದ್ದಿ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 13 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 12 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 11 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    6 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 week ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 week ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Postpartum constipation
    ಹೆರಿಗೆಯ ನಂತರ ಮಲಬದ್ಧತೆ ಏಕೆ ಉಂಟಾಗುತ್ತದೆ? ತಿಳಿಯಿರಿ
    4 hours ago
    Plants
    ಈ 6 ಸಸ್ಯಗಳನ್ನು ನಿಮ್ಮ ದೈನಂದಿನ ಆಹಾರದಲ್ಲಿ ಸೇರಿಸಿಕೊಂಡರೆ ದೇಹದಲ್ಲಿ ಯಾವುದೇ ಪೌಷ್ಟಿಕಾಂಶದ ಕೊರತೆ ಕಾಡುವುದಿಲ್ಲವಂತೆ
    5 hours ago
    Gooseberry
    ನೆಲ್ಲಿಕಾಯಿ ತಿನ್ನುವುದು ಅಥವಾ ಹಚ್ಚುವುದು; ಕೂದಲಿಗೆ ಯಾವುದು ಹೆಚ್ಚು ಪ್ರಯೋಜನಕಾರಿ?
    1 day ago
    ghee
    ಶೀತ, ತಲೆನೋವನ್ನು ನಿವಾರಿಸಲು ತುಪ್ಪಕ್ಕೆ ಇವುಗಳನ್ನು ಮಿಕ್ಸ್ ಮಾಡಿ ಬಳಸಿ
    1 day ago
    Dark circles under the eyes
    ಕಣ್ಣುಗಳ ಕೆಳಗಿನ ಡಾರ್ಕ್ ಸರ್ಕಲ್‍ಗಳು ಏನನ್ನು ಸೂಚಿಸುತ್ತವೆ? ತಿಳಿಬೇಕಾ
    2 days ago
Reading: ತರಗತಿಗಳನ್ನು ಬಹಿಷ್ಕರಿಸಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ತರಗತಿಗಳನ್ನು ಬಹಿಷ್ಕರಿಸಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

chitradurganews.com
Last updated: 31 August 2023 09:48
chitradurganews.com
3 years ago
Share
ತರಗತಿಗಳನ್ನು ಬಹಿಷ್ಕರಿಸಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ
SHARE

ಚಿತ್ರದುರ್ಗ ನ್ಯೂಸ್:

ಶೌಚಾಲಯ, ಕುಡಿಯುವ ನೀರು, ತರಗತಿಗಳನ್ನು ಆಲಿಸಲು ಕೊಠಡಿಗಳ ಸಮಸ್ಯೆ, ಹಳ್ಳಿಗಳಿಗೆ ಕಮ್ಯುನಿಟಿ ಪೋಸ್ಟಿಂಗ್ ಹೋಗಲು ಬಸ್ ಸಮಸ್ಯೆ ಹೀಗೆ ಹತ್ತು ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಎಸ್ಸಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಗುರುವಾರ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಕಳೆದ ಹಲವು ತಿಂಗಳುಗಳಿಂದ ಇಲ್ಲಿನ ಎಲ್ಲ ಸಮಸ್ಯೆಗಳನ್ನು ಅಧಿಕಾರಿಗಳು, ಸಚಿವರು, ಶಾಸಕರಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ದನಗಳು ಇರಲು ಯೋಗ್ಯವಿಲ್ಲದ ಕೊಠಡಿಗಳನ್ನು ನಮ್ಮನ್ನು ಕೂರಿಸಿ ಪಾಠ ಮಾಡುತ್ತಿದ್ದಾರೆ. ಇವರ ಮಕ್ಕಳನ್ನು ಇಂತಹ ಸ್ಥಿತಿಯಲ್ಲಿಡುತ್ತಾರಾ ಸಾರ್ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದರು.

ಎಲ್ಲ ಸಮಸ್ಯೆಗಳು ಬಗೆಹರಿಯಬೇಕು. ಸರ್ಕಾರಿ ಮೆಡಿಕಲ್ ಕಾಲೇಜಿಗೆ ಹೇಗೆ ಹೊಸ ಕಟ್ಟಡ ಹುಡುಕಿಕೊಟ್ಟಿದ್ದಾರೋ ಅದೇ ರೀತಿ ನಮಗೂ ಬೇರೆ ಸುಸಜ್ಜಿತ ಕಟ್ಟಡ ಹುಡುಕಿಕೊಡಿ. ಅಲ್ಲೀತನ ತರಗತಿಗಳಿಗೆ ಹಾಜರಾಗುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು.

