By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಪೊಲೀಸ್ ಕ್ರಿಕೆಟ್ ಕಪ್ | ಸಚಿವ ಡಿ.ಸುಧಾಕರ್ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಪೊಲೀಸ್ ಕ್ರಿಕೆಟ್ ಕಪ್ | ಸಚಿವ ಡಿ.ಸುಧಾಕರ್ ಚಾಲನೆ

ಮುಖ್ಯ ಸುದ್ದಿ

ಪೊಲೀಸ್ ಕ್ರಿಕೆಟ್ ಕಪ್ | ಸಚಿವ ಡಿ.ಸುಧಾಕರ್ ಚಾಲನೆ

News Desk Chitradurga News
Last updated: 11 January 2025 18:27
News Desk Chitradurga News
6 months ago
Share
Officials Police Cricket Cup
ಆಫಿಷಿಯಲ್ಸ್ ಪೊಲೀಸ್ ಕ್ರಿಕೆಟ್ ಕಪ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 11 JANUARY 2025

ಚಿತ್ರದುರ್ಗ: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಆಫಿಷಿಯಲ್ಸ್ ಪೊಲೀಸ್ ಕ್ರಿಕೆಟ್ ಕಪ್ ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.

Also Read: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ನಂತರ ಮಾತನಾಡಿದ ಸಚಿವರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸಿಗೆ ಉಲ್ಲಾಸ ದೊರೆಯವುದು. ಜತೆಗೆ ಕೆಲಸ ಮಾಡಲು ಚೈತನ್ಯವೂ ಬರಲಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ವಿವಿಧ ಇಲಾಖೆಯ ಸರ್ಕಾರಿ ನೌಕರರು ಸೇರಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿರುವುದು ಉತ್ತಮ ಬೆಳವಣಿಗೆ. ಕ್ರೀಡೆ ಜೀವನದ ಅವಿಭಾಜ್ಯ ಅಂಗ. ಕ್ರೀಡೆಯು ಮನಸ್ಸುನ್ನು ಮುದಗೊಳಿಸುವ ಜತೆಗೆ ನಮ್ಮ ಕೆಲಸಗಳ ಕಡೆ ಹೆಚ್ಚು ಮಗ್ನರಾಗಲು, ಆಸಕ್ತಿವಹಿಸಲು ಸಾಧ್ಯವಾಗಲಿದೆ. ಕ್ರೀಡೆ ಇರುವ ಕಡೆ ಯಶಸ್ಸು ಇರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕ್ರೀಡೆಯಲ್ಲಿ ಸೋಲು-ಗೆಲವು ಸಹಜ. ಇದಕ್ಕಿಂತ ಮುಖ್ಯವಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಬಹಳ ಮುಖ್ಯ ಎಂದು ತಿಳಿಸಿದ ಅವರು ಎಲ್ಲ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

Also Read: ಆರ್ಥಿಕ ಸಂಕಷ್ಟದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯ | ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಮನವಿ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಯಾವುದೇ ಇಲಾಖೆ ಇರಲಿ ಪ್ರತಿಯೊಬ್ಬರಿಗೂ ದೈಹಿಕ ಸಾಮಾಥ್ರ್ಯ ಬಹಳ ಮುಖ್ಯ. ಎಲ್ಲರಿಗೂ ದೈಹಿಕ ಸಾಮಾಥ್ರ್ಯದ ಬಗ್ಗೆ ಅರಿವು ಹಾಗೂ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಕ್ರೀಡಾಕೂಟ ಆಯೋಜಿಲಾಗಿದ್ದು, ಕ್ರೀಡಾಕೂಟಗಳಿಂದ ಉತ್ತಮ ಗೆಳೆತನ, ಬಾಂಧವ್ಯ ವೃದ್ಧಿಯಾಗಲಿದೆ ಎಂದು ತಿಳಿಸಿದರು.

ಆಫಿಷಿಯಲ್ಸ್ ಪೊಲೀಸ್ ಕ್ರಿಕೆಟ್ ಕಪ್ ಪಂದ್ಯಾವಳಿಯಲ್ಲಿ ಪೊಲೀಸ್ ಇಲಾಖೆ, ನ್ಯಾಯಾಂಗ ಇಲಾಖೆ, ಬೆಸ್ಕಾಂ, ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ, ಭದ್ರಾ ಮೇಲ್ದಂಡೆ ಯೋಜನೆ, ನಗರಸಭೆ, ಅಂಚೆ ಇಲಾಖೆ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪತ್ರಕರ್ತರ ತಂಡ ಸೇರಿದಂತೆ 16 ವಿವಿಧ ಇಲಾಖೆಯ ತಂಡಗಳು ಭಾಗವಹಿಸಿದ್ದವು.

ಪೊಲೀಸ್ ಇಲಾಖೆಗೆ ಹೊಸ ವಾಹನಗಳ ಹಸ್ತಾಂತರ: 

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ 4 ಬೊಲೆರೋ ನಿಯೋ ಹೊಸ ಮಾದರಿಯ ವಾಹನಗಳನ್ನು ಪೊಲೀಸ್ ಇಲಾಖೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹಸ್ತಾಂತರಿಸಿದರು.

Handover of new vehicles to Police Department
ಹೊಸ ವಾಹನಗಳ ಹಸ್ತಾಂತರ

ಮೊದಲ ಹಂತದಲ್ಲಿ 4 ಬೊಲೆರೋ ವಾಹನಗಳು ಹಾಗೂ ಎರಡನೇ ಹಂತದಲ್ಲಿ 4 ಬೊಲೆರೋ ನಿಯೋ ವಾಹನಗಳು ಸೇರಿದಂತೆ ಒಟ್ಟು 8 ಬೊಲೆರೋ ವಾಹನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಶಾಸಕರ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ನೀಡಿದ್ದಾರೆ.

Also Read: ಕೋಡಿ ಬಿತ್ತು ವಿವಿ ಸಾಗರ‌ | 118 ವರ್ಷಗಳ ಇತಿಹಾಸದಲ್ಲಿ 3ನೇ ಬಾರಿ‌ ದಾಖಲೆ

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್ ಉಪಾಧೀಕ್ಷಕ ಗಣೇಶ್, ಸೈಬರ್ ಕ್ರೈಂ ವಿಭಾಗದ ಪೊಲೀಸ್ ಉಪಾಧೀಕ್ಷಕ ಉಮೇಶ್ ಈಶ್ವರ್ ನಾಯ್ಕ್, ಚಿತ್ರದುರ್ಗ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ದಿನಕರ್ ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesCricket CupKannada Latest NewsKannada NewsMinister D. Sudhakarnew vehiclesOfficials Police Cricket CupPolicePolice Departmentಆಫಿಷಿಯಲ್ಸ್ ಪೊಲೀಸ್ ಕ್ರಿಕೆಟ್ ಕಪ್ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕ್ರಿಕೆಟ್ ಕಪ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಪೊಲೀಸ್ಪೊಲೀಸ್ ಇಲಾಖೆಸಚಿವ ಡಿ.ಸುಧಾಕರ್‌ಹೊಸ ವಾಹನ
Share This Article
Facebook Email Print
Previous Article ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
Next Article Home Office in Siddaramaiah ST ಪಟ್ಟಿಗೆ ಕಾಡುಗೊಲ್ಲ ಸಮುದಾಯ | ಅನುಸರಣ ವರದಿ ಶೀಘ್ರ ಕೇಂದ್ರಕ್ಕೆ | CM ಭರವಸೆ 
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up