ಮುಖ್ಯ ಸುದ್ದಿ
ಸದ್ಯದಲ್ಲೇ ಅಡಿಕೆ ಬೆಳೆಗೆ ಸಬ್ಸಿಡಿ | ನರೇಗಾದಡಿ ಅಡಿಕೆ ನಾಟಿಗೆ ಚಿತ್ರದುರ್ಗ ರೈತರಿಗೂ ನೆರವು | ಜಿಪಂ ಕೆಡಿಪಿ ಸಭೆಯಲ್ಲಿ ಚರ್ಚೆ
CHITRADURGA NEWS | 26 JUNE 2024
ಚಿತ್ರದುರ್ಗ: ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯ ರೈತರಿಗೂ ಅಡಿಕೆ ಬೆಳೆಯಲು ಸರ್ಕಾರದಿಂದ ಪ್ರೋತ್ಸಾಹ ನೀಡುವ ಸಂಬಂಧ ಸದ್ಯದಲ್ಲೇ ಅನುಮೋದನೆ ಸಿಗಲಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಡಾ.ಸವಿತಾ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯುತ್ತಿರುವ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾಹಿತಿ ನೀಡಿದರು. 6 ತಿಂಗಳ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಅಡಿಕೆ ಬೆಳೆಯುವ ರೈತರಿಗೆ ಸರ್ಕಾರದಿಂದ ಸಬ್ಸೀಡಿ ನೀಡುವಂತೆ ತೀರ್ಮಾನಿಸಿ ಸರ್ಕಾರದ ಗಮನಕ್ಕೆ ತರಲು ಚರ್ಚಿಸಲಾಗಿತ್ತು.
ಕ್ಲಿಕ್ ಮಾಡಿ ಓದಿ: ಅರಣ್ಯದಲ್ಲಿ ಯುವಕನ ಶವ ಪತ್ತೆ | ಶುರುವಾಯ್ತು ತನಿಖೆ
ಈ ವಿಷಯ ಇಂದಿನ ಸಭೆಯಲ್ಲಿ ಮತ್ತೆ ಚರ್ಚೆಗೆ ಬಂದಾಗ ಮಾಹಿತಿ ನೀಡಿದ ಡಾ.ಸವಿತಾ, ಕಳೆದ ಸಂಪುಟ ಸಭೆಯಲ್ಲಿ ಅನುಮೋದನೆ ಆಗಿಲ್ಲ. ಈ ವಿಚಾರ ಕ್ಯಾಬಿನೆಟ್ ಮಟ್ಟದಲ್ಲಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯಲಿದೆ ಎಂದು ಇಲಾಖೆಯ ಕಾರ್ಯದರ್ಶಿಗಳು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಚಿತ್ರದುರ್ಗ ಜಿಲ್ಲೆಯ ರೈತರು ಅಡಿಕೆ ಬೆಳೆಯಲು ನರೇಗಾದಡಿ ನೆರವು ಹಾಗೂ ಹನಿ ನೀರಾವರಿಗೆ ಶೇ.90ರಷ್ಟು ಸಹಾಯಧನ ದೊರೆಯಲಿದೆ ಎಂದರು.
ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಪಕ್ಕದ ಚನ್ನಗಿರಿ ತಾಲ್ಲೂಕಿಗೆ ನೆರವು ಸಿಕ್ಕಿದೆ. ಅರೆಮಲೆನಾಡು ಹೊಳಲ್ಕೆರೆಗೆ ಯಾಕೆ ಕೊಡುತ್ತಿಲ್ಲ ಎಂದು ಪ್ರಶ್ನಿಸಿದರು.
ಕ್ಲಿಕ್ ಮಾಡಿ ಓದಿ: ಹಜ್ ಯಾತ್ರೆಗೆ ತೆರಳಿದ್ದ ಮಹಿಳೆ ಸಾವು | ಮೆಕ್ಕಾದಲ್ಲಿ ಅಂತ್ಯಸಂಸ್ಕಾರ
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ(ಪಪ್ಪಿ), ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಓ ಎಸ್.ಜೆ.ಸೋಮಶೇಖರ್, ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.