
CHITRADURGA NEWS | 2 MARCH 2024
ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ (CIMS & RI)ಗೆ ಡೀನ್ ಹಾಗೂ ನಿರ್ದೇಶಕ ಹುದ್ದೆ ಸೃಜಿಸಿ ಡಾ.ಸಂಜೀವ್ ಜಿ.ಎಂ. ಅವರನ್ನು ನಿಯೋಜನೆ ಮಾಡಲು ಮುಂದಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿರುದ್ಧ ಕರುನಾಡ ವಿಜಯಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಡಾ. ಸಂಜೀವ್ ಚಾಮರಾಜನಗರದಲ್ಲಿ ಕರ್ತವ್ಯ ನಿರ್ವಹಿಸುವಾಗ ಅಂಬೇಡ್ಕರ್ ಮತ್ತು ದಲಿತರನ್ನು ಹಿಯಾಳಿಸಿದ್ದರು. ಈ ಬಗ್ಗೆ ದೂರು ಕೂಡಾ ದಾಖಲಾಗಿದೆ.
ಇದನ್ನೂ ಓದಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಬೆಲೆ 459 ರೂ. ಹೆಚ್ಚಳ
ಇಂಥವರನ್ನು ದಲಿತ, ಹಿಂದುಳಿದವರೇ ಹೆಚ್ಚಾಗಿರುವ ಜಿಲ್ಲೆಗೆ ಕರೆತರುವ ಸಚಿವ ಡಿ.ಸುಧಾಕರ್ ಅವರ ಕ್ರಮ ಎಷ್ಟು ಸರಿ ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಡೀನ್ ಆಗಿದ್ದ ಡಾ.ಸಂಜೀವ್ ಅಂಬೇಡ್ಕರ್ ಮತ್ತು ದಲಿತರನ್ನು ಹಿಯಾಳಿಸಿದ್ದರು. ಈ ಬಗ್ಗೆ ದೂರು ಕೂಡಾ ದಾಖಲಾಗಿದೆ. ಇಂಥವರನ್ನು ಯಾವ ಕಾರಣಕ್ಕೂ ಸರ್ಕಾರ ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ಡೀನ್ ಆಗಿ ನೇಮಕ ಮಾಡಬಾರದು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಪ್ರತ್ಯೇಕ ಚುನಾವಣಾ ಕಚೇರಿ ತೆರೆದರೆ ನಿರಾಸೆ ಕಟ್ಟಿಟ್ಟ ಬುತ್ತಿ
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಿತ್ರದುರ್ಗ ಸರ್ಕಾರಿ ಮೆಡಿಕಲ್ ಕಾಲೇಜು ಡೀನ್ ಆಗಿ ಡಾ.ಸಂಜೀವ್ ಅವರನ್ನು ನೇಮಕ ಮಾಡಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಅವರಿಗೆ ಪತ್ರ ಬರೆದಿದ್ದಾರೆ. ಪೂರ್ವಾಪರ ವಿಚಾರಗಳನ್ನು ತಿಳಿದುಕೊಳ್ಳದೆ ಏಕಾಏಕಿಯಾಗಿ ಡಾ.ಸಂಜೀವ್ ಅವರನ್ನು ಜಿಲ್ಲೆಗೆ ಕರೆತರುವುದು ಸರಿಯಲ್ಲ ಎಂದು ಹೇಳಿದರು.
ಇದನ್ನೂ ಓದಿ: ಜಲಕ್ಷಾಮದ ಸುಳಿಗೆ ಸಿಲುಕಲಿದೆ ಚಿತ್ರದುರ್ಗ
ಸುದ್ದಿಗೋಷ್ಠಿಯಲ್ಲಿ ಕರುನಾಡ ವಿಜಯಸೇನೆಯ ವೀಣಾ ಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಅಣ್ಣಪ್ಪ, ತಾಲ್ಲೂಕು ಅಧ್ಯಕ್ಷ ಸಂತೋμï, ಯುವ ಘಟಕದ ಅಧ್ಯಕ್ಷ ನಾಗರಾಜ್ ಮುತ್ತು, ನಿಸಾರ್ ಅಹಮದ್, ಸುರೇಶ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
