ಮುಖ್ಯ ಸುದ್ದಿ
Protest; ಸೆ.26 ರಂದು ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ | ಕೆಲಸ ಬಹಿಷ್ಕರಿಸಿ ಪ್ರತಿಭಟಿಸಲು ತೀರ್ಮಾನ
CHITRADURGA NEWS | 22 SEPTEMBER 2024
ಚಿತ್ರದುರ್ಗ: ವಿವಿಧ ಬೇಡಿಕೆ, ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ ಸೆ.26 ರಂದು ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಕೆಲಸ ಬಹಿಷ್ಕರಿಸಿ(boycott work ) ರಾಜ್ಯದಾದ್ಯಂತ ಮುಷ್ಕರ(Protest) ಕೈಗೊಳ್ಳಲಾಗುವುದು ಎಂದು ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಯೋಗೀಶ್ ನಾಯ್ಕ್ ಹೇಳಿದರು.
ಕ್ಲಿಕ್ ಮಾಡಿ ಓದಿ: Dasara Holidays 2024: ಘೋಷಣೆಯಾಯ್ತು ದಸರಾ ರಜೆ | ಯಾವಾಗಿಂದ ಆರಂಭ, ಎಷ್ಟು ದಿನ ?
ಇಲ್ಲಿನ ಪತ್ರಿಕಾಭವನದಲ್ಲಿ ಭಾನುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು.
ಚಿತ್ರದುರ್ಗದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ರಾಜಕಾರಣಿ ಸಭೆಯಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಯಿತು.
ಕ್ಷೇತ್ರಗಳಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳಿಗೆ ಯಾವುದೇ ರೀತಿಯ ಮೂಲಭೂತ ಸೌಲಭ್ಯ ಇಲ್ಲದೆ ಕಾರ್ಯ ನಿರ್ವಹಿಸುತ್ತಿದ್ದಾರೆ, ಕೆಲಸದ ಒತ್ತಡವು ಹೆಚ್ಚಾಗಿದ್ದು ಸರ್ಕಾರದಿಂದ ಯಾವುದೇ ಸೌಲಭ್ಯಗಳು ದೊರೆತಿಲ್ಲ.
ಕೆಲಸದ ಒತ್ತಡದಿಂದ ಕಾರ್ಯನಿರ್ವಹಿಸಲು ಆಗದೆ ಅಧಿಕಾರಿಗಳು ಸಾವು ನೋವು ಉಂಟಾಗಿದೆ.
ಕ್ಲಿಕ್ ಮಾಡಿ ಓದಿ: Kannada novel: 4. ಮೈಲಾರಲಿಂಗಸ್ವಾಮಿ ಗುಡಿ ನಿರ್ಮಾಣ
ಬೆಳಿಗ್ಗೆ 6 ಗಂಟೆಯಿಂದ ಸಂಜೆ 8 ಗಂಟೆಯವರೆಗೆ ಕೆಲಸ ನಿರ್ವಹಿಸುತ್ತಿದ್ದು, ನಮಗೆ ಸರ್ಕಾರ ಯಾವುದೇ ರೀತಿಯ ಸೌಲಭ್ಯ ನೀಡುತ್ತಿಲ್ಲ ಆದ್ದರಿಂದ ಮುಸ್ಕರ ಕೈಗೊಳ್ಳಲಾಗಿದೆ.
ಗ್ರಾಮ ಆಡಳಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಬಗೆಯ ಮೊಬೈಲ್ ಆಪ್‍ಗಳನ್ನು ಸ್ಥಗಿತಗೊಳಿಸಲಾಗುವುದು.
ಮುಂದಿನ ದಿನಗಳಲ್ಲಿ ಯಾವುದೇ ಮೂಲಭೂತ ಸೌಲಭ್ಯ ಕಲ್ಪಿಸದೆ ಹೋದಲ್ಲಿ ಅನಿರ್ದಿಷ್ಟವಧಿ ಸತ್ಯಾಗ್ರಹ ನಡೆಸಲಾಗುವುದು ಎಂದು ಹೇಳಿದರು.
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಸೆ.26 ರಿಂದ ಇಡೀ ರಾಜ್ಯದಾದ್ಯಂತ ಕೆಲಸ ಬಹಿಷ್ಕರಿಸಿ ಮುಷ್ಕರ ನಡೆಸಲು ಸೆ.22ರಂದು ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಕ್ಲಿಕ್ ಮಾಡಿ ಓದಿ: Taralabalu mata sirigere: ತರಳಬಾಳು ಮಠ ಸರ್ವಜನಾಂಗದ ಶಾಂತಿಯ ತೋಟ | ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
ಪತ್ರಿಕಾಗೋಷ್ಠಿಯಲ್ಲಿ ಗ್ರಾಮ ಆಡಳಿತಧಿಕಾರಿಗಳ ಸಂಘದ ಉಪಾಧ್ಯಕ್ಷ ಹರೀಶ್, ಗೌರವ್ಯಾಧ್ಯಕ್ಷ ಪಾಂಡುರಂಗಪ್ಪ, ಖಜಾಂಚಿ ರುದ್ರೇಶ್, ಶಿವಾನಂದ ನಾಯ್ಕ್, ರಘುಪತಿ, ಗಂಗಾಧರ್ ಭಾಗವಹಿಸಿದ್ದರು.