ಎರಡು ವರ್ಷಗಳ ಹಿಂದೆ ಬಿಎಸ್ಸಿ ನರ್ಸಿಂಗ್ ತರಗತಿಗಳು ಪ್ರಾರಂಭವಾಗಿದ್ದು, 120 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಕೆಲ ದಿನಗಳಲ್ಲಿ ಮತ್ತೊಂದು ಹೊಸ ಬ್ಯಾಚ್ ಬಂದರೆ ಆಗ ವಿದ್ಯಾರ್ಥಿಗಳ ಸಂಖ್ಯೆ 180ಕ್ಕೆ ತಲುಪಲಿದೆ. ಈಗ ಇರುವ ವಿದ್ಯಾರ್ಥಿಗಳೇ ಇಷ್ಟು ಕಷ್ಟಪಟ್ಟರೆ ಹೊಸ ಬ್ಯಾಚ್ ಬಂದರೆ ಹೇಗೆ ವ್ಯವಸ್ಥೆ ಮಾಡುತ್ತಾರೆ. ಆದ್ದರಿಂದ ತಕ್ಷಣ ಬದಲಿ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ನರ್ಸಿಂಗ್ ಕಾಲೇಜಿನ ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ಇಲ್ಲ. ತರಗತಿ ನಡೆಸಲು ಕೊಠಡಿಗಳೇ ಇಲ್ಲದ ಕಾರಣಕ್ಕೆ ಇರುವ ಕೊಠಡಿಗಳಲ್ಲಿ ಅಧ್ಯಯನ ಮಾಡಬೇಕಾಗಿದೆ. ಈ ಕಾರಣಕ್ಕೆ ದಿನಕ್ಕೆ ಎರಡೇ ಗಂಟೆ ಪಾಠ ಕೇಳಬೇಕಾಗಿದೆ. ಶೌಚಾಲಯ ವ್ಯವಸ್ಥೆ ಕೇಳಿದರೆ ಆಸ್ಪತ್ರೆಯ ವಾರ್ಡ್‍ಗಳಿಗೆ ಹೋಗಿ ಎನ್ನುತ್ತಾರೆ ಎಂದು ವಿದ್ಯಾರ್ಥಿಗಳು ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ಸದ್ಯ ಬಿಎಸ್ಸಿ ನರ್ಸಿಂಗ್ ಕಾಲೇಜು ತರಗತಿಗಳನ್ನು ಎಎನ್‍ಎಂ ಕಟ್ಟಡದಲ್ಲಿ ನಡೆಸುತ್ತಿದ್ದು, ಅಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್ ಕೂಡಾ ಇದೆ. ಆದ್ದರಿಂದ ಬಾಲಕರು ಅಲ್ಲಿ ತಗರತಿಗಳಿಗೆ ಹೀಗಲು ಯೋಚನೆ ಮಾಡುವಂತಾಗಿದೆ. ವಿದ್ಯಾರ್ಥಿನಿಯರು ಕೂಡ ಮುಜುಗರ ಅನುಭವಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
ಸೆಪ್ಟಂಬರ್ 1 ರಿಂದ ಬಿಎಸ್ಸಿ ವಿದ್ಯಾರ್ಥಿಗಳಿಗೆ ಕಮ್ಯುನಿಟಿ ಪೋಸ್ಟಿಂಗ್ ಆರಂಭವಾಗಲಿದೆ. ಈ ವೇಳೆ ಹಳ್ಳಿಗಳಿಗೆ ತೆರಳಬೇಕು. ಆದರೆ, ಈಗ ಇರುವ ಬಸ್ 20 ವರ್ಷ ಹಳೆಯದಾಗಿದ್ದು, ಅದನ್ನು ಬದಲಾಯಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕಿದೆ. ಈ ಎಲ್ಲಾ ವಿಷಯಗಳ ಕುರಿತಾಗಿ ಜಿಲ್ಲಾ ಶಸ್ತ್ರಚಿಕಿತ್ಸಕರು, ಡಿಎಚ್‍ಓ, ಸಚಿವರು ಸೇರಿದಂತೆ ಎಲ್ಲ ಅಧಿಕಾರಿಗಳಿಗೆ ಮಾಹಿತಿ, ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳಾದ ವಿಶ್ವನಾಥ್, ತೇಜಸ್ವಿನಿ, ಕೆ.ಜಿ.ವೀರೇಶ್, ಬಿ.ನಾಗರಾಜ್, ಪಲ್ಲವಿ, ಭೂಮಿಕಾ, ಮೇಘಾ, ಅಂಜಲಿ, ಸಹನಾ, ಐಶ್ವರ್ಯಾ, ಸುಚಿತ್ರಾ, ಮಧು, ಸಿಂಧು ಮತ್ತಿತರೆ ಸೇರಿದಂತೆ ಎಲ್ಲ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇಂದು ಜಿಲ್ಲಾಧಿಕಾರಿ ಜೊತೆ ಸಭೆ ಎಸಿ ಭರವಸೆ:

