CHITRADURGA NEWS | 12 MARCH 2024
ಚಿತ್ರದುರ್ಗ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಶೇ 3.75 ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿ ಆದೇಶಿಸಿದೆ. ಜಿಲ್ಲೆಯ 18 ಸಾವಿರಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಲಾಭವಾಗಿದೆ.
2024 ರ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇ.42.5 ಕ್ಕೆ ಹೆಚ್ಚಳ ಮಾಡಿ (ಅಂದರೆ ಶೇ.3.75 ರಷ್ಟು ) ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಕ್ಲಿಕ್ ಮಾಡಿ ಓದಿ: https://chitradurganews.com/victory-yatra-of-karataka-damanaka/

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೂ ಮಂಜೂರು ಮಾಡಿರುವ ತುಟ್ಟಿಭತ್ಯೆ ಅನ್ವಯವಾಗುತ್ತದೆ ಎಂದು ಆರ್ಥಿಕ ಇಲಾಖೆ (ಸೇವೆಗಳು-2) ಜಂಟಿ ಕಾರ್ಯದರ್ಶಿ ಕೆ.ಉಮಾ ಆದೇಶದಲ್ಲಿ ತಿಳಿಸಿದ್ದಾರೆ.
2024 ರ ಜನವರಿ 1 ರಿಂದ ಮಂಜೂರು ಮಾಡಿರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಪಾವತಿ ಮಾಡುವಂತೆ ತಿಳಿಸಲಾಗಿದೆ. ತುಟ್ಟಿಭತ್ಯೆ ಬಾಕಿ ಮೊತ್ತವನ್ನು 2024 ರ ಮಾರ್ಚ್ ವೇತನ ಬಟವಾಡೆಗೂ ಮೊದಲು ಪಾವತಿ ಮಾಡಬಾರದೆಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಕ್ಲಿಕ್ ಮಾಡಿ ಓದಿ: https://chitradurganews.com/rescheduling-of-charges-against-muruga-sharanru/
ಯಾವ ವೇತನ ಶ್ರೇಣಿಯವರಿಗೆ ಎಷ್ಟು ತುಟ್ಟಿಭತ್ಯೆ ಲಭ್ಯವಾಗಲಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ. ಉದಾಹರಣೆಗೆ ನೌಕರರೊಬ್ಬರಿಗೆ ಮೂಲ ವೇತನ 17,000 ರೂ. ಇದ್ದು, ಅದಕ್ಕೆ ಶೇ.42.5 ತುಟ್ಟಿಭತ್ಯೆ ಎಂದರೆ 7,225 ರೂ. ದೊರೆಯಲಿದೆ. ತುಟ್ಟಿಭತ್ಯೆ 38.75 % ಇದ್ದಾಗ 6558 ರೂ. ಸಿಗುತ್ತಿದ್ದ ಮೊತ್ತ ಈಗ 638 ರೂ. ಹೆಚ್ಚಲಿದೆ. ಹೀಗೆ ಯಾವ ವೇತನ ಶ್ರೇಣಿಯವರಿಗೆ ಎಷ್ಟು ಡಿಎ ಸಿಗಲಿದೆ ಎಂಬುದರ ಪಟ್ಟಿ ಇಲ್ಲಿದೆ. ಮೂಲ ವೇತನ 1.50 ಲಕ್ಷ ಇದ್ದರೆ, 5600 ರೂ ತುಟ್ಟಿಭತ್ಯೆ ಹೆಚ್ಚುವರಿಯಾಗಿ ಸಿಗಲಿದೆ.
ರಾಜ್ಯ ಸರ್ಕಾರಕ್ಕೆ ತುಂಬು ಹೃದಯದ ಧನ್ಯವಾದ ತಿಳಿಸುತ್ತೇವೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಷಡಾಕ್ಷರಿ ಅವರು ಸೋಮವಾರ ಸಂಜೆ ಕೇಂದ್ರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಶೇ.4 ರಷ್ಟು ಡಿಎ ಹೆಚ್ಚಿಸಲು ಬೇಡಿಕೆ ಇಟ್ಟಿದ್ದರು. ಕೇವಲ ಆರು ಗಂಟೆಯಲ್ಲಿ ರಾಜ್ಯ ಸರ್ಕಾರ ಶೇ.3.75% ರಷ್ಟು ಡಿಎ ಹೆಚ್ಚಳ ಮಾಡುವ ಮೂಲಕ ಒಳ್ಳೆಯ ಸುದ್ದಿ ನೀಡಿದೆ.
| ಕೆ.ಟಿ.ತಿಮ್ಮಾರೆಡ್ಡಿ, ಜಿಲ್ಲಾಧ್ಯಕ್ಷರು, ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
