
CHITRADURGA NEWS | 13 NOVEMBER 2025
ಚಿತ್ರದುರ್ಗ: ಸಾರ್ವತ್ರಿಕ ರಜಾ ದಿನಗಳೂ ಒಳಗೊಂಡಂತೆ ಎಲ್ಲ ದಿನಗಳಲ್ಲಿಯೂ ಅಧಿಕಾರಿಗಳು ತಪ್ಪದೆ ಕೇಂದ್ರ ಸ್ಥಾನದಲ್ಲಿರಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 13 | ಹತ್ತಿ ರೇಟ್ ಎಷ್ಟಿದೆ?
ಜಿಲ್ಲಾಧಿಕಾರಿಗಳು ಕೆಲವು ಬಾರಿ ಜಿಲ್ಲಾ ಮತ್ತು ತಾಲ್ಲೂಕು ಸ್ಥಳಗಳಲ್ಲಿ ಅನಿರೀಕ್ಷಿತ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರದೆ, ಕೇಂದ್ರ ಬಿಟ್ಟು ತೆರಳುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.
ಒಂದು ವೇಳೆ ಸರ್ಕಾರಿ ಕೆಲಸ ಕಾರ್ಯ ನಿಮಿತ್ತ ಅಥವಾ ತುರ್ತು ವೈಯಕ್ತಿಕ ಕಾರ್ಯಗಳಿಗೆ ಕೇಂದ್ರ ಸ್ಥಾನ ಬಿಡುವ ಸಂದರ್ಭಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆಯಬೇಕು, ತಪ್ಪಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸುತ್ತೋಲೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
