By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಏಪ್ರಿಲ್ 21 ರಂದು ಆರೋಗ್ಯ ಸಂಜೀವಿನ ಯೋಜನೆ ಜಾರಿ | ಸಿ.ಎಸ್.ಷಡಾಕ್ಷರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಏಪ್ರಿಲ್ 21 ರಂದು ಆರೋಗ್ಯ ಸಂಜೀವಿನ ಯೋಜನೆ ಜಾರಿ | ಸಿ.ಎಸ್.ಷಡಾಕ್ಷರಿ

ಮುಖ್ಯ ಸುದ್ದಿ

ಏಪ್ರಿಲ್ 21 ರಂದು ಆರೋಗ್ಯ ಸಂಜೀವಿನ ಯೋಜನೆ ಜಾರಿ | ಸಿ.ಎಸ್.ಷಡಾಕ್ಷರಿ

chitradurganews.com
Last updated: 15 April 2025 18:04
chitradurganews.com
2 months ago
Share
Opening Ceremony of the Games
ಕ್ರೀಡಾಕೂಟದ ಉದ್ಘಾಟನೆ ಸಮಾರಂಭ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 15 APRIL 2025

ಚಿತ್ರದುರ್ಗ: ಏಪ್ರಿಲ್ 21 ಸರ್ಕಾರಿ ನೌಕರರ ದಿನಾಚರಣೆಯಂದು ರಾಜ್ಯ ಸರ್ಕಾರ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಿದೆ. ಈಗಾಗಲೇ ಮುಖ್ಯಮಂತ್ರಿಗಳು ಯೋಜನೆ ಜಾರಿ ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಂಜೀವಿನಿ ಯೋಜನೆಯಿಂದ ಸರ್ಕಾರಿ ನೌಕರರರು ಹಾಗೂ ಅವರ ಅವಲಂಬಿತರಿಗೆ ನಗದು ರಹಿತ ಉಚಿತ ಆರೋಗ್ಯ ಸೇವೆ ದೊರಕಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಕ್ರೀಡಾಕೂಟದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ನಡುವೆಯೂ 7ನೇ ವೇತನ ಆಯೋಗ ಶಿಫಾರಸ್ಸನ್ನು ಜಾರಿ ಮಾಡಿದೆ. ಇದರೊಂದಿಗೆ ಆರೋಗ್ಯ ಸಂಜೀವಿನಿ ಯೋಜನೆಗೂ ಅನುಮತಿ ನೀಡಿದೆ ಎಂದರು.

ಇದನ್ನೂ ಓದಿ: ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಪರಿಶೀಲನೆ | ಶಾಸಕ ಕೆ.ಸಿ.ವಿರೇಂದ್ರ (ಪಪ್ಪಿ)

ಸರ್ಕಾರಿ ನೌಕರರಿಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಯಾಲರಿ ಪ್ಯಾಕಜ್ ಅಕೌಂಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಈ ಯೋಜನೆಯಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆ ಅಪಘಾತದಲ್ಲಿ ಮೃತಪಟ್ಟರೆ ರೂ.1 ಕೋಟಿ ಪರಿಹಾರ ನೀಡಲಾಗುವುದು. ಅಂಗವೈಕಲ್ಯತೆಗೆ ಒಳಗಾದರೆ ರೂ.35 ಲಕ್ಷದ ವರೆಗೆ ಪರಿಹಾರ ದೊರಕಲಿದೆ.

ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ, ಗೃಹ, ಹಾಗೂ ವಾಹನ ಸಾಲ ಸೌಲಭ್ಯ ನೀಡಲಾಗುವುದು. ಇದೇ ತಿಂಗಳ ಅಂತ್ಯಕ್ಕೆ ನಿವೃತ್ತ ಐ.ಎ.ಎಸ್ ಅಧಿಕಾರಿ ಪರ್ವೇಜ್ ಅವರ ನೇತೃತ್ವದ ಎನ್.ಪಿ.ಎಸ್ ಕಮಿಟಿ ತನ್ನ ವರದಿಯನ್ನು ಸರ್ಕಾರಕ್ಕೆ ನೀಡಲಿದೆ. ನಂತರ ಸರ್ಕಾರದ ಮನವೊಲಿಸಿ, ಎನ್.ಪಿ.ಎಸ್. ರದ್ದುಪಡಿಸಿ ಒಪಿಎಸ್ ಜಾರಿಗೊಳಿಸಲು ಪ್ರಯತ್ನಿಸುವುದಾಗಿ ಸಿ.ಎಸ್.ಷಡಾಕ್ಷರಿ ತಿಳಿಸಿದರು.

ಇದನ್ನೂ ಓದಿ:ನವಜಾತ ಶಿಶುವಿನ ಆರೈಕೆ ಮಾಡುವಾಗ ಪೋಷಕರು ಈ ತಪ್ಪುಗಳನ್ನು ಮಾಡಬೇಡಿ

ಮುಂಬರುವ ಮೇ ನಲ್ಲಿ ಶಿವಮೊಗ್ಗ ನಗರದಲ್ಲಿ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗುವುದು. ಸರ್ಕಾರಿ ನೌಕರರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಗಮನ ಹರಿಸಬೇಕು. ನೌಕರರು ಆತ್ಮ ವಂಚನೆ ಮಾಡಿಕೊಳ್ಳದೆ, ಕಚೇರಿ ಕೆಲಸಗಳನ್ನು ಶ್ರದ್ಧೆಯಿಂದ ನಿರ್ವಹಸುವಂತೆ ಸಿ.ಎಸ್.ಷಡಾಕ್ಷರಿ ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಜಿಲ್ಲೆಯ ನೌಕರ ಕ್ರೀಡಾಪಟುಗಳಿಗೆ ಸನ್ಮಾನಿಸಲಾಯಿತು. ಜಿಲ್ಲಾಧ್ಯಕ್ಷ ಮಾಲತೇಶ್ ಮುದಜ್ಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ:ಜಿಲ್ಲೆಯಲ್ಲಿ ಭರ್ಜರಿ ಮಳೆ | ಅಡಿಕೆ ತೋಟ, ಮನೆ, ವಿದ್ಯುತ್‌ ಕಂಬಕ್ಕೆ ಹಾನಿ

ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪವಿಭಾಗಾಧಿಕಾರಿ ಮಹಿಬೂಬ್ ಜಿಲಾನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ಎಂ.ನೆಲವಗಿ ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವಿವಿಧ ಪದಾಧಿಕಾರಿಗಳು, ತಾಲ್ಲೂಕು ನೌಕರರ ಸಂಘದ ಅಧ್ಯಕ್ಷರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Chitradurganewscs shadakshariKannada NewsKarnataka GovernmentNPSOPSಆರೋಗ್ಯ ಸಂಜೀವಿನಿಎನ್‍ಪಿಎಸ್ಏಪ್ರಿಲ್ಒಪಿಎಸ್ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಚಿತ್ರದುರ್ಗ ನ್ಯೂಸ್ಮುಖ್ಯಮಂತ್ರಿಸಿ.ಎಸ್‌.ಷಡಾಕ್ಷರಿಸಿದ್ದರಾಮಯ್ಯ
Share This Article
Facebook Email Print
Previous Article Bank Janardhan ಹೊಳಲ್ಕೆರೆಯ ನಂಟು ಬಿಟ್ಟು ಹೋದ ಹಾಸ್ಯ ನಟ ಬ್ಯಾಂಕ್ ಜನಾರ್ದನ್ 
Next Article Power outage on May 1 ನಾಳೆ ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up