
CHITRADURGA NEWS | 31 JANUARY 2024
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿದ್ದ ಚಿತ್ರದುರ್ಗ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರಿಗೆ 2024 ನವೆಂಬರ್ ತಿಂಗಳಲ್ಲಿ ರಾಜ್ಯ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.
ಈಗ ಇದನ್ನು ಪ್ರಶ್ನಿಸಿ ಮೈಸೂರಿನ ಒಡನಾಡಿ ಸಂಸ್ಥೆಯ ಪರ ವಕೀಲರು ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ವಿಚ್ಚೇಧನಕ್ಕೆ ಅರ್ಜಿ ಸಲ್ಲಿಸಿದ್ದ 18 ಜೋಡಿಗಳನ್ನು ಒಂದಾಗಿಸಿದ ಲೋಕ ಅದಾಲತ್
ಮಂಗಳವಾರ ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಕ್ರಮನಾಥ್ ಹಾಗೂ ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಪ್ರಕರಣದ ವಿಚಾರಣೆಗೆ ಅಂಗೀಕಾರ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದ್ದು, ನಾಲ್ಕು ವಾರಗಳ ಕಾಲ ಗಡುವು ನೀಡಿದೆ. ಒಡನಾಡಿ ಸಂಸ್ಥೆಯ ಪರ ವಕೀಲರಾದ ಅಪರ್ಣಾ ಭಟ್ ವಾದ ಮಂಡಿಸಿದ್ದರು.
ಇದನ್ನೂ ಓದಿ: ವಸತಿ ಯೋಜನೆಗೆ 129 ಫಲಾನುಭವಿಗಳ ಆಯ್ಕೆ
ಮುರುಘಾ ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ 2022 ಆಗಸ್ಟ್ 26 ರಂದು ದೂರು ದಾಖಲಿಸಿದ್ದರು.
ಈ ಪ್ರಕರಣದ ಅಡಿಯಲ್ಲಿ 2022 ಸೆಪ್ಟಂಬರ್ 1 ರಂದು ಶ್ರೀಗಳನ್ನು ಬಂಧಿಸಲಾಗಿತ್ತು. ಒಂದು ವರ್ಷಕ್ಕಿಂತ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದ ಶರಣರಿಗೆ ಚಿತ್ರದುರ್ಗಕ್ಕೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಹೈಕೋರ್ಟ್ 2023 ನವೆಂಬರ್ ತಿಂಗಳಲ್ಲಿ ಜಾಮೀನು ಮಂಜೂರು ಮಾಡಿತ್ತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