ವಿದ್ಯಾರ್ಥಿಗಳ ಪ್ರತಿಭಟನೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಉಪವಿಭಾಗಾಧಿಕಾರಿ ಕಾರ್ತಿಕ್, ಡಿಎಚ್‍ಒ ಡಾ.ಆರ್.ರಂಗನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ದೇವರಾಜ್ ವಿದ್ಯಾರ್ಥಿಗಳನ್ನು ಸಮಾಧಾನ ಮಾಡಲು ಮುಂದಾದರು. ಆದರೆ, ವಿದ್ಯಾರ್ಥಿಗಳು ಮೂಲ ಸೌಲಭ್ಯ ಸಿಗುವವರೆಗೆ ಕದಲುವುದಿಲ್ಲ ಎಂದು ಪಟ್ಟು ಹಿಡಿದಾಗ ತಕ್ಷಣಕ್ಕೆ ಎಲ್ಲ ವ್ಯವಸ್ಥೆ ಮಾಡುವುದು ಕಷ್ಟ. ಈ ಬಗ್ಗೆ ನರ್ಸಿಂಗ್ ಕಾಲೇಜು ಪ್ರಾಚಾರ್ಯರಿಂದ ವಿವರವಾದ ಮಾಹಿತಿ ಪಡೆದುಕೊಂಡು ನಾಳೆಯೇ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ತತ್‍ಕ್ಷಣಕ್ಕೆ ಆಗಬೇಕಾದ ಕೆಲಸಗಳನ್ನು ಮಾಡಿಸುತ್ತೇವೆ. ಸರ್ಕಾರಿ ಮೆಡಿಕಲ್ ಕಾಲೇಜು ಜತೆಗೆ ನರ್ಸಿಂಗ್ ಕಾಲೇಜು ಕಟ್ಟಡ, ಹಾಸ್ಟೆಲ್ ವ್ಯವಸ್ಥೆಯೂ ಆಗಲಿದೆ ಎಂದು ಭರವಸೆ ನೀಡಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ದೇವರಾಜ್ ಮಾತನಾಡಿ, ವಿದ್ಯಾರ್ಥಿಗಳು ಬೇಡಿಕೆಗಳನ್ನು ಹೇಳಿಕೊಂಡಿದ್ದಾರೆ. ನರ್ಸಿಂಗ್ ಕಾಳೇಜು ಪ್ರಾಚಾರ್ಯರಿಗೆ ಎಲ್ಲ ಬೇಡಿಕೆಗಳನ್ನು ಪಟ್ಟಿ ಮಾಡಿಕೊಂಡು ಬರಲು ಸೂಚನೆ ನೀಡಿದ್ದೇವೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ತಕ್ಷಣಕ್ಕೆ ಆಗಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡುತ್ತೇವೆ ಎಂದು ತಿಳಿಸಿದರು.

(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ  https://www.facebook.com/chitradurganews?mibextid=ZbWKwL)

—

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurganewsNursingprotestStudentsಅವ್ಯವಸ್ಥೆಚಿತ್ರದುರ್ಗನರ್ಸಿಂಗ್ಪ್ರತಿಭಟನೆವಿದ್ಯಾರ್ಥಿಗಳುಸುದ್ದಿ
Share This Article
Facebook Email Print
Previous Article A raksha bandhan of celebration everywhere ಎಲ್ಲೆಡೆ ಸಂಭ್ರಮದ ರಕ್ಷಾ ಬಂಧನ | ಚಿತ್ರದುರ್ಗದಲ್ಲಿ ಎಬಿವಿಪಿ, ದುರ್ಗಾ ವಾಹಿನಿ ಕಾರ್ಯಕರ್ತೆಯರಿಂದ ರಕ್ಷೆಯ ಸಂಕಲ್ಪ
Next Article Students took to the streets under the leadership of ABVP ಎನ್‍ಇಪಿ ರದ್ಧತಿ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಬೀದಿಗಿಳಿದ ವಿದ್ಯಾರ್ಥಿಗಳು
Leave a Comment

Leave a Reply Cancel reply

Your email address will not be published. Required fields are marked *

Postpartum constipation
ಹೆರಿಗೆಯ ನಂತರ ಮಲಬದ್ಧತೆ ಏಕೆ ಉಂಟಾಗುತ್ತದೆ? ತಿಳಿಯಿರಿ
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 15 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
Dina Bhavishya
Plants
ಈ 6 ಸಸ್ಯಗಳನ್ನು ನಿಮ್ಮ ದೈನಂದಿನ ಆಹಾರದಲ್ಲಿ ಸೇರಿಸಿಕೊಂಡರೆ ದೇಹದಲ್ಲಿ ಯಾವುದೇ ಪೌಷ್ಟಿಕಾಂಶದ ಕೊರತೆ ಕಾಡುವುದಿಲ್ಲವಂತೆ
Life Style
ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆಯ ಸಮಾರೋಪ ಸಮಾರಂಭ
ಶರಣರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಮಲ್ಲಿಕಾರ್ಜುನ ಜವಳಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up