
CHITRADURGA NEWS | 13 JUNE 2024
ಚಿತ್ರದುರ್ಗ: ನನ್ನ ಚೊಚ್ಚಲ ಕೃತಿಗಳಾದ ಕಂಡುಂಡ ಕಥೆಗಳು ಹಾಗೂ ಮೂಕ ಲಹರಿ ಕೃತಿಗಳನ್ನು ಜೂ.16 ಭಾನುವಾರ ಬೆಳಗ್ಗೆ 11 ಗಂಟೆಗೆ ನಗರದ ತ.ರಾ.ಸು. ರಂಗಮಂದಿರದಲ್ಲಿ ಲೋಕಾರ್ಪಣೆಯಾಗಲಿವೆ ಎಂದು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಡಾ.ದೊಡ್ಡಮಲ್ಲಯ್ಯ ತಿಳಿಸಿದರು.
ಇದನ್ನೂ ಓದಿ: ಅನಗತ್ಯವಾಗಿ ಎಂಎಲ್‍ಸಿ ಮಾಡಬೇಡಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನನ್ನ ಸಾಹಿತ್ಯ ಕೃತಿಯ ಮೊದಲ ಕೃತಿಗಳು ಇವಾಗಿದ್ದು, ನನ್ನ ಬಾಲ್ಯದ ಅನುಭವಗಳ ಆಧರಿಸಿದ ಕಂಡುಂಡ ಕಥೆಗಳು ಕೃತಿಯಾಗಿದ್ದರೆ, ಮೂಕ ಲಹರಿಯಲ್ಲಿ ನನ್ನ ಪಶುವೈದ್ಯಕೀಯ ವೃತ್ತಿಯಲ್ಲಿನ ವಿಶೇಷ ಘಟನೆಗಳನ್ನು ದಾಖಲಿಸಿದ್ದೇನೆ ಎಂದರು.
ಎರಡೂ ಕೃತಿಗಳ ಲೋಕಾರ್ಪಣೆ ಸಮಾರಂಭವನ್ನು ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಉದ್ಘಾಟಿಸುತ್ತಾರೆ. ಅಪರ ಜಿಲ್ಲಾಧಿಕಾರಿ ಬಿ.ಟಿ. ಬಿ.ಟಿ.ಕುಮಾರಸ್ವಾಮಿ ಕೃತಿ ಬಿಡುಗಡೆ ಮಾಡುವರು. ಅಭಿರುಚಿ ಸಹ ಸಂಚಾಲಕರಾದ ಸಾಹಿತಿ ಸಿ.ಸೋಮಶೇಖರಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನೂ ಓದಿ: ತಿಪ್ಪಾರೆಡ್ಡಿ ಅಂದ್ರೆ ನೀವೇನಾ..!? | ಪ್ರತಿಭಟನೆ ಮಾಡಿದ್ದಕ್ಕೆ ಬಂತು ಬೆದರಿಕೆ ಕರೆ
ಕೃತಿಗಳ ಕುರಿತು ಸಾಹಿತಿಗಳಾದ ಪ್ರೊ.ಬಿ.ಪಿ.ವೀರೇಂದ್ರಕುಮಾರ್ ಮತ್ತು ಬೆಂಗಳೂರಿನ ಮಂಜುನಾಥ್ ಎಂ ಅದ್ದೆ ಮಾತನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಪಶುವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷರಾದ ಡಾ.ಶಿವಶರಣಪ್ಪ ಯಲಗೋಡು, ಕನ್ನಡ ಪಶುವೈದ್ಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಎಸ್.ಬಿ.ರವಿಕುಮಾರ್, ಕರ್ನಾಟಕ ಪಶುವೈದ್ಯಕೀಯ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಡಾ.ಎಸ್.ಕಲ್ಲಪ್ಪನವರು ಹಾಗೂ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಸಮಾಜಶಾಸ್ತ್ರದ ಪ್ರಾಧ್ಯಾಪಕರಾದ ಸಿ.ಜಿ.ಲಕ್ಷ್ಮೀಪತಿಯವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಹಿತಿಗಳಾದ ಪ್ರೊ.ಲಿಂಗಪ್ಪ, ಶೈಲಾಜಯಕುಮಾರ್ ಹಾಗೂ ಬೆಳಗಟ್ಟ ನಾಗರಾಜ ಅವರನ್ನು ಸನ್ಮಾನಿಸಲಾಗುವುದು ಎಂದರು.
ಇದನ್ನೂ ಓದಿ: ರೇಣುಕಸ್ವಾಮಿ ಕೊಲೆ ಖಂಡಿಸಿ (X) ಟ್ವಿಟರ್ ಅಭಿಯಾನ |# Justice For Renukaswamy
ಸುದ್ದಿಗೋಷ್ಟಿಯಲ್ಲಿ ನಿವೃತ್ತ ಶಿಕ್ಷಕ ದಾಸೇಗೌಡ, ಗೋವಿಂದರಾಜು, ಯೂಸೂಫ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
