
CHITRADURGA NEWS | 12 OCTOBER 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಮಲ್ಲಪ್ಪನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಐಸಿಎಂಆರ್ ಮತ್ತು ಕೆಎಚ್‍ಪಿಟಿ ಸೆಂಟ್ ಜಾನ್ ಆಸ್ಪತ್ರೆ ಸಹಯೋಗದಲ್ಲಿ ಒಂದು ದಿನದ ಕೌಶಲ್ಯಾಭಿವೃದ್ಧಿ ತರಬೇತಿ ನಡೆಸಲಾಯಿತು.
ಇದನ್ನೂ ಓದಿ: RSS@100 | ಕೋಟೆನಾಡಲ್ಲಿ ಆಕರ್ಷಕ ಪಥ ಸಂಚಲನ

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಂಗಸ್ವಾಮಿ ನಾಯ್ಕ್ ಮಾತನಾಡಿ, ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಹಾಗೂ ತೊಡಕಿನ ಗರ್ಭಿಣಿಯ ಪತ್ತೆ ಹಚ್ಚುವಿಕೆ, ಗರ್ಭಿಣಿಯರ ನೋಂದಣಿ, ತಾಯಿ ಮತ್ತು ಶಿಶು ಮರಣದ ಪ್ರಮಾಣ ಕಡಿಮೆ ಮಾಡುವ ಬಗ್ಗೆ ಹಾಗೂ ಪೌಷ್ಠಿಕ ಆಹಾರ ಸೇವನೆಯಿಂದ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡಬಹುದು ಎಂದು ತಿಳಿಸಿದರು.
ಹರ್ತಿಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರತ್ನಮಾಲಾ ಅವರು ಆರೋಗ್ಯವಂತ ತಾಯಿ ಮತ್ತು ಮಗು ಈ ದೇಶದ ಸಂಪತ್ತು. ಆದ್ದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.
ಮುಂಗಡ ಗರ್ಭಿಣಿಯರ ನೋಂದಣಿ, ಗಂಡಾತರ ಗರ್ಭಿಣಿಯರು, ಹೆರಿಗೆಯ ಪೂರ್ವ ಸಿದ್ಧತೆ, ತಡವಾಗಿ ಗರ್ಭಿಣಿಯರ ನೋಂದಣಿ, ಕಾಂಗರೂ ಮದರ್ ಕೇರ್, ಸ್ತನ್ಯಪಾನ ಹಾಗೂ ವೈಯುಕ್ತಿಕ ಸ್ವಚ್ಛತೆಯ ಕುರಿತು ಐಸಿಎಂಆರ್ ತಂಡದ ಸದಸ್ಯರು ತರಬೇತಿ ನೀಡಿದರು.
ಇದನ್ನೂ ಓದಿ: ಬೇಡ ಬುಡಕಟ್ಟಿನ ಭಾಷಿಕ ಸಂಕಥನ ಕೃತಿ | ಡಾ.ಬಂಜಗೆರೆ ಜಯಪ್ರಕಾಶ್ ಲೋಕಾರ್ಪಣೆ
ಈ ತರಬೇತಿಯಲ್ಲಿ ಐಸಿಎಂಆರ್ ತಂಡದ, ಉಮೇಶ್, ಮೇಘ, ಕವನ, ಅಬ್ಬಾಸ್, ಗೋವಿಂದರಾಜ್, ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ನವೀನಕುಮಾರ್, ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳು, ಫಾರ್ಮಸಿ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
