
CHITRADURGA NEWS | 01 APRIL 2025
ಚಿತ್ರದುರ್ಗ: ಅನಧಿಕೃತ ಗೈರು ಹಾಗೂ ಕರ್ತವ್ಯದ ವೇಳೆ ಪಾನಮತ್ತರಾಗಿ ಮೇಲಾಧಿಕಾರಿಗಳೊಂದಿಗೆ ಅನುಚಿತ ವರ್ತನೆ ತೋರಿದ ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಾಧಿಕಾರಿ ಎಸ್.ಸಿದ್ದೇಶ್ವರ ಅವರನ್ನು ಅಮಾನತುಗೊಳಿಸಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
Also Read: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ | ಇಬ್ಬರು ಸಾವು | ಮೂವರಿಗೆ ಗಾಯ

ಎಸ್.ಸಿದ್ದೇಶ್ವರ ಅವರಿಗೆ ಈ ಕುರಿತು ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಮೇಲಾಧಿಕಾರಿಗಳು ಸೂಚನೆಗಳನ್ನು ಸಹ ನೀಡಿದ್ದರು. ಆದರೂ ಎಸ್.ಸಿದ್ದೇಶ್ವರ ಅವರ ವರ್ತನೆಯಲ್ಲಿ ಯಾವುದೇ ಬದಲಾವಣೆ ತೋರಲಿಲ್ಲ. ಆದ ಕಾರಣ ಆಡಳಿತಾಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ಮಾಡಿದ್ದರು.
ಈ ಹಿನ್ನಲೆಯಲ್ಲಿ ಜಿ.ಪಂ.ಸಿಇಓ ಹಾಗೂ ಶಿಸ್ತು ಪ್ರಾಧಿಕಾರದ ಅಧಿಕಾರಿಗಳಾದ ಎಸ್.ಜೆ.ಸೋಮಶೇಖರ್ ಕೆ.ಸಿ.ಎಸ್(ಸಿ.ಸಿ.ಎ) ನಿಯಮಾವಳಿ-1957ರ ನಿಯಮ -10(1)ರ ಅನ್ವಯ ಇಲಾಖೆ ವಿಚಾರಣೆ ಕಾಯ್ದಿರಿಸಿ ಎಸ್.ಸಿದ್ದೇಶ್ವರ ಅವರನ್ನು ಸೇವೆಯಿಂದ ಅಮಾನತ್ತು ಮಾಡಿದ್ದಾರೆ.
Also Read : ಖಾಲಿ ಹೊಟ್ಟೆಯಲ್ಲಿ ಈ 5 ಆಹಾರಗಳನ್ನು ಸೇವಿಸುತ್ತೀದ್ದೀರಾ…? ಹುಷಾರು!


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
